ಜನವರಿ 14: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ.

ಬೆಂಗಳೂರು, ಜನವರಿ 14: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ರಾಜ್ಯದ ಮೂರು ಪ್ರಬಲ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡುವುದರಲ್ಲಿ ನಿರತವಾಗಿವೆ. ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಪಕ್ಷವು ಈಗಾಗಲೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿಯು ಫೆಬ್ರುವರಿಯಲ್ಲಿ ತನ್ನ ಮೊದಲ ಪಟ್ಟಿಯನ್ನು ಸಿದ್ದಪಡಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್‌ ಪಕ್ಷವು ಜನವರಿ ಕೊನೆಯ ವಾರದಲ್ಲಿ ಮೊದಲ ಪಟ್ಟಿಯನ್ನು ಸಿದ್ದಪಡಿಸಲಿದೆ. ಇದನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌ನ 36 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಬಿಸಿ ಎದುರಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಒಂದೇ ಕ್ಷೇತ್ರದಲ್ಲಿ ಹಲವಾರು ಅರ್ಜಿತನ್ನದೇ ಆದ ಹಾಲಿ ಶಾಸಕರನ್ನು ಹೊಂದಿರುವ 36 ಕ್ಷೇತ್ರಗಳಲ್ಲಿ ಹಲವಾರು ಅರ್ಜಿಗಳನ್ನು ಕರ್ನಾಟಕ ಕಾಂಗ್ರೆಸ್ ಸ್ವೀಕರಿಸಿದೆ. ಆ ಮೂಲಕ ಒಂದೇ ಕ್ಷೇತ್ರದಲ್ಲಿ ಹಲವರು ಆಕಾಂಕ್ಷಿಗಳು ಟಿಕೆಟ್‌ಗಾಗಿ ಹರಸಾಹಸ ನಡೆಸುತ್ತಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಪಕ್ಷಕ್ಕೆ ಅಭ್ಯರ್ಥಿಗಳ ಆಯ್ಕೆಯೇ ಕಷ್ಟಕರ ಕೆಲಸವಾಗಿದೆ.

ಕಾಂಗ್ರೆಸ್ ಪ್ರಸ್ತುತ 70 ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ 34 ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಂದ ಒಂದೇ ಅರ್ಜಿ ಬಂದಿದೆ. ಅಲ್ಲಿ ಅವರಿಗೆ ಯಾವುದೇ ಪೈಪೋಟಿ ಇಲ್ಲ. ಆದರೆ, ಉಳಿದ 36 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕರು ಟಿಕೆಟ್‌ಗಾಗಿ ಪರದಾಡುವಂತಾಗಿದೆ. ಕಾರಣ, ಅಲ್ಲಿನ ಸ್ಥಳೀಯ ಪ್ರಭಾವಿ ಮುಖಂಡರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಮುಖಂಡರಿಂದ ಹಾಲಿ ಶಾಸಕರು ಪೈಪೋಟಿ ಎದುರಿಸುವಂತಾಗಿದೆ. ಇದು ಹಾಲಿ ಶಾಸಕರನ್ನು ಇಕ್ಕಟ್ಟಿಗೆ ಸಿಲುಕಿಸಿರುವುದಂತೂ ಹೌದು.

36 ಕ್ಷೇತ್ರಗಳಲ್ಲಿ ಎಷ್ಟು ಅರ್ಜಿ?

ಈ 36 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ತಲಾ ಎರಡು ಅರ್ಜಿಗಳು ಕೆಪಿಸಿಸಿ ಕಚೇರಿಗೆ ಬಂದಿವೆ. ಹಾಲಿ ಶಾಸಕರು ಹಾಗೂ ಒಬ್ಬ ಸ್ಥಳೀಯ ಮುಖಂಡರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. 23 ಕ್ಷೇತ್ರಗಳಲ್ಲಿ ಮೂರರಿಂದ 16 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಇದು ಹಾಲಿ ಶಾಸಕರಿಗೆ ಭಾರೀ ಇಕ್ಕಟ್ಟನ್ನು ತಂದೊಡ್ಡಿದೆ. ಯಾವ ಮಾನದಂಡಗಳನ್ನು ಇಟ್ಟುಕೊಂಡು ಯಾರಿಗೆ ಟಿಕೆಟ್‌ ದೊರೆಯಲಿದೆ ಎಂಬುದು ಇನ್ನೆರಡು ವಾರಗಳಲ್ಲಿ ಗೊತ್ತಾಗಲಿದೆ. ಅಲ್ಲಿಯವರೆಗೆ ಕಾದುನೋಡುವುದು ಆಕಾಂಕ್ಷಿಗಳಿಗೆ ಅನಿವಾರ್ಯವಾಗಿದೆ.

ಸೂಕ್ತ ಅಭ್ಯರ್ಥಿ ಆಯ್ಕೆಯೇ ಗೆಲುವಿಗೆ ನಿರ್ಣಾಯಕ

ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದರು. ಪಕ್ಷವು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2 ಲಕ್ಷ ರೂಪಾಯಿ ಮತ್ತು ಎಸ್‌ಸಿ/ಎಸ್‌ಟಿಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ಚೆಕ್‌ ಅನ್ನು ಕೆಪಿಸಿಸಿ ಪಡೆದಿದೆ. ಇದನ್ನು ಹೊರತುಪಡಿಸಿ ಅರ್ಜಿ ಶುಲ್ಕವಾಗಿ 5,000 ರೂಪಾಯಿಗಳನ್ನು ಅಭ್ಯರ್ಥಿಗಳು ನೀಡಿದ್ದಾರೆ. ಕಳೆದ ತಿಂಗಳು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಪಕ್ಷ ಪ್ರತಿನಿಧಿಸುವ ಕ್ಷೇತ್ರಗಳಲ್ಲಿಯೂ ಅರ್ಜಿ ಆಹ್ವಾನಿಸುವ ನಿರ್ಧಾರದ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಸೂಕ್ತ ಅಭ್ಯರ್ಥಿ ಆಯ್ಕೆಯೇ ಗೆಲುವಿಗೆ ನಿರ್ಣಾಯಕ ಎಂದು ಡಿಕೆಶಿ ಪ್ರತಿಪಾದಿಸಿದ್ದಾರೆ.

ಕುಂದಗೋಳ ಟಿಕೆಟ್‌ಗಾಗಿ 16 ಅರ್ಜಿ

ಕುಂದಗೋಳ ಟಿಕೆಟ್‌ಗಾಗಿ 16 ಟಿಕೆಟ್ ಅರ್ಜಿಗಳು ಬಂದಿದ್ದು, ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ಆಕಾಂಕ್ಷಿಗಳನ್ನು ಹೊಂದಿರುವ ಕ್ಷೇತ್ರ. ಇದರಲ್ಲಿ ಕೆಪಿಸಿಸಿ ಪದಾಧಿಕಾರಿ ಕುಸುಮಾ ಶಿವಳ್ಳಿ ಪ್ರಮುಖರಾದ್ದಾರೆ. ಲಿಂಗಸುಗೂರು ಮತ್ತು ಹರಿಹರ ತಲಾ ಒಂಬತ್ತು ಅರ್ಜಿಗಳು ಬಂದಿವೆ. ಪಾವಗಡ ಎಂಟು, ಅಫಜಲಪುರ, ಬೀದರ್, ಹಗರಿಬೊಮ್ಮನಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ ಏಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಮಿತ್ ಶಾ ಹೊಂದಾಣಿಕೆ ರಾಜಕೀಯ ಬಿಜೆಪಿಗೆ ಬೇಡ ಅಂತಾರೆ.

Sat Jan 14 , 2023
ಕೇಂದ್ರ ಗೃಹ ಸಚಿವ ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ, ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಬಿಜೆಪಿ ಎಂಎಲ್ ಸಿ ಯೋಗೇಶ್ವರ್ ಮಾತನಾಡಿರುವ ಆಡಿಯೋವೊಂದು ಲೀಕ್ ಆಗಿದೆ ರಾಮನಗರ: ಕೇಂದ್ರ ಗೃಹ ಸಚಿವ ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ, ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಬಿಜೆಪಿ ಎಂಎಲ್ ಸಿ ಯೋಗೇಶ್ವರ್ ಮಾತನಾಡಿರುವ […]

Advertisement

Wordpress Social Share Plugin powered by Ultimatelysocial