ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಿಟಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಭರಾಟೆ ಜೋರಾಗಿದೆ.
ನಾನಾ ಸರ್ಕಸ್​ಗಳನ್ನು ಮಾಡುತ್ತಿವೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ಕಸರತ್ತು ಮಾಡುತ್ತಿದೆ. ಹೀಗಾಗಿ ಆಗಾಗ ರಾಜ್ಯಕ್ಕೆ ಕೇಂದ್ರದ ನಾಯಕರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ನಿನ್ನೆ ಅಷ್ಟೇ ಶಿವಮೊಗ್ಗ ಮತ್ತು ಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸಿ ವಿವಿಧ ಕಾಮಗಾರಿಗೆ ಉದ್ಘಾಟಿಸಿದ್ದಾರೆ. ಇದೀಗ ಮತ್ತೆ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ನೀಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾ.3ರಂದು ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್‌ ಅಧಿಕಾರಿಗಳಿಂದ ಸರಣಿ ಸಭೆ ನಡೆಯುತ್ತಿದೆ. ಅಮಿತ್‌ ಶಾ ಬೆಂಗಳೂರಿಗೆ ಭೇಟಿ ಹಾಗೂ ಚುನಾವಣೆ ತಯಾರಿ ಸಂಬಂಧ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸರಣಿ ಸಭೆ ನಡೆಯುತ್ತಿದೆ. ಇದೀಗ ಡಿಜೆ ಮತ್ತು ಐಜಿಪಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಯುತ್ತಿದೆ.

ಮಾರ್ಚ್‌ 3ರಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಆಗಮಿಸಲಿದ್ದು, ಇದೇ ವೇಳೆ ಕಮಿಷನರ್‌ ಕಚೇರಿಯ ಕಮಾಂಡ್‌ ಸೆಂಟರ್‌ ಗೆ ಭೇಟಿ ನೀಡಲಿದ್ದಾರೆ. ನಂತರ ಸೇಫ್‌ ಸಿಟಿ ಪ್ರಾಜೆಕ್ಟ್‌ ಚಾಲನೆ ನೀಡಲಿದ್ದಾರೆ. ಈ ಸಭೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಚ್‌ಎಎಲ್ ವಿಮಾನ ನವೀಕರಣಕ್ಕೆ ಡಿಜಿಸಿಎ ಒಪ್ಪಿಗೆ.

Tue Feb 28 , 2023
  ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ’ಮೇಡ್ ಇನ್ ಇಂಡಿಯಾ’ ಯೋಜನೆಯಡಿಯಲ್ಲಿ ’ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್” (ಎಚ್ ಎಎಲ್) ನಿರ್ಮಿತ ವಿಮಾನದ ನವೀಕರಣಕ್ಕೆ ನಾಗರೀಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ.ಎಚ್ ಎಎಲ್ ನಿಂದ ’ಹಿಂದೂಸ್ತಾನ್ ೨೨೮-೨೦೧ ಎಲ್ ಡಬ್ಲ್ಯು’ ವಿಮಾನದ ಹೊಸ ರೂಪಾಂತರವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಅನುಮೋದಿಸಿದೆ.ಇನ್ನೂ, ೨೨೮-೨೦೧ ಎಲ್ ಡಬ್ಲ್ಯು ವಿಮಾನದ ಹೊಸ ರೂಪಾಂತರವೂ ೧೯ ಪ್ರಯಾಣಿಕರ ಸಾಮರ್ಥ್ಯದ ವಿಮಾನವು ೫,೬೯೫ ಕೆಜಿ ಗರಿಷ್ಠ ಟೇಕ್-ಆಫ್ ತೂಕವನ್ನು […]

Related posts

Advertisement

Wordpress Social Share Plugin powered by Ultimatelysocial