ವರುಣಾ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:

ವರುಣಾ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:

ಬಹಳ ಸಂತೋಷದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ. ಬಹಳ ಸಮಯಗಳ ಕಾಲ ಎಚ್.ಸಿ. ಮಹದೇವಪ್ಪ ಅವರು ಈ ಭಾಗದ ಜನಪ್ರತಿನಿಧಿಯಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರು ಪಿಡಬ್ಲ್ಯೂಡಿ ಸಚಿವರಾಗಿದ್ದಾಗ ಅತ್ಯುತ್ತಮವಾಗಿ ಕೆಲಸ ಮಾಡಿದ್ದರು.

ಈ ಭಾಗದ ಜನ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಕ್ಕೆ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯ ಅವರನ್ನು ಕೊಟ್ಟಿದೆ. ನಾನು ಆಗಾಗ್ಗೆ ಒಂದು ಮಾತು ಹೇಳುತ್ತೇನೆ. ದೇವರು ವರವನ್ನು ನೀಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶವನ್ನು ಮಾತ್ರ ನೀಡುತ್ತಾನೆ. ಆದರೆ ನಿಮಗೆ ಕೊಟ್ಟಿರುವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಅನೇಕ ಸಾಧನೆ ಮಾಡಿದ್ದಾರೆ. ಅದಕ್ಕೆ ನೀವೆಲ್ಲರೂ ಕಾರಣ.

ನಾವು ಅನೇಕ ಬಾರಿ ಗೆದ್ದಿರಬಹುದು, ಗೆಲುವಿಗಿಂತ ನಮಗೆ ಅಧಿಕಾರ ಇದ್ದಾಗ ಜನರ ಬದುಕಿನಲ್ಲಿ ಯಾವ ಬದಲಾವಣೆ ತರುತ್ತೇವೆ ಎಂಬುದು ಮುಖ್ಯ. ಈ ರಾಜ್ಯ ಅನೇಕ ಮುಖ್ಯಮಂತ್ರಿಗಳನ್ನು ಕಂಡಿದೆ. ಎಲ್ಲರನ್ನು ಜನ ನೆನೆಸಿಕೊಳ್ಳುವುದಿಲ್ಲ. ಯಾರು ತಮ್ಮ ಕಾಲದಲ್ಲಿ ಜನರಿಗೆ ಕೊಡುಗೆ ನೀಡಿತ್ತಾರೋ ಅವರನ್ನು ಸ್ಮರಿಸುತ್ತಾರೆ.

ಬೆಂಗಳೂರು ಮೈಸೂರು ಹೆದ್ದಾರಿಯನ್ನು ಆಸ್ಕರ್ ಫರ್ನಾಂಡಿಸ್ ಅವರು ಯುಪಿಎ ಸರಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದಾಗ ಮಂಜೂರು ಮಾಡಿದ್ದರು. ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರು ಈ ರಸ್ತೆ ಮಂಜೂರು ಮಾಡಿಸಿದ್ದರು. ಈ ರಸ್ತೆ ಆದ ನಂತರ ಮಂಡ್ಯ, ಮೈಸೂರು, ಕೊಡಗು ಭಾಗದ ಚಿತ್ರಣ ಬದಲಾಗಲಿದೆ. ಈ ರಸ್ತೆಯಿಂದ ಈ ಭಾಗದ ಜಮೀನಿಗೆ ಮೂರ್ನಾಲ್ಕು ಪಟ್ಟು ಬೆಲೆ ಹೆಚ್ಚಾಗಿದೆ.

ಕಾಂಗ್ರೆಸ್ ಪಕ್ಷ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ, ಬ್ಯಾಂಕ್ ರಾಷ್ಟ್ರೀಕರಣ, ಬಿಸಿಯೂಟ, ಅನ್ನಭಾಗ್ಯ, ಶಿಕ್ಷಣ, ವಸತಿ, ಉಚಿತ ವಿದ್ಯುತ್ ಸೇರಿದಂತೆ ಬಡವರ ಬದುಕಲ್ಲಿ ಬದಲಾವಣೆ ತರುವ ಅನೇಕ ಕಾರ್ಯಕ್ರಮ ನೀಡಿದೆ. ಈ ಪ್ರಜಾಧ್ವನಿ ಯಾತ್ರೆ ಮಾಡುತ್ತಿರುವುದು ಜನರ ಸಮಸ್ಯೆ ಆಲಿಸಲು. ಅದಕ್ಕೆ ಪರಿಹಾರ ನೀಡಲು. ಈ ಭಾಗದಲ್ಲಿ ಯತೀಂದ್ರ ಅವರು ಶಾಸಕರಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಡಿಪಾಯ. ಇದನ್ನು ನಾವು ಮರೆಯುವುದಿಲ್ಲ.

ನಾನು ಸಿದ್ದರಾಮಯ್ಯ ಅವರು ಪ್ರಜಾಧ್ವನಿ ಯಾತ್ರೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಮುಗಿಸಿ ಈಗ ತಾಲೂಕು ಕೇಂದ್ರಗಳಲ್ಲಿ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದರೆ ನಾನು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಉತ್ತರ ಭಾಗದ ಜಿಲ್ಲೆಗಳಿಗೆ ಹೋದರೆ, ಸಿದ್ದರಾಮಯ್ಯ ಅವರು ದಕ್ಷಿಣ ಭಾಗದ ಜಿಲ್ಲೆಗಳಿಗೆ ಬರಲಿದ್ದಾರೆ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯಾತ್ರೆ ಮಾಡುತ್ತಿದ್ದೇವೆ.

ಬಿಜೆಪಿಯವರು ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು. ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು. ಯಾವುದನ್ನೂ ಮಾಡಲಿಲ್ಲ. ರೈತರಿಗೆ ಆದಾಯ ಡಬಲ್ ಮಾಡುತ್ತೇವೆ ಎಂದವರು ರಸಗೊಬ್ಬರ ಬೆಲೆ ಏರಿಸಿ, ರೈತರ ಬೆಳೆಗಳ ಬೆಲೆ ಕಡಿಮೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು 165 ಭರವಸೆ ನೀಡಿದ್ದು, 158 ಈಡೇರಿಸಿದ್ದೆವು. ಬಿಜೆಪಿ 600 ಭರವಸೆ ನೀಡಿ, 550 ಭರವಸೆ ಈಡೇರಿಸಲಿಲ್ಲ. 1 ಲಕ್ಷದ ವರೆಗೂ ಸಾಲ ಮನ್ನಾ ಮಾಡುತ್ತೇವೆ ಎಂದರು, ಮಾಡಿದರಾ? ಕೋವಿಡ್ ಸಮಯದಲ್ಲಿ ಸತ್ತವರಿಗೆ ಪರಿಹಾರ, ಬಡವರಿಗೆ ಚಿಕಿತ್ಸೆ ಬಿಲ್ ಪಾವತಿಸುವುದಾಗಿ ಹೇಳಿದರು. ಆದರೆ ಕೊಡಲಿಲ್ಲ.

ಕಾಂಗ್ರೆಸ್ ನಾಯಕರು ಅಸಂಘಟಿತ ಕಾರ್ಮಿಕರಿಗೆ 10 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದೆವು. ಆದರೆ ಸರ್ಕಾರ ನೀಡಲಿಲ್ಲ. ಬಿಜೆಪಿಯವರು ಯಾರಿಗೆಲ್ಲಾ ಪರಿಹಾರ ನೀಡಿದ್ದಾರೆ ಎಂಬ ಮಾಹಿತಿ ಕೇಳಿದೆವು. ಆದರೆ ಅವರು ನೀಡುತ್ತಿಲ್ಲ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದರು. ಅದರಿಂದ ನಿಮಗೆ ಯಾರಿಗಾದರೂ ಪ್ರಯೋಜನವಾಯಿತಾ? ಇಲ್ಲ. ಬಿಜೆಪಿಯವರು ಎಲ್ಲರಿಗೂ ಮೂರು ನಾಮ ಹಾಕಿದ್ದಾರೆ. . ಬಿಜೆಪಿಯ ಈ ದುರಾಡಳಿತದ ಬಗ್ಗೆ ಬಿಜೆಪಿ ಪಾಪದ ಪುರಾಣ ಎಂಬ ಕಿರುಹೊತ್ತಿಗೆ ತಂದಿದ್ದೇವೆ.

ಈ ಸರ್ಕಾರ ಲಂಚ ಬಿಟ್ಟು ಬೇರೇನೂ ಮಾಡಿಲ್ಲ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಸತ್ತರೂ ಆರೋಗ್ಯ ಸಚಿವ ಕೇವಲ 3 ಜನ ಸತ್ತಿದ್ದಾರೆ ಎಂದು ಸುಳ್ಳು ಹೇಳಿದ. ನಾವು ನಾಯಕರೆಲ್ಲ ಹೋಗಿ ಪರಿಶೀಲನೆ ಮಾಡಿದೆವು. ಜಿಲ್ಲಾ ಮಂತ್ರಿ ಸುರೇಶ್ ಕುಮಾರ್, ಆರೋಗ್ಯ ಮಂತ್ರಿ ಸುಧಾಕರ್ ಒಂದು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿಲ್ಲ. ಇವರು ಮನುಷ್ಯರಾ? ಕಾಂಗ್ರೆಸ್ ಪಕ್ಷದಿಂದ ಈ ಎಲ್ಲ ಕುಟುಂಬಗಳಿಗೆ ತಲಾ 1 ಲಕ್ಷ ನೆರವು ನೀಡಿದೆವು. ಕೋವಿಡ್ ಬಂದಾಗ ನಾವು ಮನೆಯಲ್ಲಿ ಕೂರದೇ ಜೀವ ಹಾಗೂ ಜೀವನ ಉಳಿಸುವ ಕೆಲಸ ಮಾಡಿದ್ದೇವೆ. ಕೋವಿಡ್ ಭ್ರಷ್ಟಾಚಾರ ಬಯಲಿಗೆಳೆದು ಕೆಲಸ ಮಾಡಿದ್ದೇವೆ.

ಆರೋಗ್ಯ ಹಸ್ತ ಕಾರ್ಯಕ್ರಮ ಮಾಡಿ ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ಧೈರ್ಯ ತುಂಬಿ, ಆಹಾರ ಪ್ಯಾಕ್ ನೀಡಿದರು. ರೈತರ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗ ಅವರಿಂದ ನೇರವಾಗಿ ಕೋಟ್ಯಂತರ ಮೊತ್ತದ ತರಕಾರಿ, ಹಣ್ಣು ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದೆವು. ಆ ಮೂಲಕ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ.

ನಿಮಗೆ ಶಕ್ತಿ ತುಂಬಲು ನಾವು ನಿಮ್ಮ ಊರಿಗೆ ಬಂದಿದ್ದೇವೆ. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಗ್ಯಾರಂಟಿ ಯೋಜನೆ ಘೋಷಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಕೊಡ್ತೇವೆ. ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷ ಕೊಡ್ತೇವೆ. ಜತೆಗೆ 10 ಕೆಜಿ ಅಕ್ಕಿ. ನಾನು ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ನಿಮ್ಮ ಮನೆಗೆ ಬರ್ತದೆ. ಮೇ ತಿಂಗಳಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಜೂನ್ ತಿಂಗಳಿಂದ ಈ ಯೋಜನೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಯೋಜನೆ ಜಾರಿ ಮಾಡದಿದ್ದರೆ, ನುಡಿದಂತೆ ನಡೆಯದಿದ್ದರೆ ನಾನು ಹಾಗೂ ಸಿದ್ದರಾಮಯ್ಯ ಅವರು ಮತ್ತೆ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಿಷಬ್ ಶೆಟ್ಟಿ : 'ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ'

Tue Feb 21 , 2023
ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಘೋಷಣೆ ಆಗಿತ್ತು. ಅವರಿಗೆ ‘ಅತ್ಯಂತ ಭರವಸೆಯ ನಟ’ ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಗೌರವ ಸ್ವೀಕರಿಸಿದ ರಿಷಬ್​ಗೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ […]

Advertisement

Wordpress Social Share Plugin powered by Ultimatelysocial