ಹನಿಮೂನ್ ಪ್ಲಾನ್ ಕ್ಯಾನ್ಸಲ್ ಮಾಡಿದ ಅಥಿಯಾ ಶೆಟ್ಟಿ-ಕೆಎಲ್ ರಾಹುಲ್ .!

 ನಟಿ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ನಿನ್ನೆಯಷ್ಟೇ ಸಪ್ತಪದಿ ತುಳಿದಿದ್ದಾರೆ. ಇವರಿಬ್ಬರ ವಿವಾಹ ಸಮಾರಂಭದ ಫೋಟೋಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿವೆ. ಈ ಪೋಟೋಗಳನ್ನೂ ನೋಡಿದರೆ ಮದುವೆ ಸಮಾರಂಭದ ಮೆರಗು ಯಾವ ರೀತಿ ಕಳೆ ಕಟ್ಟಿತ್ತು ಎನ್ನುವುದನ್ನು ಊಹಿಸಬಹುದಾಗಿದೆ.

ಇದೀಗ ಈ ಪ್ರೇಮ ಪಕ್ಷಿಗಳು ತಮ್ಮ ಹನಿಮೂನ್ ಪ್ಲಾನ್ ರದ್ದುಗೊಳಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ವರದಿಗಳ ಪ್ರಕಾರ, ಕೆಎಲ್ ರಾಹುಲ್ ಅವರ ಮುಂಬರುವ ಕ್ರಿಕೆಟ್ ಪಂದ್ಯಾವಳಿಗಳ ಕಾರಣವೇ ನವ ಜೋಡಿಗಳು ತಕ್ಷಣಕ್ಕೆ ಯಾವ ಟೂರ್ ಕೂಡಾ ಪ್ಲಾನ್ ಮಾಡುವುದಿಲ್ಲ ಎನ್ನಲಾಗಿದೆ.

ಅಥಿಯಾ-ಕೆಎಲ್ ರಾಹುಲ್ ರಿಸೆಪ್ಶನ್ ಯಾವಾಗ ? :
ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ವಿವಾಹವು ಸುನೀಲ್ ಶೆಟ್ಟಿ ಅವರ ಖಂಡಾಲಾ ಬಂಗಲೆಯಲ್ಲಿ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಅದ್ದೂರಿಯಾಗಿಯೇ ನೆರವೇರಿತು. ಅಥಿಯಾ-ರಾಹುಲ್ ಮದುವೆಯ ನಂತರ, ಇದೀಗ ಇವರಿಬ್ಬರ ಆರತಕ್ಷತೆ ಸಮಾರಂಭದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಆದರೆ, ಪಿಎಲ್ ಟೂರ್ನಿಯ ನಂತರವೇ ಅಥಿಯಾ ಮತ್ತು ರಾಹುಲ್ ಮದುವೆಯ ಅದ್ಧೂರಿ ರಿಸೆಪ್ಷನ್ ಪಾರ್ಟಿ ನಡೆಯಲಿದೆ ಎಂದು ಸ್ವತಃ ಸುನೀಲ್ ಶೆಟ್ಟಿ ತಿಳಿಸಿದ್ದಾರೆ.

ಮದುವೆಯ ನಂತರದ ಪ್ಲಾನ್ ಏನು ? :

ವರದಿಗಳ ಪ್ರಕಾರ, ಕೆಎಲ್ ರಾಹುಲ್ಟೀಮ್ ಇಂಡಿಯಾ ಮುಂದಿನ ಟೂರ್ನಿಗೆ ಸೇರಿಕೊಳ್ಳಲಿದ್ದಾರೆ. ಇನ್ನು ಅಥಿಯಾ ಶೆಟ್ಟಿ ತನ್ನ ಹೊಸ ಉದ್ಯಮವನ್ನು ಪ್ರಾರಂಭಿಸಲಿದ್ದಾರೆ. ಕೆಎಲ್ ರಾಹುಲ್ ಮದುವೆಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಈ ಹಿನ್ನೆಲೆಯಲ್ಲಿ ಮದುವೆಯ ಬೆನ್ನಲ್ಲೇ ಕೆಎಲ್ ರಾಹುಲ್ ಮತ್ತೆ ಅಭ್ಯಾಸಕ್ಕೆ ಮರಳಲಿದ್ದಾರೆ. ಕೆಲಸಕ್ಕೆ ಮೊದಲ ಆದ್ಯತೆ ನೀಡಿ, ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ತಮ್ಮ ಹನಿಮೂನ್ ಪ್ಲಾನ್ ಅನ್ನು ಸ್ವಲ್ಪ ಸಮಯದವರೆಗೆ ಮುಂದೂಡಿದ್ದಾರೆ ಎನ್ನಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಸಿದ್ಧರಿಲ್ಲ,

Tue Jan 24 , 2023
ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಚುನಾವಣೆಗೆ ಹೋಗಲು ಬಿಎಸ್​ವೈ ಬೆಂಬಗಲಿಗ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎಂದು ರಮೇಶ್​ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜ್ಯಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಬೆಂಗಳೂರು:ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ […]

Advertisement

Wordpress Social Share Plugin powered by Ultimatelysocial