ಎಟಿಎಂ ಕಳವು ಯತ್ನ ಬಾರ್ ಸಪ್ಲೈಯರ್ ಸೆರೆ.

ಎಟಿಎಂ ಕಳವು ಪ್ರಯತ್ನ ಪ್ರಕರಣದ ಖತರ್ನಾಕ್ ಖದೀಮನೊಬ್ಬನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಮಾಕ್ಷಿಪಾಳ್ಯದ ರಂಗನಾಥಪುರದ ಕರಿಚಿತ್ತಪ್ಪ.ಕೆ.(೨೧) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕಳೆದ ಜ.೧೪ರಂದು ರಾತ್ರಿ ೧೧.೩೦ ಬೆಳಗ್ಗೆ ೯ ರ ವೇಳೆ ಮಾಗಡಿ ಮುಖ್ಯರಸ್ತೆ ಕಾಮಾಕ್ಷಿಪಾಳ್ಯ ಜಯಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂನ್ನು ಹೊಡೆದು ಕಳವು ಮಾಡಲು ಪ್ರಯತ್ನಿಸಿದ ಬಗ್ಗೆ ಜಗ್ಗೇಶ್ ನೀಡಿದ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್ ಮತ್ತವರ ಸಿಬ್ಬಂದಿ ಪ್ರಕರಣದ ತನಿಖೆ ಕೈಗೊಂಡಿದ್ದರು.
ಪ್ರಕರಣದ ಸಂಬಂಧ ಎಟಿಎಂನಲ್ಲಿ ಸೆರೆಯಾಗಿದ್ದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ ತುಮಕೂರಿನ ಮರಳೂರು ಸರ್ಕಲ್‌ನಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯು ಕಾಮಾಕ್ಷಿಪಾಳ್ಯದ ನವರತ್ನ ಬಾರ್ ನಲ್ಲಿ ಸಪ್ಲೈಯರ್ ಕೆಲಸ ಮಾಡುತ್ತಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಪ್ರತಿ ಭಟನೆ.

Sun Jan 22 , 2023
  ಬೆಂಗಳೂರು: ‘ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಜ.23, ಸೋಮವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಗರದ 300ಕ್ಕೂ ಹೆಚ್ಚು ಕಡೆಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಮೌನ ಪ್ರತಿಭಟನೆ ಮಾಡಲಾಗುವುದು’ ಎಂದು ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ ಅವರ ಜತೆ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ […]

Advertisement

Wordpress Social Share Plugin powered by Ultimatelysocial