ಕೆಮರೂನ್ ಗ್ರೀನ್‌ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮಹತ್ವದ ಸೂಚನೆ

2023ರ ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ಆಲ್‌ರೌಂಡರ್ ಕೆಮರೂನ್ ಗ್ರೀನ್‌ರನ್ನು 17.50 ಕೋಟಿ ರುಪಾಯಿ ನೀಡಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿತು. 2023ರ ಐಪಿಎಲ್‌ನಲ್ಲಿ ಗ್ರೀನ್ ಮುಂಬೈ ಇಂಡಿಯನ್ಸ್ ಪರವಾಗಿ ಪ್ರಮುಖ ಪಾತ್ರ ವಹಿಸಲಿದ್ದಾರೆ.ಕೆಮರೂನ್ ಗ್ರೀನ್ ಸೇರ್ಪಡೆಯಿಂದ ಖುಷಿಯಾಗಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮತ್ತು ಅಭಿಮಾನಿಗಳಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಶಾಕ್ ನೀಡಿದೆ.ಏಪ್ರಿಲ್ 13ರವರೆಗೆ ಬೌಲಿಂಗ್ ಮಾಡದಂತೆ ಕೆಮರೂನ್ ಗ್ರೀನ್‌ಗೆ ಕ್ರಿಕೆಟ್ ಆಸ್ಟ್ರೇಲಿಯಾ ಸೂಚನೆ ನೀಡಿದೆ.ಏಪ್ರಿಲ್ 13ರವರೆಗೆ ಗ್ರೀನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಬ್ಯಾಟಿಂಗ್ ಮಾತ್ರ ಮಾಡಲಿದ್ದಾರೆ. ಭಾರತದ ವಿರುದ್ಧದ ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ಆಡಲಿದ್ದಾರೆ.ಕ್ರಿಕೆಟ್ ಆಸ್ಟ್ರೇಲಿಯಾದ ಮಾರ್ಗಸೂಚಿಗಳ ಬಗ್ಗೆ ಬಿಸಿಸಿಐ ಈ ಮೊದಲೇ ಎಲ್ಲಾ ಫ್ರಾಂಚೈಸಿಗಳಿಗೆ ತಿಳಿಸಿತ್ತು ಎಂದು ವರದಿಯಾಗಿದೆ. ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿರುವಂತೆ ಬಿಸಿಸಿಐ ಸಿಇಒ ಮತ್ತು ಐಪಿಎಲ್ ಸಿಒಒ ಹೇಮಂಗ್ ಅಮೀನ್ ಎಲ್ಲಾ 10 ಫ್ರಾಂಚೈಸಿಗಳಿಗೆ ಈ ವಿಚಾರವನ್ನು ತಿಳಿಸಿದ್ದರು.”ಐಪಿಎಲ್‌ ಆವೃತ್ತಿಗೆ ಕೆಮರೂನ್ ಗ್ರೀನ್ ಸಂಪೂರ್ಣವಾಗಿ ಲಭ್ಯವಿರುತ್ತಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಆದಾಗ್ಯೂ, ಬಾರ್ಡರ್-ಗವಾಸ್ಕರ್ ಟ್ರೋಫಿಯ ಎಲ್ಲಾ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಅವರು ಕಾಣಿಸಿಕೊಂಡರೆ, 2023 ರ ಮಾರ್ಚ್ 9 ರಿಂದ ಮಾರ್ಚ್ 13 ರವರೆಗೆ ನಿಗದಿಪಡಿಸಲಾದ ನಾಲ್ಕನೇ ಟೆಸ್ಟ್‌ನ ಮುಕ್ತಾಯದಿಂದ ನಾಲ್ಕು ವಾರಗಳವರೆಗೆ ಗ್ರೀನ್ ಬೌಲಿಂಗ್ ಮಾಡಲು ಸಾಧ್ಯವಾಗುವುದಿಲ್ಲ.” ಎಂದು ಹೇಮಂಗ್ ಅಮೀನ್ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶ್ರೀಗಳ ಅಪೇಕ್ಷೆಯಂತೆಯೇ ಜ್ಞಾನಯೋಗಾಶ್ರಮದಲ್ಲಿ ಸಂಜೆ 5ಕ್ಕೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Tue Jan 3 , 2023
  ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ.ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.ಬೆಳಗ್ಗೆ 6 […]

Advertisement

Wordpress Social Share Plugin powered by Ultimatelysocial