ನಾದಿನಿ ಮೇಲೆ ಭಾವನಿಂದಲೇ ಅತ್ಯಾಚಾರ!

ಶಿವಮೊಗ್ಗ: ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಅಕ್ಕನ ಗಂಡನ ವಿರುದ್ಧ ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಎಸ್‌ಎಸ್‌ಎಲ್ಸಿ ಫೇಲಾಗಿದ್ದ ಬಾಲಕಿ ಅಕ್ಕನ ಮನೆಗೆ ಬಂದಿದ್ದಳು.ಆಕೆಯ ಮೇಲೆ ಭಾವ ಅತ್ಯಾಚಾರ ಎಸಗಿದ್ದು ಗರ್ಭಿಣಿಯಾಗಿದ್ದಾಳೆ. 7 ನೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಬಾಲಕಿಯನ್ನು ಸಖಿ ಕೇಂದ್ರಕ್ಕೆ ಬಿಡಲಾಗಿದ್ದು, ಮಗುವನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ. ಮಗು ಮೃತಪಟ್ಟಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ̤

Sat Feb 5 , 2022
ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಮುಖಭಂಗಕ್ಕೆ ಒಳಗಾಗಿತ್ತು. ಹೀಗೆ ಹರಿಣಗಳ ನೆಲದಲ್ಲಿನ ಹೀನಾಯ ಸೋಲಿನಿಂದ ಕಮ್ ಬ್ಯಾಕ್ ಮಾಡಬೇಕೆಂದರೆ ಇದೀಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 6ರಂದು ನಡೆಯಲಿರುವ ಚೊಚ್ಚಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾಗಿದೆ.ಹೌದು, ಟೀಮ್ ಇಂಡಿಯಾ ತನ್ನ ಕಳೆದ ಏಕದಿನ […]

Advertisement

Wordpress Social Share Plugin powered by Ultimatelysocial