ವಿಶಾಖ ಪಟ್ಟಣ : ವಿಶಾಖ ಪಟ್ಟಣಂನ ಗೋಪಾಲಪಟ್ಟಣದ ನಾಯ್ಡು ತೋಟಾ ಸಮೀಪದಲ್ಲಿನ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಇಂದು ಮುಂಜಾನೆ ಸುಮಾರು ೩ ಗಂಟೆಗೆ ವಿಷಾನಿಲ ಸೋರಿಕೆಯಾದ ಪರಿಣಾಮ, ೧೩ ಜನರು ಸಾವನ್ನಪ್ಪಿದ್ದರು. ೩೦೦ಕ್ಕೆ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಇದೀಗ ಆಂಧ್ರಪ್ರದೇಶ ಸರ್ಕಾರ ಮೃತರಿಗೆ ೧ ಕೋಟಿ, ತೀವ್ರವಾಗಿ ಅಸ್ವಸ್ಥಗೊಂಡವರಿಗೆ ೧೦ ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ […]

ಬ್ಯಾಂಕಾಕ್ : ಕೊರೊನಾ ಸೋಂಕು ಕಾರಣದಿಂದಾಗಿ ಥೈಲ್ಯಾಂಡ್‌ನಲ್ಲಿ ಭಾರೀ ನಿರುದ್ಯೋಗ ಸಮಸ್ಯೆ ಉದ್ಭವಿಸಿದೆ. ಮನುಷ್ಯರಿಗಷ್ಟೇ ಅಲ್ಲ, ಆನೆಗಳಿಗೂ ಈ ಕೊರೊನಾ ಬಿಸಿ ತಟ್ಟಿದೆ ಅಂರೆ ತಪ್ಪಾಗಲಾರದು. ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಪ್ರವಾಸಿಗರನ್ನು ಅವಲಂಭಿಸಿರುವ ಆನೆಗಳು ಈಗ ಹಸಿವಿನಿಂದ ತೊಂದರೆಗೊಳಗಾಗಿವೆ. ಈ ಹಿನ್ನೆಲೆ ಅವುಗಳನ್ನು ಮತ್ತೇ ತಮ್ಮ ನೈಸರ್ಗಿಕ ವಾಸಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ೧೦೦ಕ್ಕೂ ಹೆಚ್ಚು ಪ್ರಾಣಿಗಳನ್ನು ೧೫೦ ಕಿ.ಮೀ(೯೫ ಮೈಲಿ) ದೂರದ ತಮ್ಮ ಮೂಲ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಉತ್ತರ ಪ್ರಾಂತ್ಯದ ಚಿಯಾಂಗ್ […]

ನವದೆಹಲಿ: ಇವತ್ತು ಬುದ್ಧ ಪೂರ್ಣಿಮಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಾರಿಯರ್ಸ್ ಉದ್ದೇಶಿಸಿ ಮಾತನಾಡಿದ್ದು, ದೇಶದ ಕಷ್ಟದ ಪರಿಸ್ಥಿತಿಯಲ್ಲಿದೆ. ಭಾರತ ಇಡೀ ವಿಶ್ವಕ್ಕೆ ತನ್ನ ಮಾರ್ಗ ತೋರಿಸಿದೆ. ಸಂಘಟಿತ ಪ್ರಯತ್ನದಿಂದ ಮಾನವಕುಲ ಉಳಿದಿದೆ ಎಂದರು. ದೇಶದ ಎಲ್ಲ ಜನತಗೆ ಬುದ್ಧ ಪೂರ್ಣಿಮಾದ ಶುಭಾಶಯಗಳು. ೨೦೧೫ ಮತ್ತು ೨೦೧೮ರಂದು ದೆಹಲಿಯಲ್ಲಿ ಹಾಗೂ ೨೦೧೭ರಲ್ಲಿ ಕೊಲೊಂಬೋದಲ್ಲಿ ನಿಮ್ಮ ಜೊತೆಯಲ್ಲಿದ್ದೆ. ಆದರೆ ಇಂದು ಬದಲಾದ ದಿನಗಳಲ್ಲಿ ನೇರವಾಗಿ ನಿಮ್ಮ ಜೊತೆ ಮಾತನಾಡಲು ಸಾಧ್ಯವಿಲ್ಲ. […]

ನವದೆಹಲಿ: ಆಹಾರ ಪದಾರ್ಥ ಡೆಲಿವರಿ ಮಾಡುತ್ತಿದ್ದ ಝೊಮ್ಯಾಟೊ ಕಂಪನಿ ಲಾಕ್‌ಡೌನ್ ಹಿನ್ನೆಲೆ ದಿನಸಿ ಪದಾರ್ಥಗಳನ್ನೂ ಡೆಲಿವರಿ ಮಾಡುತ್ತಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮದ್ಯವನ್ನೂ ಡೆಲಿವರಿ ಮಾಡಲು ನಿರ್ಧರಿಸಿದೆ. ೪೦ ದಿನಗಳ ಲಾಕ್‌ಡೌನ್ ಬಳಿಕ ಇದೀಗ ಸಡಿಲಿಕೆ ನೀಡಲಾಗಿದ್ದು, ಬಾರ್‌ಗಳ ಮುಂದೆ ಮದ್ಯ ಪ್ರಿಯರು ಕ್ಯೂನಲ್ಲಿ ನಿಂತು ಮದ್ಯ ಖರೀದಿಸಬೇಕಿದೆ. ಅಲ್ಲದೆ ಈ ವೇಳೆ ಹೆಚ್ಚಿನ ಗಲಾಟೆಗಳು ನಡೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡುವುದು ಸಾಹಸವಾಗಿದೆ. ಹೀಗಾಗಿ ಮದ್ಯಪ್ರಿಯರನ್ನು […]

ವಾಷಿಂಗ್ಟನ್: ಸುಮಾರು ೧.೨೩ ದಶಲಕ್ಷ ಕರೊನಾ ಸೋಂಕಿತರು, ೭೨ ಸಾವಿರಕ್ಕೂ ಅಧಿಕ ಮಂದಿಯ ಸಾವು… ಇದು ಅಮೆರಿಕದ ಇಂದಿನ ಸ್ಥಿತಿ. ದಿನದಿಂದ ದಿನಕ್ಕೆ ಅಮೆರಿಕ ಕರೊನಾ ಸೋಂಕಿನ ಮೃತ್ಯುಕೂಪವಾಗುತ್ತಿದ್ದರೂ, ಚುನಾವಣೆಯ ಮೇಲೆ ದೃಷ್ಟಿ ನೆಟ್ಟಿರುವ ಅಲ್ಲಿಯ ಅಧ್ಯಕ್ಷ ಈಗ ತೆಗೆದುಕೊಳ್ಳುತ್ತಿರುವ  ಒಂದೊಂದು ಕ್ರಮವೂ, ಹೇಳುತ್ತಿರುವ ಒಂದೊಂದು ಮಾತೂ ಇಡೀ ವಿಶ್ವದಲ್ಲಿಯೇ ಚರ್ಚೆಯಾಗುತ್ತಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದರು. ಲಾಕ್‌ಡೌನ್ ಸ್ಥಗಿತಗೊಳಿಸುವ ಬಗ್ಗೆ ಘೋಷಣೆ ನೀಡುವ ಮೂಲಕ ಇದಾಗಲೇ […]

ನವದೆಹಲಿ:ಕೊರೊನಾ ಹಿನ್ನಲೆ ಮುಂದೂಡಲಾಗಿದ್ದ ಪರೀಕ್ಷೆಗಳ ದಿನಾಂಕವನ್ನು ನಿಗದಿಪಡಿಸಲಾಗಿದೆ. ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ ಜುಲೈ ೧೮ರಿಂದ ೨೩ರವೆಗೆ ಹಾಗೂ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಜುಲೈ ೨೬ರಂದು ಜರುಗಲಿದೆ ಎಂದು ಕೇಂದ್ರದ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿವಾಲ್ ನಿಶಾಂಕ್ ತಿಳಿಸಿದ್ದಾರೆ. ಜೆಇಇ ಮೆನ್ಸ್ ಪರೀಕ್ಷೆ ಜುಲೈ ೧೮ರಿಂದ ೨೩ರವರೆಗೆ ಹಾಗೂ ಜೆಇಇ ಅಡ್ವಾನ್ಸ್ ಪರೀಕ್ಷೆ ಆಗಸ್ಟ್ನಲ್ಲಿ ನಡೆಸಲಾಗುವುದು ಎಂದು ನಿಶಾಂಕ್ […]

ಹೈದರಬಾದ್: ಮೋಸ ಹೋಗೋರು ಇರೋವರೆಗೂ ಮೋಸ ಮಾಡುವವರು ಸಹ ಇದ್ದೇ ಇರ್ತಾರೆ. ಮನೆಗೆ ನುಗ್ಗಿ ದರೋಡೆ ಮಾಡೋರನ್ನ ಮುಖ ಕಂಡ್ರೆ ಗುರುತಾದ್ರೂ ಹಿಡೀಬಹುದು. ಆದ್ರೆ, ಯಾರಿಗೂ ಕಾಣಿಸಿದೆ ಕಂಪ್ಯೂಟರ್‌ನ ಮುಂದೆ ಕುಳಿತು ಚಳ್ಳೆ ಹಣ್ಣು ತಿನ್ನಿಸೋ ಖತರ್ನಾಕ್‌ಗಳನ್ನ ಹಿಡಿಯೋದು ಸುಲಭದ ಮಾತಲ್ಲ. ಸದ್ಯ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ, ಸಾರ್ವಜನಿಕರು ಹಾಗೂ ಅನೇಕ ಸಂಘ ಸಂಸ್ಥೆಗಳೂ ನೆರವಾಗುತ್ತಿವೆ. ಇದೇ ರೀತಿ ಹೈದರಾಬಾದ್‌ನ ರ‍್ರೇಡಪಲ್ಲಿಯ ವಿಶ್ವನಾಥನ್ ಎನ್ನುವ ಸಾಮಾಜಿಕ […]

ನವದೆಹಲಿ: ಕೊವಿಡ್-೧೯ ಟ್ರ‍್ಯಾಕ್ ಮಾಡಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಆರೋಗ್ಯ ಸೇತು ಆ್ಯಪ್‌ನಿಂದ ಸಾರ್ವಜನಿಕರ ಖಾಸಗಿ ಮಾಹಿತಿಗಳು ಸೋರಿಕೆ ಆಗುತ್ತದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿಯವರ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ್ದ ಬಿಜೆಪಿ, ಯಾರೂ ಹೆದರಬೇಕಿಲ್ಲ. ಆರೋಗ್ಯ ಸೇತು ಆ್ಯಪ್‌ನಲ್ಲಿ ಎಲ್ಲರ ಮಾಹಿತಿಗಳೂ ಭದ್ರವಾಗಿರುತ್ತವೆ. ಸೋರಿಕೆಯಾಗುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ನಿನ್ನೆ ರಾತ್ರಿ ಫ್ರೆಂಚ್ ಹ್ಯಾಕರ್ ರಾಬರ್ಟ್ ಬ್ಯಾಪ್ಟಿಸ್ಟ್ ಎಂಬುವರು ಟ್ವೀಟ್ ಮಾಡುವ […]

ವಾಷಿಂಗ್ಟನ್: ಭಾರತದಲ್ಲಿ ಕಡಿಮೆ ಆದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಶಾಲೆಗಳಿಗೆ ನಿರ್ಣಾಯಕ ಹಣಕಾಸು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸಲು ಆರಂಭಿಕ ಹಂತದಲ್ಲಿರುವ ಭಾರತದ ಶಿಕ್ಷಣ ಸಂಸ್ಥೆಗಳಿಗೆ ೧೫ ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಅಮೆರಿಕ ಹಣಕಾಸು ಸಂಸ್ಥೆ ಒಪ್ಪಿದೆ. ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ದೀರ್ಘಕಾಲೀನ ಬಂಡವಾಳದ ಅಗತ್ಯವನ್ನು ಪೂರೈಸುವ ಮೂಲಕ ಹೆಚ್ಚಿನ ಶಾಲೆಗಳನ್ನು ತಲುಪಲು ಬೆಂಗಳೂರು ಮೂಲದ ‘ವರ್ತನಾ’ ಹಣಕಾಸು ಸಂಸ್ಥೆಗೆ ಹಣಕಾಸಿನ ನೆರವು ನೀಡುತ್ತದೆ ಎಂದು […]

ನವದೆಹಲಿ : ದೆಹಲಿ ಸರ್ಕಾರವು ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಮೌಲ್ಯ ವರ್ಧಿತ ತೆರಿಗೆ ಹೆಚ್ಚಿಸಿದ್ದು, ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ ಗೆ ೭.೧ ರೂ. ಪೆಟ್ರೋಲ್ ಬೆಲೆ ೧.೬೭ ರೂ. ಹೆಚ್ಚಳವಾಗಿದೆ. ದೆಹಲಿ ಸರ್ಕಾರ ವ್ಯಾಟ್ ಹೇರಿಕೆಯಿಂದಾಗಿ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ ೭೧.೨೬ ರೂ. ತಲುಪಿದ್ದು, ಡೀಸೆಲ್ ಬೆಲೆ ೬೯.೩೯ ರೂ.ಗೆ ಏರಿಕೆಯಾಗಿದೆ. ಇದು ದೆಹಲಿಯಲ್ಲಿ ಮಾತ್ರ […]

Advertisement

Wordpress Social Share Plugin powered by Ultimatelysocial