ದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಕಷ್ಟು ಹಣದ ಅವಶ್ಯಕತೆ ಇದೆ ಎಂದು ಸರ್ಕಾರಿ ನೌಕರರ ಡಿಎ ಏರಿಕೆಯನ್ನು ಏಕಾಏಕಿ ನಿಲ್ಲಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಲೆಟ್ ಟ್ರೈನ್ ಪ್ರಾಜೆಕ್ಟ್ ನಿಲ್ಲಿಸುವ ಬದಲು ಸರ್ಕಾರಿ ನೌಕರರಿಗೆ ನೀಡುವ ಡಿಎಯನ್ನು ನಿಲ್ಲಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಇವತ್ತು ಈ ಸಂಬಂಧ ಕಾಂಗ್ರೆಸ್ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ಅದರಲ್ಲಿ […]

ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪುನಾರಂಭಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. ಲಾಕ್ಡೌನ್ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮೇ ಮೂರರವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಮೇ ೩ರ ಬಳಿಕ ವಿಮಾನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಈ ಹಿಂದೆ ಆರಂಭಿಸಲಾಗಿದ್ದ ಟಿಕೆಟ್ ಬುಕ್ಕಿಂಗ್ ಗೆ ಅನುಮತಿ ನೀಡಿಲ್ಲ ಎಂದು ತಿಳಿಸಿತ್ತು. […]

ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾ.೧೬ರಿಂದಲೇ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದು ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಮೇಲೆ ಗಂಭಿರ ಪರಿಣಾಮ ಬೀರಲಿದೆ. ಹೀಗಾಗಿ ಕಾಲೇಜುಗಳಲ್ಲಿ ನೂತನ ಶೈಕ್ಷಣಿಕ ವರ್ಷಾರಂಭವನ್ನು ಜುಲೈ ಮಧ್ಯಾವಧಿಯಲ್ಲಿ ಆರಂಭದ ಬದಲು, ಸೆಪ್ಟಂಬರ್‌ನಲ್ಲಿ ಆರಂಭಿಸಲಿದೆ. ಸರ್ಕಾರ ನೇಮಿಸಿದ ಸಮಿತಿಯೊಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗಕ್ಕೆ (ಯುಜಿಸಿ) ಶಿಫಾರಸು ಮಾಡಿದೆ. ಕಾಲೇಜುಗಳನ್ನು ಮುಚ್ಚಿದ್ದರಿಂದ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗಿಲ್ಲ. ಆ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸುವಂತೆ ಸಮಿತಿ ಸಲಹೆ […]

ದೆಹಲಿ: ಉತ್ತರ ಕೊರಿಯಾದ ಕ್ರೂರ ದೊರೆ ಕಿಮ್‌ಜಾಂಗ್ ಉನ್ ಅವರ ಹೃದಯ ರಕ್ತನಾಳದ ಶಸ್ತ್ರಚಿಕೆತ್ಸೆಗೆ ಒಳಗಾಗಿದ್ದು, ಅವರ ಜೀವಕ್ಕೆ  ಅಪಾಯವಿದೆ. ಈ ಬಗ್ಗೆ ಇತ್ತಿಚಿಗೆ ಮಾದ್ಯಮಗಳು ವರದಿಯಿಂದ ಬಹಿರಂಗವಾಗಿತ್ತು. ಕೊರೊನಾ ನಡುವೆಯೂ ಚೀನಾ ತನ್ನ ಮಿತ್ರ ರಾಷ್ಟ್ರದ ನಾಯಕನ ನೆರವಿಗೆ ಧಾವಿಸಿದೆ. ಉನ್ ಬಗ್ಗೆ ಸಲಹೆ ನೀಡಲು ಚೀನಾದ ವೈದ್ಯರು, ಅಧಿಕಾರಿಗಳ ತಂಡವನ್ನು ರವಾನಿಸಿದೆ.ಆದರೆ ಚೀನಾದ ವೈದ್ಯರು ಉತ್ತರ ಕೊರಿಯಾಕ್ಕೆ ತೆರಳುತ್ತಿರುವುದರ ಹಿನ್ನೆಲೆಯಲ್ಲಿ ಕಿಮ್ ಸದ್ಯದ ಆರೋಗ್ಯ ಪರಿಸ್ಥಿಯನ್ನು ನಿಖರವಾಗಿ […]

ವಿಶ್ವಸಂಸ್ಥೆ: ಕೊರೊನಾ ಹಿನ್ನೆಯಲ್ಲಿ ಭಾರತಕ್ಕೆ ಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಏಪ್ರೀಲ್ ತಿಂಗಳಲ್ಲಿ ೮೯% ರಷ್ಟು ಕುಸಿದಿದೆ ಎಂದು ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಘಟನೆ ಹೇಳಿದೆ. ಸೆಪ್ಟೆಂಬರ್ ವೇಳೆಗೆ ವಿಶ್ವದಲ್ಲಿ ವಿಮಾನದಲ್ಲಿ ಸಂಚರಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಪೈಕಿ ೧೦೨ ಕೋಟಿಯಷ್ಟು ಜನ ಕಡಿಮೆಯಾಗಬಹುದು ಎಂದು ಸಂಘಟನೆ ಅಂದಾಜಿಸಿದೆ. ಫೆಬ್ರುವರಿಯಲ್ಲಿ ಅಂತರರಾಷ್ಟ್ರೀಯ  ಪ್ರಯಾಣಿಕರ ಸಂಖ್ಯೆ ೧೩%ರಷ್ಟು ಕುಸಿತ ಕಂಡಿದೆ. ಚೀನಾ ಸೇರಿದಂತೆ ಮೊದಲು ಸೋಂಕು ಕಾಣಿಸಿಕೊಂಡ ದೇಶಗಳು ಅಂತರರಾಷ್ಟ್ರೀಯ  ವಿಮಾನಯಾನಗಳನ್ನು ರದ್ದುಗೊಳಿಸಿದ್ದು […]

ದೆಹಲಿ: ಇಡೀ ದೇಶವೇ ಕೊರೊನಾದಿಂದ ತತ್ತರಿಸಿದೆ.ಕೊರೊನಾ ವೈರಸ್ ಜಗತ್ತಿನಾದ್ಯಂತ ತೀವ್ರವಾಗಿ ಹರಡುತ್ತಿದೆ. ಹೀಗಾಗಿ ಹಲವು ಮಂದಿ ದೇವರ ಮೊರೆಹೋಗುತ್ತಿದ್ದಾರೆ. ಅದೇ ರೀತಿಯಾಗಿ ಬಾಲಿವುಡ್ ನಟಿ ಹಿನಾ ಖಾನ್ ಕೂಡಾ ಕೊರೊನಾ ನಿವಾರಣೆಗಾಗಿ ಅಲ್ಲಾನ ಮೊರೆ ಹೋಗಿದ್ದಾರೆ. ಕೊರೊನಾ ಪೀಡಿತರು ಆದಷ್ಟೂ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಎಲ್ಲರ ಯೋಗಕ್ಷೇಮಕ್ಕಾಗಿ ನಟಿ ಪ್ರಾರ್ಥನೆ ಮಾಡಿ, ಎಲ್ಲರಿಗೂ ರಂಜಾನ್ ಹಬ್ಬ ಶುಭ ತರಲಿ ಎಂದು ಪ್ರಾರ್ಥಿಸಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ಉದ್ದೇಶದಿಂದ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ಏಪ್ರಿಲ್ ೨೬ರ ಬೆಳಗ್ಗೆ ೬ ಗಂಟೆಯಿಂದ ಏಪ್ರಿಲ್ ೨೯ ರ ರಾತ್ರಿ ೯ ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದೆ. […]

ನವದೆಹಲಿ: ಮೀಸಲಾತಿಯ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅಗತ್ಯವಿರುವವರಿಗೆ ಮಾತ್ರ ಮೀಸಲಾತಿಯ ಅನುಕೂಲಗಳು ದೊರೆಯುವಂತೆ ಮಾಡಬೇಕು. ಮೀಸಲಾತಿ ಪಟ್ಟಿಯನ್ನು ಪರೀಕ್ಷಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಆದೇಶ ನೀಡಿದೆ. ಮೀಸಲಾತಿಯ ಫಲಾನುಭವಿಗಳಾಗಲು ಪರಿಶಿಷ್ಟಜಾತಿ ಮತ್ತು ಪಂಗಡಗಳಲ್ಲಿ ಹಲವು ತೊಡಕುಗಳಿವೆ. ಇದಲ್ಲದೇ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ವರ್ಗಗಳಿವೆ. ಆದರೆ ಈ ಜಾತಿ ಮತ್ತು […]

ನವದೆಹಲಿ: ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಹಿನ್ನೆಲೆ, ವಿವಿಧ ಗ್ರಾಮ ಪಂಚಾಯ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಅಂತಾ ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಅಲ್ಲದೇ ಈ ಸಂದರ್ಭದಲ್ಲಿ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಮೋದಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇಂದು ದೇಶದ ವಿವಿಧ ಗ್ರಾಮ ಪಂಚಾಯ್ತಿಗಳನ್ನು […]

ವಾಷಿಂಗ್ಟನ್: ಕರೊನಾ ಸೋಂಕಿತರಿಗೆ ವಿಶೇಷ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಚಿಕಿತ್ಸೆ ನೀಡುವಂಥ ವೆಂಟಿಲೇಟರ್ ಅನ್ನ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಅಭಿವೃದ್ಧಿ ಪಡಿಸಿದೆ. ಇದು ಕರೊನಾ ಸೋಂಕಿತರಿಗೆ ಅಗತ್ಯವಾಗಿ ಬೇಕಾಗಿರುವಂಥ ಅಧಿಕ ಒತ್ತಡದ ವೆಂಟಿಲೇಟರ್ ಆಗಿದ್ದು ಸುಲಭವಾಗಿ ಹಾಗೂ ಪರಿಣಾಮಕಾರಿಯಾಗಿ ಇದರಿಂದ ಸಾಧ್ಯ ಎಂದು ನಾಸಾ ಹೇಳಿದೆ. ಇದಕ್ಕೆ ‘ವಿಟಲ್ (ವೆಂಟಿಲೇಟರ್ ಇಂಟರ್ವೆನ್ಷನ್ ಟೆಕ್ನಾಲಜಿ) ಎಂದು ಹೆಸರಿಸಲಾಗಿದೆ. ಇದನ್ನು ಈಗಾಗಲೇ ನ್ಯೂಯಾರ್ಕ್ನ ಇಕಾನ್ ಸ್ಕೂಲ್ ಆಫ್ ಮೆಡಿಸಿನ್ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅಲ್ಲಿ […]

Advertisement

Wordpress Social Share Plugin powered by Ultimatelysocial