ಕೊರೊನಾ ಸೋಂಕು ಪೀಡಿತರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿರುವ ಹಿನ್ನೆಲೆ ರೆಡ್ ಝೋನ್ ಇದೆ , ಜಿಲ್ಲೆಯಲ್ಲಿ ಯಾವುದೇ ರೀತಿ ಸಡಿಲಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದೆ, ಪರಿಸ್ಥಿತಿ ನೋಡಿ ಮುಂದಿನ ಕ್ರಮ […]

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದೆ.. ರಾಜ್ಯದಲ್ಲಿ  ಇಂದು ಹೊಸದಾಗಿ 16 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 443 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  16  ಸೋಂಕಿತರ ಪೈಕಿ ಬೆಂಗಳೂರಿನ 9 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ ಕೊರೊನಾ […]

ಸಿಲಿಕಾನ್ ಸಿಟಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬೇಗೂರಿನಲ್ಲಿ ಖಾಸಗಿ ಕಂಪನಿ ಗೋದಾಮಿನಲ್ಲಿ  ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸೆರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿ ತಗುಲಿದ್ದು, ಬಿಸಿಲು ಕಾಲ ಆಗಿರೋಂದ್ರಿದ್ದ ಭಾರೀ ಪ್ರಮಾಣದಲ್ಲಿ ಬೆಂಕಿಯ ಹಾವರಿಸಿದೆ. ಬೆಂಕಿ ನಂದಿಸಲು ಹರಸಾಹಸ ಪಡುತ್ತಿರೋ  ಅಗ್ನಿಶಾಮಕ ದಳದ ಸಿಬ್ಬಂದಿ .ಬೇಗೂರು ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಅಂತ ಅಂದಾಜಿಸಲಾಗಿದೆ..  

ಬೆಂಗಳೂರಿಗೆ ಹೊಂಗಸಂದ್ರದ ಸ್ಲಂ ನಿವಾಸಿ ಬಿಹಾರಿ ಕಾರ್ಮಿಕನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅವನ ಸಂಪರ್ಕಕ್ಕೆ ಬಂದ 165 ಮಂದಿಯನ್ನು ಕ್ವಾರಂಟೈನ್ ಇಡಲಾಗಿದೆ. ಹೊಂಗಸಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಬಿಹಾರಿ ಕಾರ್ಮಿಕನ ಟ್ರಾವೆಲ್ ಹಿಸ್ಟರಿ ಭಯಾನಕವಾಗಿದೆ. ಹೊಂಗಸಂದ್ರ ಪ್ರದೇಶಕ್ಕೆ ರಾಸಾಯನಿಕ ಸಿಂಪಡಿಸಲಾಗ್ತಿದೆ. ಎಲ್ಲರ ಪರೀಕ್ಷೆ ನಡೆಯುತ್ತಿದೆ. ಸುತ್ತಮುತ್ತಲ ಜನರು ಭಯಗೊಂಡಿದ್ದಾರೆ. ಬಿಹಾರಿ ಕಾರ್ಮಿಕ ಅನೇಕ ಕಡೆ ಓಡಾಡಿದ್ದಾನೆ. ಆತನ ಸಂಪರ್ಕದಲ್ಲಿದ್ದ 9 ಮಂದಿಗೆ ಸೋಂಕಿರುವುದು ದೃಢಪಟ್ಟಿದೆ. ಈತ ಹೋಗಿದ್ದ ಮೂರು ಆಸ್ಪತ್ರೆಯನ್ನು ಸೀಲ್ ಡೌನ್ […]

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ದಾಳಿಯನ್ನು ನಡೆಸಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್ ಗೆ ಇನ್ಮುಂದೆ ಮತ್ತಷ್ಟು ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.  ದಾಳಿಗೆ ಮುಂದಾದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಗ್ರೀನ್ ಜೋನ್ ವಾತಾವರಣವಿದೆ. […]

ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಲಾಕ್‌ ಡೌನ್ ಜಾರಿಗೊಳಿಸಿದೆ, ನಗರದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಚಿಕಿತ್ಸೆ ಸಿಗದೆ ಗರ್ಭಿಣಿ ಸಾವನ್ನಪ್ಪಿದ ಘಟನೆ‌ ಬುಧವಾರ ನಡೆದಿದೆ. ಕಡಪಟ್ಟಿ ಗ್ರಾಮದ ನಿವಾಸಿ ರೂಪಾ ಶಿವಾನಂದ ಹೊಸಮನಿ(23) ಮೃತ ಗರ್ಭಿಣಿ. ಕೊರೊನಾ ಹಿನ್ನೆಲೆ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆ ವೈದ್ಯರ ಹಿಂದೇಟು ಹಾಕುತ್ತಿದ್ದಾರೆ.  ಆಂಬುಲೆನ್ಸ್ ನಲ್ಲಿ ಗರ್ಭಿಣಿಯನ್ನು ಹೊತ್ತು  ವಿವಿಧ ಖಾಸಗಿ ಆಸ್ಪತ್ರೆಗೆ ಸಂಬಂಧಿಕರ ಅಲೆದಾಟ ನಡೆಸಿದ್ದಾರೆ. ಆದ್ರೆ‌ ಯಾವುದೇ […]

ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 9 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಸೋಂಕಿತರ ಪೈಕಿ  ಕಲುಬುರ್ಗಿಯಲ್ಲಿ 5, ಬೆಂಗಳೂರು 2 ಮತ್ತು ಮೈಸೂರನಲ್ಲಿ ಇಬ್ಬರಿಗೆ  ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ […]

ನವದೆಹಲಿ: ಕೊರೊನಾ ತೀವ್ರವಾಗಿ ಹರಡುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಕಾಲಿಟ್ಟಿದೆ. ಹೌದು ಏ. ೨೦ ರಂದು ಉದ್ಯೋಗಕ್ಕೆ ಹಾಜರಾದ ಸಚಿವಾಲಯದ ಉದ್ಯೋಗಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದರಿಂದ ದೆಹಲಿಯ ಜೋರ್ ಬಾಗ್‌ನ ರಾಜೀವ್ ಗಾಂಧಿ ಭವನ ಸಚಿವಾಲಯದ ಪ್ರಧಾನ ಕಚೇರಿಯನ್ನು ಪ್ರೋಟೋಕಾಲ್ ಮೂಲಕ ಮೊಹರು ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದ ಎಲ್ಲ ಸಹೊದ್ಯೋಗಿಗಳನ್ನು ಮುನ್ನಚ್ಚರಿಕೆಯಾಗಿ ಸ್ವಯಂ-ಪ್ರತ್ಯೇಕತೆಗೆ ಕಳಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ […]

ಪಾದರಾಯಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವ ಗೂಂಡಾಗಳ ವರ್ತನೆಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಜನರನ್ನು ರಕ್ಷಣೆ ಮಾಡಲು ಹಗಲು ರಾತ್ರಿ ಎನ್ನದೆ ಪೊಲೀಸರು,ವೈದ್ಯರು ಕರ್ತವ್ಯದಲ್ಲಿ ತೊಡಗಿದ್ದಾರೆ. ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. […]

ರಾಮನಗರ : ಅಪಘಾತದಲ್ಲಿ ಸಾವನ್ನಪ್ಪಿದಂತ ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನಮಂತು ಮನಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಹನಮಂತು ಪತ್ನಿ, ತಾಯಿ ಸೇರಿದಂತೆ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಅಲ್ಲದೇ ತಾವು ಘೋಷಿಸಿದಂತೆ 5 ಲಕ್ಷ ರೂಪಾಯಿಗಳ ಸಹಾಯಧನದ ಚೆಕ್ ನ್ನು ಹನಮಂತು ಪತ್ನಿಗೆ ಹಸ್ತಾಂತರಿಸಿದರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದೆ ಅವರು, ಹನಮಂತು ಅವರ ಪತ್ನಿಗೆ ಅತ್ತೆಯ ಮನೆಯಲ್ಲಿಯೇ ಇರುವಂತೆ […]

Advertisement

Wordpress Social Share Plugin powered by Ultimatelysocial