ನವದೆಹಲಿ : ಕರ್ತವ್ಯ ನಿರ್ವಹಣೆ ವೇಳೆ ವೈದ್ಯರಿಗೆ ಸೂಕ್ತ ಭದ್ರತೆ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾರಕ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಗಲಿರುಳು ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಹೀಗಿದ್ದರೂ ದೇಶದ ವಿವಿಧೆಡೆ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ಘಟನೆಗಳು ವರದಿಯಾಗುತ್ತಲೇ ಇವೆ. ಹೀಗಾಗಿ ವೈದ್ಯರು ಸಾಂಕೇತಿಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಇಂದು […]

ಮೈಸೂರು : ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣ ಖಂಡನೀಯ. ಘಟನೆ ಕುರಿತು ಬೇಜವಾಬ್ದಾರಿ ತೋರಿದ ಶಾಸಕ ಜಮೀರ್ ಅಹಮದ್ ರನ್ನು ಕಾಂಗ್ರೆಸ್ ಪಕ್ಷವೇ ಹೊರ ಹಾಕಬೇಕೆಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ ವಿಶ್ವನಾಥ್, ಜಮೀರ್ ಮಾತುಗಳು ಸಾಮಾನ್ಯ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮುಳುವಾಗಿದೆ. ಜಮೀರ್ ಅಹಮದ್ ಖಾನ್ ಅವರದ್ದು ಸಮಾಜಘಾತುಕ ನಡವಳಿಕೆ. […]

ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಗೆ ನಿಂದಿಸಿ ಹಲ್ಲೆ ಮಾಡುವವರು, ಧಮ್ಕಿ ಹಾಕಿದವರು ಮನುಷ್ಯರಲ್ಲ, ಮೃಗಗಳು. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.  

ಬೆಂಗಳೂರು.ಏ.21 : ಕಲಬುರಗಿಯಲ್ಲಿ ಬಲಿಯಾದ 80 ವರ್ಷದ ವೃದ್ಧನಿಗೆ ಮಾರಕ ಕೊರೊನಾ ಸೋಂಕು ತಗುಲಿದ್ದು ಖಚಿತವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮುಖಾಂತರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಲಬುರ್ಗಿಯಲ್ಲಿ ನಿನ್ನೆ ಬೆಳಗ್ಗೆ ಸಾವನ್ನಪ್ಪಿದ 80 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಕಳೆದ 3 ವರ್ಷಗಳಿಂದ ಈ ವ್ಯಕ್ತಿ ಪಾರ್ಕಿನ್ಸನ್ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಿದರು.

ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ನೇರ ಕಾರಣರಾಗಿದ್ದು, ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯ ಮೇಲೆ ನಡೆಸಿದ ಹಲ್ಲೆ ಖಂಡನೀಯ. ಈ ಪ್ರಕರಣದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಸಿಬ್ಬಂದಿಯ ನಡೆಯೇ ತಪ್ಪು ಎಂಬಂತೆ ಮಾತನಾಡಿರುವ ಶಾಸಕರ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ನ್ಯಾಷನಲ್ ಸೆಕ್ಯೂರಿಟಿ […]

ಕೋವಿಡ್-19 ಹಿನ್ನೆಲೆ ನಾಗರೀಕರಿಗೆ ಅಗತ್ಯ ಸೇವೆಗಳನ್ನು ಮನೆಗಳಿಗೆ ತಲುಪಿಸುವ ಉದ್ದೇಶದಿಂದ ನಗರಾದ್ಯಂತ “ಹೋಮ್ ಡಿಲಿವೆರಿ ಸಹಾಯವಾಣಿ”ಗೆ ಸನ್ಮಾನ್ಯ ಮುಖ್ಯಮಂತ್ರಿಗಳು, ಪೂಜ್ಯ ಮಹಾಪೌರರು ಮುಖ್ಯಮಂತ್ರಿ ರವರ ಗೃಹ ಕಛೇರಿ ಕೃಷ್ಣದಲ್ಲಿ ಚಾಲನೆ ನೀಡಿದರು. ಈ ವೇಳೆ ಉಪಮುಖ್ಯಮಂತ್ರಿಗಳು ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಸಂಸದರಾದ ಶ್ರೀ ಪಿ.ಸಿ.ಮೋಹನ್, ಶ್ರೀ ತೇಜಸ್ವಿ ಸೂರ್ಯ, ಕಂದಾಯ ಸಚಿವರು ಶ್ರೀ ಆರ್.ಅಶೋಕ್,  ರಾಜ್ಯ ಸಭಾ ಸದಸ್ಯರು ರಾಜೀವ್ ಚಂದ್ರಶೇಖರ್, ಉಪಮಹಾಪೌರರು ಶ್ರೀ ರಾಮಮೋಹನ ರಾಜು, ಆಡಳಿತ ಪಕ್ಷದ […]

ಬೆಂಗಳೂರು:  ಕಮೀಷನರ್ ಕಾರ್ಯ ವೈಖರಿ ವಿರುದ್ದ ಡಿಜಿ ಪ್ರವೀಣ್ ಸೂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.‌ನಗರದಲ್ಲಿ ವಾಹನಗಳ ಸಂಚಾರ ದಿನೇ ದಿನೇ ಜಾಸ್ತಿಯಾಗ್ತಿದೆ.ಲಾಕ್ ಡೌನ್ ಏರಿಯಾಗಳಲ್ಲಿ ಟ್ರಾಫಿಕ್ ಪೊಲೀಸರು ಏನ್‌ ಕೆಲಸ ಮಾಡ್ತಿದ್ದಾರೆ..ಲಾಕ್ ಡೌನ್ ಏರಿಯಾಗಳಲ್ಲಿ ಇರೋ ಬ್ಯಾರಿಗೇಡ್ ಸಡನ್ ಆಗಿ ತೆಗೆದಿದ್ದಾರೆ.ಹಲವಾರು ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಪಾಸ್ ಗಳನ್ನ ಚೆಕ್ ಮಾಡ್ತಿಲ್ಲ.ಟ್ರಾಪಿಕ್ ಅಧಿಕಾರಿಗಳು ಏನ್ ಕೆಲಸ ಮಾಡ್ತಾ ಇದ್ದಾರೆ ಗೊತ್ತೆ ಆಗ್ತಿಲ್ಲ..ಬೇರೆ ಜಿಲ್ಲೆಯ ಪಾಸ್ ಒಂದಿರುವ ವಾಹನಗಳು ಸಿಟಿಯಲ್ಲಿ ಓಡಾಡೋ […]

ದೇಶದಾದ್ಯಂತ ಕೋವಿಡ್ 19 ನಿಂದ ಜನತೆ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದು  ನಮ್ಮ ರಾಜ್ಯದಲ್ಲೂ ಕೂಡ ಬಡವರಿಗೆ ಜೀವನಕ್ಕೆ ಅಗತ್ಯ ವಸ್ತುಗಳನ್ನು ಕೊಳ್ಳಲು ಕಷ್ಟವಾದ ಹಿನ್ನೆಲೆ  ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷರು ಡಿ ಕೆ ಶಿವಕುಮಾರ್ ಅವರ ಆದೇಶದಂತೆ ಮೇರೆಗೆ   ಪರಿಹಾರ ನಿಧಿ ಸ್ಥಾಪಿಸಿದ್ದು ಪಕ್ಷದ ಶಾಸಕರೆಲ್ಲ ತಮ್ಮ ದೇಣಿಗೆಯನ್ನು ನೀಡಿದ್ದು ಅದೇ ರೀತಿ ಗಣಿನಾಡು ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ರವರು ಇಂದು ಬಳ್ಳಾರಿ ನಗರದಲ್ಲಿ […]

ಮೈಸೂರು : ಎನ್.ಆರ್.ಠಾಣಾ ವ್ಯಾಪ್ತಿಯ ಆಲೀಂನಗರದಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲೀಂನಗರದಲ್ಲಿ ಆಶಾಕಾರ್ಯಕರ್ತೆ ಸುಮಯಾ ಫಿರ್ದೋಸಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಧಮ್ಕಿ ಹಾಕಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುಬೇಕು. ಧಮ್ಕಿ ಹಾಕಿದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ. ಸುಗ್ರೀವಾಜ್ಞೆ ಜಾರಿಯಾದ ಬಳಿಕ ಆರೋಪಿಗಳಿಗೆ ಶಿಕ್ಷೆ […]

ಬೆಂಗಳೂರು.ಏ.20: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು. ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ಮಕ್ಕಳಿಗೆ ತಾವೇ ಫೋನ್‍ನಲ್ಲಿ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ವಿಚಾರಿಸಿದರಲ್ಲದೇ ಶಿಕ್ಷಣ ಇಲಾಖೆ ವತಿಯಿಂದ ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಇಷ್ಟರಲ್ಲಿಯೇ […]

Advertisement

Wordpress Social Share Plugin powered by Ultimatelysocial