ಬೆಂಗಳೂರು, ನಗರದ ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೋನ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ […]

ಬೆಂಗಳೂರು.ಏ.20: ನಿನ್ನೆ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಪಟ್ಟ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಮುಖಂಡರ ಜೊತೆಗೆ ಡಿಕೆ ಶಿವಕುಮಾರ್ ಘಟನೆಯ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ  ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖಂಡರು, ನಾಯಕರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಎನ್ ಎ ಹ್ಯಾರಿಸ್, ಜಮಿರ್ ಅಹಮದ್ ಖಾನ್, […]

ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆಸುವ ಪ್ರಯತ್ನ ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸಿ ಕಠಿಣ‌‌ ಕ್ರಮ ಜರುಗಿಸಬೇಕು ಎಂದು  ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹವರ ನಿಯಂತ್ರಿಸದಿದ್ದರೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ.‌ ಹೀಗಾಗಿ ಈ ರೀತಿ ಪುಂಡಾಟ ಮಾಡಿದವರನ್ನು ಕೂಡಲೇ  ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವರು ಇಂತಹವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯ ಮಾಡಿದ್ದೇನೆ. […]

ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ.‌ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ೫೪ ಜನರನ್ನು ಇದುವರೆಗೆ ಬಂಧಿಸಲಾಗಿದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಲೂರಿನಲ್ಲಿ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ‌ಕ್ರಮ‌ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ.‌ ಶೀಘ್ರದಲ್ಲೇ ‌ಮತ್ತಷ್ಡು ಕಿಡಿಗೇಡಿಗಳನ್ನು ಬಂಧಿಸಲಾಗುವುದು.ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. […]

Advertisement

Wordpress Social Share Plugin powered by Ultimatelysocial