ಸರ್ಕಾರದ ಆದೇಶ ಆಜಾನ್​ಗೆ ಅನ್ವಯ ಆಗುವುದಿಲ್ಲ;

ಬೆಳಗ್ಗೆ 5 ಗಂಟೆಗೆ ಕೂಗುವ ಆಜಾನ್ ಅದು ಪ್ರಾರ್ಥನೆ ಅಲ್ಲ. ಬೆಳಗ್ಗೆ 5 ಗಂಟೆಗೆ ಕೂಗುವುದು ಪ್ರಾರ್ಥನೆಗೆ ಕರೆಯುವ ಸಂದೇಶ. ಸುಪ್ರೀಂಕೋರ್ಟ್ ಆದೇಶದಲ್ಲೂ ಆಜಾನ್ ಬಗ್ಗೆ ವಿರೋಧ ಇಲ್ಲ.ಬೆಂಗಳೂರು: ಮಸೀದಿಗಳಲ್ಲಿ (Azan) ನಿಷೇಧಿಸಬೇಕೆಂದು ಈಗಾಗಲೇ ಹಿಂದೂ ಸಂಘಟನೆ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಮನವಿಯನ್ನು ಸ್ವೀಕರಿಸಿದ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಲೌಡ್ಸ್ಪೀಕರ್ (Loud Speaker) ಬಳಸುವವರು 15 ದಿನಗಳ ಒಳಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ತಿಳಿಸಿದೆ. ಜೊತೆಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸದಂತೆ ಸೂಚನೆ ನೀಡಿದೆ. ಈ ಆದೇಶಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸರ್ಕಾರದ ಆದೇಶ ಆಜಾನ್ಗೆ ಅನ್ವಯ ಆಗುವುದಿಲ್ಲ ಎಂದಿದ್ದಾರೆ.

ಬೆಳಗ್ಗೆ 5 ಗಂಟೆಗೆ ಕೂಗುವ ಆಜಾನ್ ಅದು ಪ್ರಾರ್ಥನೆ ಅಲ್ಲ. ಬೆಳಗ್ಗೆ 5 ಗಂಟೆಗೆ ಕೂಗುವುದು ಪ್ರಾರ್ಥನೆಗೆ ಕರೆಯುವ ಸಂದೇಶ. ಸುಪ್ರೀಂಕೋರ್ಟ್ ಆದೇಶದಲ್ಲೂ ಆಜಾನ್ ಬಗ್ಗೆ ವಿರೋಧ ಇಲ್ಲ. ಆಜಾನ್ಗೆ ನಾವು ಧ್ವನಿವರ್ಧಕ ಮೂಲಕವೇ ಕರೆಯಬೇಕು. ಸರ್ಕಾರದ ಆದೇಶ ಏನಿದೆ ಅದನ್ನ ಪಾಲನೆ ಮಾಡುತ್ತೇವೆ. ಆದರೆ ಆಜಾನ್ಗೆ ತಡೆಯಿಲ್ಲ ಎಂದು ಮೊಹಮ್ಮದ್ ಷಫಿ ಸಾ-ಆದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧ:
ಅಜಾನ್ ವಿರುದ್ಧ ಹನುಮಾನ್ ಚಾಲೀಸಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸುವ ನಿರ್ದೇಶನಗಳ ಭಾಗವಾಗಿ 15 ದಿನಗಳಲ್ಲಿ ಅಧಿಕಾರಿಗಳಿಂದ ಲಿಖಿತ ಅನುಮತಿಯನ್ನು ಪಡೆಯಲು ಧ್ವನಿ-ಉತ್ಪಾದಿಸುವ ಉಪಕರಣಗಳ ಎಲ್ಲಾ ಬಳಕೆದಾರರನ್ನು ಸರ್ಕಾರ ಕೇಳಿದೆ. ಒಂದು ಧ್ವನಿವರ್ಧಕ ಅಥವಾ ಲೌಡ್ ಸ್ಪೀಕರ್ ರಾತ್ರಿಯಲ್ಲಿ (ರಾತ್ರಿ 10.00 ರಿಂದ ಬೆಳಗ್ಗೆ 6.00 ರ ನಡುವೆ) ಸಂವಹನಕ್ಕಾಗಿ ಮುಚ್ಚಿದ ಆವರಣಗಳನ್ನು ಹೊರತುಪಡಿಸಿ ಬೇರೆಲ್ಲೂ ಬಳಸಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅನುಮತಿ ಪಡೆಯದವರು, ಸ್ವಯಂಪ್ರೇರಣೆಯಿಂದ ಧ್ವನಿವರ್ಧಕಗಳು ಮತ್ತು ಧ್ವನಿ-ಉತ್ಪಾದಿಸುವ ಉಪಕರಣಗಳನ್ನು ತೆಗೆದುಹಾಕಬೇಕು. ಇಲ್ಲವೇ ನೀಡಲಾದ ಗಡುವಿನಿಂದ 15 ದಿನಗಳಲ್ಲಿ ಗೊತ್ತುಪಡಿಸಿದ ಪ್ರಾಧಿಕಾರದಿಂದ ಅದನ್ನು ತೆಗೆದುಹಾಕಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಿದೆ. ಅಧಿಸೂಚನೆಯು 2002 ರ ಸರ್ಕಾರಿ ಆದೇಶವನ್ನು ಉಲ್ಲೇಖಿಸಿದ್ದು, ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಜವಾಬ್ದಾರಿಯಾಗಿ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಪರಿಷತ್ ನಾಲ್ಕು ಕ್ಷೇತ್ರಗಳ ಚುನಾವಣೆ ದಿನಾಂಕ ಘೋಷಣೆ

Thu May 12 , 2022
  ಬೆಂಗಳೂರು : ವಿಧಾನಪರಿಷತ್ ನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಗುರುವಾರ ತಿಳಿಸಿದ್ದಾರೆ. ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಜೂನ್ 4 ಕ್ಕೆ ದಕ್ಷಿಣ ಮತ್ತು ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಮತ್ತು ಕೆ.ಟಿ.ಶ್ರೀಕಂಠೇ ಗೌಡ, ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ […]

Advertisement

Wordpress Social Share Plugin powered by Ultimatelysocial