ರಾಜ್ಯ ಆರೋಗ್ಯ ಇಲಾಖೆ ಸುಪರ್ದಿಗೆ ಬಿಬಿಎಂಪಿ ವ್ಯಾಪ್ತಿಯ 51 ಆರೋಗ್ಯ ಕೇಂದ್ರ!

 

ಬೆಂಗಳೂರು, ಮೇ 6: “ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.

ಕೆ. ಸುಧಾಕರ್ ಹೇಳಿದರು.

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರಣ ಹೊಂದಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ ಸಮುದಾಯ ಕೇಂದ್ರಗಳನ್ನು ಸರ್ಕಾರವೇ ನೇರವಾಗಿ ನಿರ್ವಹಿಸಲು ತೀರ್ಮಾನಿಸಿದೆ” ಎಂದು ಸಚಿವರು ತಿಳಿಸಿದರು.

ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ಬಿಬಿಎಂಪಿ ನೇಮಿಸಿರುವ ಸಿಬ್ಬಂದಿ, ಪಿಠೋಪಕರಣಗಳು ಮತ್ತು ಸಲಕರಣೆಗಳು ಕೂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿಕೊಳ್ಳಲಿದೆ. ಸರ್ಕಾರದ ಎಲ್ಲಾ ಸೌಲಭ್ಯಗಳು ರಾಜ್ಯದಾದ್ಯಂತ ಒಂದೇ ರೀತಿ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟು 51 ಆರೋಗ್ಯ ಕೇಂದ್ರಗಳು; ಬೆಂಗಳೂರು ನಗರದ ಆರೋಗ್ಯ ಅಭಿಯಾನದ ಅಡಿಯಲ್ಲಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅದರ ಅಡಿ ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ರಾಜ್ಯ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿದೆ ಎಂದು ಉಲ್ಲೇಖಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ನಿರ್ವಹಣೆ ಒಂದೇ ರೀತಿ ನಡೆಯಬೇಕು. ಸರ್ಕಾರದ ಸೌಲಭ್ಯಗಳು ನಗರದ ಪ್ರದೇಶವಾಗಿರಲಿ ಅಥವಾ ಹಳ್ಳಿಯೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯಲ್ಲಿ ಇರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಇದು ನೆರವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದ BMTC ನೌಕರ

Sat May 7 , 2022
ಬೆಂಗಳೂರು: ಬಿಎಂಟಿಸಿ ನೌಕರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ನೌಕರ ಶಂಬುಲಿಂಗಯ್ಯ ಚಿಕ್ಕಮಠ ಎಂಬುವವರು, ಹೊತ್ತಿನ ಊಟಕ್ಕೂ ಗತಿಯಿಲ್ಲ, ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ನಾನು ಮುಷ್ಕರದಲ್ಲಿ ಕೂಡ ಭಾಗಿಯಾಗಿಲ್ಲ. ಆದರೂ ಬಿಎಂಟಿಸಿ ಅಧಿಕಾರಿಗಳು ನನ್ನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಒಂದು ವರ್ಷದಿಂದ ಕೆಲಸವಿಲ್ಲದೇ ಪರದಾಡುತ್ತಿದ್ದೇನೆ ಹಾಗಾಗಿ ನನಗೆ […]

Advertisement

Wordpress Social Share Plugin powered by Ultimatelysocial