ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಲು ನಡೆದಿಲ್ಲ.

ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಅದರಂತೆ ಮೇ 16ರಿಂದ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಕ್ಕಳ ಕಲಿಕಾ ಹಂತವನ್ನು ಸರಿದೂಗಿಸಲು, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷದ ಪ್ರಕ್ರಿಯೆ ಸುಗಮವಾಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಉಪಯೋಗಕಾರಿಯಾಗಲಿದೆ. ಮೇ 16 ರಿಂದ ಶಾಲೆಗಳು ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ ಹೇಳಿದ್ದಾರೆ.

ಕಳೆದ ಎರಡು ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಯು ಗಳಿಸಿಕೊಳ್ಳಬೇಕಾದ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ಗಳಿಸಿಕೊಳ್ಳಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಲು ಬೇಸಿಕ್ ಶಿಕ್ಷಣ, ಸಂಖ್ಯಾಜ್ಞಾನದ ಜೊತೆಗೆ ಕಳೆದ ಎರಡು ವರ್ಷಗಳಲ್ಲಿ ಉಂಟಾಗಿರುವ ಕಲಿಕಾ ನ್ಯೂನ್ಯತೆಯನ್ನು ಸರಿಪಡಿಸಿಕೊಂಡು ಈ ಶೈಕ್ಷಣಿಕ ವರ್ಷಕ್ಕೂ ಯಾವುದೇ ತೊಂದರೆಯಾಗದಂತೆ ಕ್ರಮವಹಿಸುವುದು ಕಲಿಕಾ ಚೇತರಿಕೆಯ ಮೂಲ ಉದ್ದೇಶವಾಗಿದೆ.

ವಿದ್ಯಾರ್ಥಿಗಳಿಗೆ ಬುನಾದಿ ಶಿಕ್ಷಣದ ಜೊತೆಗೆ ಸಂಖ್ಯಾ ಜ್ಞಾನವನ್ನು ವೃದ್ದಿಸಿ ಕಲಿಕೆಗೆ ಬೇಕಾಗಿರು ಕಲಿಕಾ ಸಾಮಗ್ರಿಗಳನ್ನು ತಯಾರಿಸಿಕೊಂಡು ಕಲಿಕಾ ಫಲಗಳು ಈಡೇರುವಂತೆ ಮಾಡುವುದಾಗಿದೆ. ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವ ಜವಾಬ್ದಾರಿಯನ್ನು ಡಿಡಿಪಿಐ ಮತ್ತು ಬಿಇಒಗಳಿಗೆ ನೀಡಲಾಗಿದೆ.

ಕಲಿಕಾ ಚೇತರಿಕೆಯ ಗುರಿಗಳೇನು?
*ರಾಷ್ಟೀಯ ಶಿಕ್ಷಣ ನೀತಿ 2020- ಆಶಯದಂತೆ ಬುನಾದಿ ಸಾಕ್ಷರತೆೆ(Basic Education) ಹಾಗೂ ಸಂಖ್ಯಾಜ್ಞಾನವನ್ನು ಬೆಳೆಸುವುದು.

*2022-23ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ವರ್ಷ ಘೋಷಿಸುವುದು. ರಾಜ್ಯಾದ್ಯಂತ ಏಕರೂಪದ ಶಿಕ್ಷಣ ವ್ಯವಸ್ಥೆಯನ್ನು ನಿಶ್ಚಿತಗೊಳಿಸುವುದು.

*ಎಲ್ಲಾ ವಿದ್ಯಾರ್ಥಿಗಳ ಭಾವನಾತ್ಮಕ ಅಗತ್ಯತೆಗಳ ಬೆಂಬಲವಾಗಿ ಕಲಿಕಾ ಪ್ರಕ್ರಿಯೆಗೆ ಪೂರಕವಾಗಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವುದು.

*ಎಲ್ಲಾ ವಿದ್ಯಾರ್ಥಿಗಳ ಬುನಾದಿ ಶಿಕ್ಷಣ, ಸಂಖ್ಯಾಜ್ಞಾನ , ಎರಡು ವರ್ಷಗಳ ಕಲಿಯಬೇಕಿದ್ದ ಕಲಿಕಾ ಕೌಶಲ್ಯ ಮತ್ತು ಈ ಶೈಕ್ಷಣಿಕ ವರ್ಷ ಹೆಚ್ಚಾಗಬೇಕಾಗಿರುವ ಕೌಶಲ್ಯದ ಬಗ್ಗೆ ಗಮನಹರಿಸುವುದು.

*ಒಟ್ಟಾರೆ 2023-24 ನೇ ಶೈಕ್ಷಣಿಕ ವರ್ಷ ಪ್ರಾರಂಭದ ವೇಳೆಗೆ ಪ್ರತಿ ವಿದ್ಯಾರ್ಥಿಯು ತನ್ನ ತರಗತಿ ಮಟ್ಟದ ಕಲಿಕೆಯನ್ನು ಯಾವುದೇ ಅಡೆತಡೆ ಇಲ್ಲದೇ ಸಾಧಿಸಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳುವುದು.

ಡಿಡಿಪಿಐ ಮತ್ತು ಬಿಇಒಗಳಿಗೆ ಜವಾಬ್ದಾರಿ

ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವ ಜವಾಬ್ದಾರಿಯನ್ನು ಡಿಡಿಪಿಐ ಮತ್ತು ಬಿಇಒಗಳಿಗೆ ನೀಡಲಾಗಿದೆ. ಈ ಶೈಕ್ಷಣಿಕ ವರ್ಷ ಮೇ 16 ರಿಂದ ಪ್ರಾರಂಭವಾಗಲಿದ್ದು ವಿದ್ಯಾರ್ಥಿಗಳ ಕಲಿಕಾ ನ್ಯೂನ್ಯತೆಯನ್ನು ಸರಿದೂಗಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಯೋಜನೆಯನ್ನು ಹಾಕಿಕೊಳ್ಳಲಾಗದೆ. ಶಾಲಾ ಹಂತದಲ್ಲಿ ನಡೆಯಲಿರುವ ಕಲಿಕಾ ಚೇತರಿಕೆಯ ಮಾಹಿತಿಯನ್ನು ಸಿಆರ್ ಪಿಗಳ ಮೂಲಕ ತರಿಸಿಕೊಂಡು ಡಿಡಿಪಿಐ ಮತ್ತು ಬಿಇಒಗಳು ಪರಿಶೀಲಿಸಲಿದ್ದಾರೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ

ಕಲಿಕಾ ಚೇತರಿಕೆ ಕಾರ್ಯಕ್ರಮ ಸರ್ಕಾರಿ, ಅನುದಾನಿತ , ಅನುದಾನ ರಹಿತ ಶಾಲೆಗಳಿಗೂ ಅನ್ವಯಿಸಲಿದೆ. ಮೊದಲ ತಿಂಗಳು ಬ್ರಿಡ್ಜ್ ಕೋರ್ಸ್ ಮಾಡುವ ಮೂಲ ಹಿಂದಿನ ತರಗತಿಯಲ್ಲಿ ಕಲಿಯಬೇಕಿದ್ದ ಪ್ರಮುಖ ವಿಷಯವನ್ನು ತಿಳಿಸುವುದು. ಎಲ್ಲಕ್ಕಿಂತ ಮುಖ್ಯವಾಗಿ ಮಕ್ಕಳು ಸರಳ ಮತ್ತು ಸುಲಲಿತವಾಗಿ ಓದುವುದು ಮತ್ತು ಬರೆಯುವುದನ್ನು ಕಲಿಯಬೇಕಾಗಿದೆ. ಓದು ಬರಹ ಬರದಿದ್ದರೇ ಉನ್ನತ ತರಗತಿಗಳಲ್ಲಿ ಎಷ್ಟೇ ಪಾಠವನ್ನು ಬೋಧನೆಯನ್ನು ಮಾಡಿದರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿಯೇ ಕಲಿಕಾ ಚೇತರಿಕೆ ಕಾರ್ಯಕ್ರಮದಲ್ಲಿ ಬುನಾದಿ ಶಿಕ್ಷಣ ಬಹಳ ಮುಖ್ಯವಾಗಿದೆ.

ಶಿಕ್ಷಣ ಸಚಿವರು ಹೇಳಿದ್ದೇನು?

“ಎರಡು ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಕೌಶಲ್ಯವನ್ನೇ ಕಸಿದುಕೊಂಡಿದೆ. ಇದರಿಂದಾಗಿ ಕಲಿಕಾ ಚೇತರಿಕೆಯ ಕಾರ್ಯಕ್ರಮದ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿಗಳಿಗೆ ಬರುವಂತೆ ಮಾಡುವುದು ಹಾಗೂ ಮಕ್ಕಳ ಕಲಿಕೆಯ ನ್ಯೂನ್ಯತೆಯನ್ನು ಪತ್ತೆ ಮಾಡಿ ಉತ್ತಮ ಶಿಕ್ಷಣವನ್ನು ನೀಡಬೇಕಾಗಿದೆ. ಇನ್ನು ಮೇ 16 ರಿಂದ ಶಾಲೆಗಳು ಪ್ರಾರಂಭವಾಗಲಿದೆ” ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಖಚಿತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 2ನೇ ವಾರದಲ್ಲಿ ಸಂಪುಟ ಪುನಾರಚನೆ..?

Thu May 5 , 2022
  ಬೆಂಗಳೂರು,ಮೇ5- ಪ್ರಧಾನಿ ನರೇಂದ್ರಮೋದಿ ಅವರು ವಿದೇಶ ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ನಡೆಯಲಿದ್ದು, ಮೇ 2ನೇ ವಾರ ಸಂಪುಟ ಪುನಾರಚನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮೇ 11ರಂದು ಸಂಪುಟ ಸಭೆ ನಿಗದಿಯಾಗಿದೆ.ಸಂಪುಟ ಪುನಾರಚನೆ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು. ಸಿಎಂ ಬೊಮ್ಮಾಯಿ ಅವರ ಜೊತೆ ಯಾರ್ಯಾರನ್ನು ಕೈ ಬಿಡಬೇಕು ಮತ್ತು ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟ […]

Advertisement

Wordpress Social Share Plugin powered by Ultimatelysocial