ಕಾಂಗ್ರೆಸ್ ಮೂಲ ಇಟಲಿ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಟಾಂಗ್ ನೀಡಿದರು.

ಕೊಪ್ಪಳ: ಸಂಘಪರಿವಾರದ ಮೂಲ ಎಲ್ಲರಿಗೂ ಗೊತ್ತಿದೆ. ಆದರೆ, ಕಾಂಗ್ರೆಸ್ ಮೂಲ ಇಟಲಿ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಟಾಂಗ್ ನೀಡಿದರು.

ನಗರದಲ್ಲಿ ಶನಿವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಐದು ವರ್ಷದ ತಮ್ಮ ಅಧಿಕಾರದಲ್ಲಿ ಏನು ಮಾಡಿದ್ದಾರೆಂದು ಕಿಡಿಕಾರಿದರು.

ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಪಿತೂರಿ ಇದೆ. ನಾವು ಹಿಜಾಬ್ ನೋಡುತ್ತಿಲ್ಲ. ಅದರ ಹಿಂದಿರುವ ಪಿತೂರಿ ಬಗ್ಗೆ ಮಾತನಾಡುತ್ತಿದ್ದೇವೆ. ಈ ದೇಶದ ಕಾನೂನು ಉಲ್ಲಂಘನೆ ಮಾಡುವವರನ್ನು ಗಮನಿಸುತ್ತಿದ್ದೇವೆ. ಇವತ್ತಲ್ಲ ನಾಳೆ ಅವರು ಇಡೀ ದೇಶದ ಕಾನೂನು ಉಲ್ಲಂಘನೆ ಮಾಡುತ್ತೇವೆ ಎನ್ನುತ್ತಾರೆ. ಅದನ್ನೆಲ್ಲ ಒಪ್ಪಲಾಗಲ್ಲ. ಕೆಲವು ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ಗೆ ಅಂಥವರನ್ನು ಬೆಂಬಲಿಸುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಪರೋಕ್ಷ ಆರೋಪ ಮಾಡಿದರು‌.

ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸೋದರಲ್ಲಿ ಮೊದಲಿನಿಂದಲೂ ತಪ್ಪಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ಎಲ್ಲ ಗ್ರಾಮಗಳಿಂದ ಜನರು ಭಾಗಿಯಾಗಿದ್ದರು. ಇತಿಹಾಸದ ಮೂಲಕ ಅದನ್ನು ತಿಳಿಸುವಲ್ಲಿ ವಿಫಲವಾಗಿದ್ದೇವೆ. ಹೀಗಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅದನ್ನು ತಿಳಿಸುತ್ತಿದ್ದೇವೆ ಎಂದರು.

ಪಠ್ಯ ಪುಸ್ತಕ ರಚನೆ ಸಂಬಂಧ ಅನಗತ್ಯ ವಿವಾದ ಎಬ್ಬಿಸಲಾಗುತ್ತಿದೆ. ರಾಷ್ಟ್ರೀಯತೆ, ಹಿಂದುತ್ವ ಸಹಿಸಕೊಳ್ಳದವರು ವಿವಾದ ಮಾಡುತ್ತಿದ್ದಾರೆ. ಟೀಕಿಸಲು ಏನೂ‌ ಸಿಗದಿದ್ದಾಗ ಜಾತಿ ಬಗ್ಗೆ ಮಾತನಾಡುತ್ತಾರೆ. ಬ್ರಿಟಿಷರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ದೇಶದ ಜನರಿಗೆ ಯಾವುದು ನಿಜ, ಯಾವುದು ಸುಳ್ಳು ಅನ್ನೋದು ಗೊತ್ತಿದೆ. ಮೊದಲು ಟಿಪ್ಪು, ಭಗತ್ ಸಿಂಗ್, ನಾರಾಯಣ ಗುರು, ಬಸವಣ್ಣವರನ್ಮು ಪಠ್ಯದಿಂದ ತಗೆದು ಹಾಕಿದರೆಂದು ಸುಳ್ಳು ಹೇಳಿದರು. ಈ ಮೂಲಕ ಹಿಂದುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರಿಂದ ಅಧಿಕಾರ ವಹಸಿಕೊಂಡ ದಿನದಿಂದ ಕಾಂಗ್ರೆಸ್ ಮಾಡಿದ್ದು ಇದನ್ನೆ. ಹಿಂದಿನ ಸರ್ಕಾರ ಮಕ್ಕಳನ್ನು ಒಡೆಯೋ ಕೆಲಸ ಮಾಡಿದ್ದು ಎಲ್ಲರಿಗೂ ಗೊತ್ತಿದೆ ಎಂದು ಕೈ ನಾಯಕರ ವಿರಿದ್ಧ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ:

Sat May 28 , 2022
  ಬೆಂಗಳೂರು: ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು. ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇವೆ. ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನಾವು ಸ್ಪಷ್ಟವಾಗಿ ಸಂದೇಶ ಕಳುಹಿಸಿದ್ದೇವೆ. ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದರು. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಪೆಟ್ರೋಲ್ ದರ ಕಡಿಮೆ ಮಾಡುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಚರ್ಚೆ ನಡೆಸಿ ನಂತರ ತೀರ್ಮಾನ […]

Advertisement

Wordpress Social Share Plugin powered by Ultimatelysocial