ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

 

ಬೆಂಗಳೂರು, ಜೂನ್ 29: ಹೆಣ್ಣೊಂದು ಕಲಿತರ ಶಾಲೆಯೊಂದು ತೆರೆದಂತೆ ಅನ್ನೋದು ಬಹಳ ಪ್ರಚಲಿತದಲ್ಲಿದ್ದ ಮಾತು. ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವವನ್ನು ಸಾರುವ ವಿಚಾರವೂ ಹೌದು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಕೋಟ್ಯಾಂತರ ಹಣವನ್ನು ಖರ್ಚು ಮಾಡುತ್ತಿದೆ.

ಇದೀಗ ಪದವಿ ಪೂರ್ವ ಶಿಕ್ಷಣದಲ್ಲಿಯೂ ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್ ಅನ್ನು ಶಿಕ್ಷಣ ಇಲಾಖೆ ನೀಡಿದೆ.

ಶೈಕ್ಷಣಿಕ ವರ್ಷ 2022-23ನೇ ಸಾಲಿನಿಂದ ಪದವಿ ಪೂರ್ವ ಶಿಕ್ಷಣಕ್ಕೆ ಸೇರುವು ಅಂದರೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಸೇರುವ ವಿದ್ಯಾರ್ಥಿನಿಯ ಸಂಪೂರ್ಣ ಶುಲ್ಕ ವಿನಾಯಿತಿಯನ್ನು ನೀಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.

ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ; ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ಉಲ್ಲೇಖ 1ರಲ್ಲಿ ತಿಳಿಸಿರುವಂತೆ 2019-20ನೇ ಸಾಲಿನಿಂದ ರೂ. 456/- ಶುಲ್ಕದಿಂದ ವಿನಾಯಿತಿ ನೀಡಿ ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತಿವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗಿತ್ತು.

ಆದರೆ ಉಲ್ಲೇಖ ೨ ಸರ್ಕಾರ ಆದೇಶದಂತೆ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರೂ. 456/- ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿರುತ್ತದೆ. ಮುಂದುವರೆದು ಶುಲ್ಕ ಮರು ಪಾವತಿಗಾಗಿ ಲೆಕ್ಕ ಶೀರ್ಷಿಕೆ 2202-02-001-0-01 ಉಪ ಶೀರ್ಷಿಕೆ 103 ಅಡಿ ಅನುದಾನವನ್ನು ಸಂಬಂಧಿಸಿದ ಪ್ರಾಂಶುಪಾಲರ ಖಾತೆಗೆ ಖಜಾನೆ -2 ತಂತ್ರಾಂಶದ ಮೂಲ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.ಇನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ನೀಡಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಚಿವ ಬಿಸಿ ನಾಗೇಶ್ ಟ್ವಿಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ಗೆ 130 ಅಲ್ಲ 150 ಸ್ಥಾನ!

Thu Jun 30 , 2022
  ನವದೆಹಲಿ, ಜೂನ್ 30: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ಪಕ್ಷಗಳು ಅಣಿಯಾಗುತ್ತಿವೆ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆಗೆ ಒಂದು ಹೆಜ್ಜೆ ಮುಂದಿಟ್ಟು ಓಡುತ್ತಿದೆ. ಕಾಂಗ್ರೆಸ್ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ 130 ಸ್ಥಾನ ಗೆಲ್ಲುತ್ತದೆ ಎನ್ನುವ ವರದಿ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಕೊಟ್ಟಂತೆ ಆಗಿದೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕನಾಗಿರುವ ಗುರುವಾರ ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. “ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಬೇಕು ಎಂದು ಗುರಿ […]

Advertisement

Wordpress Social Share Plugin powered by Ultimatelysocial