ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಧರಿಸಿ ಬರುವುದು ಕಡ್ಡಾಯ.

 

ಹಿಜಾಬ್ ಸೇರಿದಂತೆ ಯಾವುದೇ ಧರ್ಮದ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಯುಸಿ ಪರೀಕ್ಷೆಯಲ್ಲಿ ಸಮವಸ್ತ್ರ ಇರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆಗೆ ಬರಬೇಕು.

ಸಮವಸ್ತ್ರ ಇಲ್ಲದ ಕಡೆ ಯಾವುದೇ ಧರ್ಮ ಬಿಂಬಿಸುವ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಶಿಕ್ಷಕರಿಗೆ ಸಮವಸ್ತ್ರ ಕಡ್ಡಾಯವಲ್ಲ. ಪರೀಕ್ಷಗೆ ಗೈರು ಹಾಜರಾದವರಿಗೆ ಸೆಪ್ಲಿಮೆಂಟರಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ ಎಂದು ಅವರು ಹೇಳಿದರು.

ಏಪ್ರಿಲ್ 22ರಿಂದ ಮೇ 18ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ಜರುಗಲಿದ್ದು, ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು. Online gambling is the practice of betting money online (rather than betting real money https://clickmiamibeach.com/ in a casino or other gambling establishment).

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರು ವಾರಗಳಲ್ಲಿ ಶಾಲೆ ಮೇಲ್ದರ್ಜೆಗೇರಿಸುವ ಮನವಿಗಳನ್ನು ಪರಿಗಣಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಹೇಳಿದೆ!

Tue Apr 19 , 2022
ಶಾಲೆಯ ಮೂಲಸೌಕರ್ಯಗಳ ಉನ್ನತೀಕರಣಕ್ಕಾಗಿ ಶಾಲೆಯೊಂದು ಸಲ್ಲಿಸಿರುವ ಅರ್ಜಿಯನ್ನು ಆರು ವಾರಗಳಲ್ಲಿ ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಶಿಕ್ಷಣದ ಹಕ್ಕಿಗೆ ಸಂಬಂಧಿಸಿದ ಸಂವಿಧಾನದ 21 ಎ ವಿಧಿಯು ರಾಜ್ಯ ಸರ್ಕಾರದ ಮೇಲೆ ಅಗಾಧವಾದ ಕರ್ತವ್ಯವನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಪಿ ಕೃಷ್ಣ ಭಟ್ ಹೇಳಿದರು. ಅರ್ಜಿದಾರರ ಶಾಲಾ ಟ್ರಸ್ಟ್ 2019-20 ರಿಂದ 9 ಮತ್ತು 10 ನೇ ತರಗತಿಗಳನ್ನು ಪ್ರಾರಂಭಿಸುವ ಮೂಲಕ ಅಗತ್ಯವಾದ ಒಂದು ಲಕ್ಷ ರೂಪಾಯಿ ಶುಲ್ಕವನ್ನು ಪಾವತಿಸುವ […]

Advertisement

Wordpress Social Share Plugin powered by Ultimatelysocial