ಅಲ್ಪಸಂಖ್ಯಾತ ಶಾಲೆಗಳಲ್ಲಿ ಧರ್ಮ ಬೋಧನೆ ನಿಷೇಧಕ್ಕೆ ಕ್ರಮ:

 

ಬೆಂಗಳೂರು: ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಇಡಲಾಗುವುದು.

ಎಲ್ಲ ಬಿಇಓಗಳಿಗೆ ಈ ಬಗ್ಗೆ ಪರಿಶೀಲಿಸಲು ಸೂಚಿಸುವುದಾಗಿ ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿ ಸುದ್ದಿಗಾರರಿಗೆ ತಿಳಿಸಿದರು.

ಅಡ್ಮಿಷನ್ ವೇಳೆ ಬೈಬಲ್​ಗೆ ಒಪ್ಪಿಗೆ ಇದೆಯೇ ಎಂದು ಕೇಳುತ್ತಿರುವ ಮಾಹಿತಿ ಇದೆ. ಒಪ್ಪಿಗೆ ಇಲ್ಲ ಅಂದರೆ ಪ್ರವೇಶ ಕೊಡುವುದಿಲ್ಲ ಎಂಬುವುದು ತಪ್ಪು. ಅದಕ್ಕೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು.

ರಾಜ್ಯದ ಎಲ್ಲ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆಗೆ ಸೂಚನೆ ನೀಡುವುದಾಗಿಯೂ ತಿಳಿಸಿದರು. ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಭೋದನೆ ವಿಚಾರ ಕುರಿತ ಪ್ರಶ್ನೆಗೆ, ಧರ್ಮದ ಆಧಾರದ ಮೇಲೆ ಸಮಾಜ ಒಡೆಯುತ್ತಿದ್ದಾರೆ. ಹೀಗಂತ ಬೇರೆ ಪಕ್ಷದವರು ಮಾತನಾಡುತ್ತಿದ್ದರು. ಈಗ ಅವರೆಲ್ಲರು ಎಲ್ಲಿಗೆ ಹೋದರು ಎಂದು ವ್ಯಂಗ್ಯವಾಡಿದರು.

ಬುದ್ದಿ ಜೀವಿಗಳು ಸೈಲೆಂಟ್ ಆಗಿದ್ದಾರೆ. ಭಗವದ್ಗೀತೆ, ಟಿಪ್ಪು ವಿಚಾರ ಬಂದಾಗ ಮಾತನಾಡುತ್ತಾರೆ. ಈಗ ಯಾಕೆ ಇದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಕೆಣಕಿದರು. ಕ್ಲಾರೆನ್ಸ್ ಶಾಲೆ ಕೇಂದ್ರೀಯ ಸಿಲೆಬಸ್ ವ್ಯಾಪ್ತಿಗೆ ಬರುತ್ತದೆ. ಯಾವುದೇ ಸಿಲೆಬಸ್ ಇರಲಿ ಧರ್ಮ ಬೋಧನೆ ತಪ್ಪು. ಕ್ಲಾರೆನ್ಸ್ ಶಾಲೆಯಲ್ಲಿ ಎಲ್ಲ ಧರ್ಮದ ಮಕ್ಕಳೂ ಇದ್ದಾರೆ. ಸಂವಿಧಾನದಡಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬಿ.ಸಿ.ನಾಗೇಶ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಭಾರತವು ಕಳೆದ 24 ಗಂಟೆಗಳಲ್ಲಿ 2,483 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ,ಸಕ್ರಿಯ ಪ್ರಕರಣಗಳು 15,636!

Tue Apr 26 , 2022
ಕಳೆದ 24 ಗಂಟೆಗಳಲ್ಲಿ ದೇಶವು 2,483 ಹೊಸ ಪ್ರಕರಣಗಳನ್ನು ವರದಿ ಮಾಡಿರುವುದರಿಂದ ಭಾರತದ COVID-19 ಎಣಿಕೆ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ತಿಳಿಸಿದೆ. ಸೋಮವಾರ, ಭಾರತವು 2,541 COVID-19 ಪ್ರಕರಣಗಳನ್ನು ದಾಖಲಿಸಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಒಂದು ದಿನದಲ್ಲಿ 2,483 ಹೊಸ ಕರೋನವೈರಸ್ ಸೋಂಕುಗಳು ವರದಿಯಾಗುವುದರೊಂದಿಗೆ, ಭಾರತದ ಒಟ್ಟು COVID-19 ಪ್ರಕರಣಗಳ ಸಂಖ್ಯೆ 4,30,62,569 ಕ್ಕೆ ಏರಿದೆ, ಆದರೆ ಸಕ್ರಿಯ […]

Advertisement

Wordpress Social Share Plugin powered by Ultimatelysocial