27000 ಅತಿಥಿ ಶಿಕ್ಷಕರ ನೇಮಕ; ಟೀಚರ್ಸ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ನಿರ್ಧಾರ

 

ಸರ್ಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು ಮುಂದಾಗಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ 27,000 ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲು ನಿರ್ಧರಿಸಿದೆ.

ಈ ವರ್ಷ ಶಾಲೆ ಆರಂಭವಾಗುವ ಹೊತ್ತಿಗೆ ನೇಮಕ ಮಾಡಿಕೊಳ್ಳಲು ತೀರ್ವನಿಸಿದ್ದು, ಶೀಘ್ರ ಪ್ರಕ್ರಿಯೆ ಆರಂಭವಾಗಲಿದೆ.

ಅತಿಥಿ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ದೊರೆತಿದೆ. ಇದರ ಜತೆಗೆ ಇನ್ನೂ 3 ಸಾವಿರ ಶಿಕ್ಷಕರನ್ನು ಹೆಚ್ಚುವರಿಯಾಗಿ ನೇಮಿಸಿಕೊಳ್ಳಲು ಪ್ರಸ್ತಾವನೆ ಕಳುಹಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತರೆ ಒಟ್ಟು 30 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕ್ರಿಯೆ ಆರಂಭಿಸಲಿದೆ. ಈಗಾಗಲೇ 15 ಸಾವಿರ ಶಿಕ್ಷಕರ ಕಾಯಂ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ.

ಇದಕ್ಕೆ ಅರ್ಜಿ ಸಲ್ಲಿಸಲು ಏ.25 ಕೊನೆಯ ದಿನವಾಗಿತ್ತು. ಮೇ 21 ಮತ್ತು 22ರಂದು ಪರೀಕ್ಷೆ ನಡೆಯಲಿದೆ. ನೇಮಕಾತಿ ಪೂರ್ಣಗೊಂಡು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ವರ್ಷದ ಅವಧಿ ಬೇಕಾಗುತ್ತದೆ. ಅಲ್ಲಿಯವರೆಗೆ ಕೊರತೆ ನೀಗಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಸದ್ಯ ಸರ್ಕಾರ 4000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಇದರ ಭಾಗವಾಗಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಸರ್ಕಾರ ಬಜೆಟ್​ನಲ್ಲಿ ಘೋಷಣೆ ಮಾಡಿತ್ತು. ಅದರಂತೆ ಈಗ ಆರ್ಥಿಕ ಇಲಾಖೆ ಅನುಮೋದನೆ ಸಿಕ್ಕಿದೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ; ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿದ್ದಾರೆ. ಮೇ 16ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮೊದಲ ದಿನವೇ ಅತಿಥಿ ಶಿಕ್ಷಕರು ಹಾಜರಾಗಲಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶೇ.50 ಪಠ್ಯಪುಸ್ತಕ ಮುದ್ರಣ:ಈಗಾಗಲೇ ಶಾಲೆಗಳಿಗೆ ಪೂರೈಸಬೇಕಾದ ಶೇ.50 ಪಠ್ಯಪುಸ್ತಕ ಮುದ್ರಣವಾಗಿವೆ. ಶಾಲೆ ಆರಂಭವಾಗುವ ವೇಳೆಗೆ ಶೇ.30 ಪುಸ್ತಕ ಮುದ್ರಣವಾಗಲಿದ್ದು, ಇನ್ನುಳಿದ ಶೇ.20 ಸ್ವಲ್ಪ ತಡವಾಗಲಿದೆ. ಯೂಕ್ರೇನ್ ಮತ್ತು ರಷ್ಯಾ ಯುದ್ಧದ ಪರಿಣಾಮ ಕಾಗದ ಪೂರೈಕೆಯಾಗದ ಹಿನ್ನೆಲೆಯಲ್ಲಿ ತಡವಾಗಲಿದೆ. ಸಮವಸ್ತ್ರಗಳು ಕೂಡ ಈ ಬಾರಿ ಸ್ವಲ್ಪ ತಡವಾಗಿ ವಿದ್ಯಾರ್ಥಿಗಳಿಗೆ ದೊರೆಯಲಿದೆ.

ಗೌರವಧನ ಹೆಚ್ಚಳಕ್ಕೆ ಪ್ರಸ್ತಾಪ: ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲು ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ.

ಅಧಿಕಾರಿಗಳ ಜತೆ ಸಭೆ: ಮಂಗಳವಾರ ಅಧಿಕಾರಿಗಳ ಜತೆ ಸಚಿವ ನಾಗೇಶ್ ಸಭೆ ನಡೆಸಿದರು. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆಯಾಗಿದ್ದು, ಇದೇ ವೇಳೆ ಅತಿಥಿ ಶಿಕ್ಷಕರ ನೇಮಕಾತಿ ಬಗ್ಗೆಯೂ ನಿರ್ಧಾರವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ. ಶಾಲೆ ಆರಂಭದ ದಿನವೇ ಅತಿಥಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವಂತೆ ಕ್ರಮ ಕೈಗೊಳ್ಳಲಾಗುವುದು.

| ಬಿ.ಸಿ. ನಾಗೇಶ್ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ

ವೇತನ ಎಷ್ಟು?:ನೇಮಕಗೊಳ್ಳುವ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ 7500 ರೂ., ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ 8000 ರೂ. ಸಂಭಾವನೆ ಇದೆ. ತಾಲೂಕುವಾರು ನೇಮಕಕೊಂಡ ಅತಿಥಿ ಶಿಕ್ಷಕರ ಮಾಹಿತಿ ಸಂಗ್ರಹಿಸಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲೆಯಿಂದ ಅನುದಾನ ಬಿಡುಗಡೆಗೆ ಬೇಡಿಕೆ ಸಲ್ಲಿಸಬೇಕು. ಆರ್ಥಿಕ ಇಲಾಖೆಯಿಂದ ನೇರವಾಗಿ ತಾಲೂಕು ಪಂಚಾಯಿತಿಗಳಿಗೆ ಸಂಭಾವನೆಯ ಹಣ ಬಿಡುಗಡೆಯಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ ಕೊರೊನಾ 4 ನೇ ಅಲೆ ಭೀತಿ :

Wed Apr 27 , 2022
ನವದೆಹಲಿ: ಕೋವಿಡ್ ಪ್ರಕರಣಗಳು ( Covid-19 cases ) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಮಹತ್ವದ ಕೊರೋನಾ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮೂಲಗಳಿಂದ ಖಚಿತ ಮಾಹಿತಿ ನೀಡಿದ್ದು, ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ […]

Advertisement

Wordpress Social Share Plugin powered by Ultimatelysocial