ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ.

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಇದಾದ ನಂತರ ಸತ್ಯ ಹೊರಬರಲಿದೆ. ಯಾರೋ ಹೇಳಿದ್ದೆಲ್ಲ ಸತ್ಯವಲ್ಲ ಎಂದು ಸಚಿವ ಈಶ್ವರಪ್ಪ ಪರವಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಕಾಲತ್ತು ವಹಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ತನಿಖೆಯಾಗಬೇಕು. ನಂತರ ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮವಾಗಲಿದೆ ಎಂದರು.

ಮಾಧ್ಯಮಗಳಲ್ಲಿ ಈಶ್ವರಪ್ಪ ಹೇಳಿಕೆ ಗಮನಿಸಿದ್ದೇನೆಯೇ ಹೊರತು ಹೆಚ್ಚಿನ ಮಾಹಿತಿಯಿಲ್ಲ. ಸಂತೋಷ್ ನಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ನೊಂದ ಕುಟುಂಬದ ಜತೆ ನಾವಿದ್ದೇವೆ ಅವರ ಕಷ್ಟದಲ್ಲಿ ಭಾಗಿಯಾಗುತ್ತೇವೆ ಅದು ಬೇರೆ ವಿಷಯ ಆದರೆ ಆತ್ಮಹತ್ಯೆ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ, ತನಿಖೆ ಆದ ನಂತರ ಗೃಹ ಇಲಾಖೆ, ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಗೃಹ ಸಚಿವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಮಾನ ಹಾನಿ !

Wed Apr 13 , 2022
  ಬೆಂಗಳೂರು: ರಾಜ್ಯದ ಗೃಹ ಸಚಿವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಮಾನ ಹಾನಿ ಮಾಡಿರುವ ಮತ್ತು ರಾಜ್ಯದ ಗೌರವಕ್ಕೆ ಧಕ್ಕೆ ತಂದಿರುವ ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ವಿರುದ್ಧ ಕಾನೂನು ರೀತಿಯ ಪ್ರಕರಣಗಳನ್ನು ದಾಖಲಿಸಿ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಉಪ್ಪಾರಪೇಟೆ ಪೋಲೀಸ್ ಠಾಣೆಗೆ ಬೆಂಗಳೂರು ದಕ್ಷಿಣ, ಬಿಜೆಪಿ. ಅಧ್ಯಕ್ಷ ಎನ್. ಆರ್ ರಮೇಶ್ ದೂರು ನೀಡಿದರು. ಏಪ್ರಿಲ್ 11 ರಂದು ಉಪ್ಪಾರಪೇಟೆ ಪೋಲೀಸ್ ಠಾಣೆ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನವನದಲ್ಲಿ […]

Advertisement

Wordpress Social Share Plugin powered by Ultimatelysocial