ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ.

 

ಬೆಂಗಳೂರು,ಜು.12- ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ. ಜು.14 ರಂದು ಬೆಂಗಳೂರಿನ ಹೊರಲಯದಲ್ಲಿರುವ ನಂದಿಬೆಟ್ಟ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತಷ್ಟು ಪ್ರಬಲಗೊಳಿಸುವ ಹಿನ್ನೆಲೆಯಲ್ಲಿ ಬಿಜೆಪಿ ಮುಂದಾಗಿದೆ.

ಮಿಷನ್ ದಕ್ಷಿಣ್ ಅಂಗವಾಗಿ ಕಳೆದ ವಾರ ಹೈದರಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಹಲವಾರು ಕೇಂದ್ರ ಸಚಿವರು, ಕರ್ನಾಟಕ ಕೋರ್ ಕಮಿಟಿಯ ಸದಸ್ಯರು, ಸಚಿವರು ಮತ್ತು ಇತರರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಆಂತರಿಕ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸದ್ಯದ ವಾತಾವರಣ ಪಕ್ಷಕ್ಕೆ ಪೂರಕವಾಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಳೆದ ಕೆಲವು ತಿಂಗಳುಗಳಲ್ಲಿ ಹಿಜಾಬ್ ಮತ್ತು ಪಠ್ಯಪುಸ್ತಕ ವಿವಾದಗಳು ಮತ್ತು ಪಿಎಸ್‍ಐ ನೇಮಕಾತಿ ಹಗರಣದಂತಹ ಅನೇಕ ಸಮಸ್ಯೆಗಳು ಸರ್ಕಾರದ ಇಮೇಜ್ ಅನ್ನು ಕೆಡಿಸಿವೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

'ಎಂ.ಪಿ. ಪ್ರಕಾಶ್‌-82' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Tue Jul 12 , 2022
ಬೆಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎರಡೂ ಅಪಾಯದಲ್ಲಿವೆ. ಅವುಗಳ ಉಳಿವಿಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಬೇಕಾದ ಅನಿವಾರ್ಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಎಂ.ಪಿ. ಪ್ರಕಾಶ್‌ ಅವರ 82ನೇ ಜನ್ಮದಿನದ ಪ್ರಯುಕ್ತ ಎಂ.ಪಿ. ಪ್ರಕಾಶ್‌ ಪ್ರತಿಷ್ಠಾನ, ರಂಗಭಾರತಿ, ಎಂ.ಪಿ. ಪ್ರಕಾಶ್‌ ಸಮಾಜಮುಖಿ ಟ್ರಸ್ಟ್‌ ಮತ್ತು ಭಾರತ ಯಾತ್ರಾ ಕೇಂದ್ರ ಸಹಯೋಗದಲ್ಲಿ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಸೋಮವಾರ ಆಯೋಜಿಸಿದ್ದ ‘ಎಂ.ಪಿ. ಪ್ರಕಾಶ್‌-82’ ಕಾರ್ಯಕ್ರಮ […]

Advertisement

Wordpress Social Share Plugin powered by Ultimatelysocial