ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ.

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಬೆಳಿಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ.ಸಚಿವ ಈಶ್ವರಪ್ಪ ವಿರುದ್ಧ ಕೆರಳಿ ಕೆಂಡವಾಗಿರುವ ಕಾಂಗ್ರೆಸ್, ಈಗಾಗಲೇ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿದೆ. ಆದಾಗ್ಯೂ ಸರ್ಕಾರ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪ್ರತಿಭಟನೆ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.ಈ ನಿಟ್ಟಿನಲ್ಲಿ ನಾಳೆ ಬೆಳಿಗ್ಗೆ 7 ಗಂಟೆಗೆ ಬಿಜೆಪಿ ರಾಜ್ಯ ನಾಯಕರು ಸಭೆ ನಡೆಸಲಿದ್ದು, ಸಚಿವ ಈಶ್ವರಪ್ಪ ಬಗ್ಗೆ ಚರ್ಚೆ, ಕಾಂಗ್ರೆಸ್ ಪ್ರತಿಭಟನೆಗಳಿಗೆ ಪ್ರತಿತಂತ್ರ ರೂಪಿಸುವ ಸಾಧ್ಯತೆ ಇದೆ. ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರುಗಳು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರದಲ್ಲಿ ಡ್ಯಾನಿಶ್ ಸೇಠ್.

Sun Feb 20 , 2022
  ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಡ್ಯಾನಿಶ್ ಸೇಠ್ ಅಭಿನಯದ ಚಿತ್ರ “ಸೋಲ್ಡ್”. ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿ ಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಾನಿ ಆರ್ ಬಲ್ಲುಕರಾಯ, ದೀಪಂ ಕೊಹ್ಲಿ, ಕಾವ್ಯ ಶೆಟ್ಟಿ, ಭರತ್ ಜೆ.ಬಿ, ಸಿದ್ಧಾರ್ಥ್ ಮಾಧ್ಯಮಿಕ, ಉಗ್ರಂ ಮಂಜು, ಭವಾನಿ ಪ್ರಕಾಶ್, ಹನುಮಂತೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ನಮ್ಮ ಚಿತ್ರತಂಡದ ಎಲ್ಲಾ ಸದಸ್ಯರು 28ರ ಆಸುಪಾಸಿನ‌ […]

Advertisement

Wordpress Social Share Plugin powered by Ultimatelysocial