ಬಿ.ಆರ್.​ ಅಂಬೇಡ್ಕರ್​ ಗುಣಗಾನ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ!

 

ಸೋಮವಾರಪೇಟೆ: ಡಾ.ಬಿ.ಆರ್.​ ಅಂಬೇಡ್ಕರ್​ ಗುಣಗಾನ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆ ಕೊಡಗು ಜಿಲ್ಲೆ ಸೋಮವಾರಪಟೆ ತಾಲೂಕಿನಲ್ಲಿ ಸಂಭವಿಸಿದೆ.

ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್​ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ ಅಂಬೇಡ್ಕರ್​ ಅವರ 131ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಅಭಿಲಾಶ್​ ಭಾಷಣ ಮಾಡಿದ್ದ.

ಈ ಬಗೆಗಿನ ಭಾಷಣದ ವಿಡಿಯೋ ತುಣುಕನ್ನು ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿತ್ತು. Play for free or bet real money. clickmiamibeach.com ಈ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಲಾಷ್​ಗೆ ದೂರವಾಣಿ ಕರೆ ಮಾಡಿದ ಸೋಮವಾರಪಟೆಯ ಕಲ್ಕಂದೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಧರ್ಮರಾಜ್​, ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೀವ ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ. ಇವರ ಮೊಬೈಲ್​ ಸಂಭಾಷಣೆ ವೈರಲ್​ ಆಗಿತ್ತು.

ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಲು ಅಭಿಲಾಷ್​ ಹಿಂದೇಟು ಹಾಕಿದ್ದರಿಂದ ವಿದ್ಯಾರ್ಥಿಯು ಭಯದಲ್ಲಿ ಇರಬೇಕಾಗಿದೆ ಎಂಬ ವರದಿ ಆಧಾರದ ಮೇಲೆ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶ ವೇದಮೂರ್ತಿ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುತೇಕ ಐದು ದಿನಗಳ ರಾಜ್ಯ ಪ್ರವಾಸ!

Wed Apr 20 , 2022
ಬೆಂಗಳೂರು, ಏ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುತೇಕ ಐದು ದಿನಗಳ ರಾಜ್ಯ ಪ್ರವಾಸದಲ್ಲಿ ಇದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ದಾವಣಗೆರೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಶಿವಮೊಗ್ಗದಲ್ಲಿ ಉಳಿದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಲ್ಲಿನ ಹೋಟೆಲೊಂದರಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ವಿವಿಧ ಸಭೆಗಳಲ್ಲಿ ಪಾಲ್ಗೊಳಲ್ಲಿದ್ದಾರೆ. ರಾತ್ರಿ ಇಲ್ಲಿನ ಶುಭಶ್ರೀ ಸಮುದಾಯ ಭವನದಲ್ಲಿ ನಡೆಯುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದ ಮದುವೆ […]

Advertisement

Wordpress Social Share Plugin powered by Ultimatelysocial