ಜಲಜೀವನ್ ಮಿಷನ್ ಅಡಿ ಜಿಲ್ಲೆಯಲ್ಲಿರುವ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು!

ಬಳ್ಳಾರಿ : ಜಲಜೀವನ್ ಮಿಷನ್ ಅಡಿ ಜಿಲ್ಲೆಯಲ್ಲಿರುವ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದಕ್ಕೆ ವಿಶೇಷ ಆದ್ಯತೆ ನೀಡುವಂತೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಅಡಿ ಮೊದಲ ಹಂತದಲ್ಲಿ 20613 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿತ್ತು; ಇದುವರೆಗೆ 15719 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದ್ದು, ಉಳಿದವುಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ವಿವರಿಸಿದರು.

ಇದನ್ನು ಆಲಿಸಿದ ಸಚಿವ ಶ್ರೀರಾಮುಲು ಅವರು ಇದೇ ಏ.30ರೊಳಗೆ ಜೆಜೆಎಂ ಅಡಿ ಕೈಗೆತ್ತಿಕೊಂಡ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು;ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜೆಜೆಎಂ ಮೊದಲ ಹಂತದಡಿ ಒಟ್ಟು 92ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು,ಇದರಡಿ 15 ಕಾಮಗಾರಿಗಳು ರೇಟ್ರೋಫಿಲ್ಲಿಂಗ್ ವರ್ಕ್ ತೆಗೆದುಕೊಳ್ಳಲಾಗಿದ್ದು,ಅದರಡಿ ಕೆರೆ ಸಾಮಥ್ರ್ಯ ಕಡಿಮೆ ಇರುವುದನ್ನು ಹೆಚ್ಚಿಸುವುದು,ಹೂಳು ತೆಗೆಸುವುದು,ಹೊಸ ಕೆರೆ ನಿರ್ಮಿಸುವ ಹಾಗೂ ಇನ್ನೀತರ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ಸಭೆಗೆ ವಿವರಿಸಿದರು.

ಜೆಜೆಎಂ ಎರಡನೇ ಹಾಗೂ ಮೂರನೇ ಹಂತದ ಕಾಮಗಾರಿಗಳು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಪೂರ್ಣಗೊಳಿಸಲು ಸಚಿವ ಶ್ರೀರಾಮುಲು ಅವರು ಸೂಚನೆ ನೀಡಿದರು. ಮೂರು ಹಂತದಡಿ ತೆಗೆದುಕೊಳ್ಳದ ಕಾಮಗಾರಿಗಳನ್ನು ನಾಲ್ಕನೇ ಹಂತದಡಿ ಕೈಗೆತ್ತಿಕೊಂಡು ಜಿಲ್ಲೆಯಲ್ಲಿರು ಎಲ್ಲ ಮನೆಗಳಿಗೂ ನಳದ ಸಂಪರ್ಕ ಕಲ್ಪಿಸಿ ಶುದ್ಧ ಕುಡಿಯುವ ನೀರು ಒದಗಿಸುವ ಕೆಲಸ ಮಾಡಬೇಕು;ಇದಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ-ಸಹಕಾರಗಳನ್ನು ಒದಗಿಸುವುದಾಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ 192628 ಮನೆಗಳಿದ್ದು,ಅವುಗಳಲ್ಲಿ ಜೆಜೆಎಂ ಮೂರು ಹಂತದಲ್ಲಿ 124282 ಮನೆಗಳಿಗೆ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ. ಮೂರು ಹಂತಗಳಲ್ಲಿ ಸೇರದ 68 ಸಾವಿರ ಮನೆಗಳಿಗೆ ನಾಲ್ಕನೇ ಹಂತದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಂಪರ್ಕ ಕಲ್ಪಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು : ಮುಸ್ಕಾನ್‌ಗೂ ಆ ವಿಡಿಯೋ ಸಂಬಂಧವಿಲ್ಲ.

Wed Apr 6 , 2022
    ಮೈಸೂರು : ಮುಸ್ಕಾನ್‌ಗೂ ಆ ವಿಡಿಯೋ ಸಂಬಂಧವಿಲ್ಲ. ಸರ್ಕಾರಕ್ಕೆ ಧಮ್‌ ಇದ್ರೆ ಮೊಸ್ಟ್‌ ವಾಂಟೆಡ್‌ ಉಗ್ರ ಜವಾಹಿರಿಯನ್ನ ಬಂಧಿಸಲಿ ಎಂದು ಮಾಜಿ ಎಂಎಲ್‌ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ʼಗೆ ಅಲ್‌ ಖೈದಾ ನಾಯಕ ಜವಾಹಿರಿ ಶಹಬ್ಬಾಶ್‌ಗಿರಿ ನೀಡಿದ್ದು, ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಇಬ್ರಾಹಿಂ, ‘ ಮುಸ್ಕಾನ್‌ಗೂ ಅಲ್‌ಖೈದಾಗೂ ಯಾವುದೇ ಸಂಬಂಧವಿಲ್ಲ. ಅಲ್‌ಖೈದಾ ಕರ್ನಾಟಕಕ್ಕೆ ಬಂದಿಲ್ಲ, ಬರೋಕೆ ಸಾಧ್ಯವಿಲ್ಲ. ನಮ್ಮ ಜನ ಅವ್ರನ್ನ ಬರೋದಕ್ಕೆ […]

Advertisement

Wordpress Social Share Plugin powered by Ultimatelysocial