.ಬದಲಾದ ಹೇರ್ ಸ್ಟೈಲ್: ವೈರಲ್ ಆಯ್ತು ವಿಜಯ್ ದೇವರಕೊಂಡ ಹೊಸ ಲುಕ್

 

ಟಾಲಿವುಡ್ ರೌಡಿ ನಟ ವಿಜಯ್ ದೇವರಕೊಂಡ ತಮ್ಮ ಮುಂದಿನ ಸಿನಿಮಾ ಲೈಗರ್‌ಗಾಗಿ ಲಾಂಗ್ ಹೇರ್ಸ್ ಬಿಟ್ಟಿದ್ದರು. ಇದೀಗ ಎರಡು ವರ್ಷಗಳ ಬಳಿಕ ವಿಜಯ್ ದೇವರಕೊಂಡ ತಮ್ಮ ಲಾಂಗ್ ಹೇರ್ಸ್‍ಗೆ ಗುಡ್ ಬೈ ಹೇಳಿದ್ದಾರೆ. ಇತ್ತೀಚೆಗಷ್ಟೇ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ವಾಲಿಬಾಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಿಜಯ್ ದೇವರಕೊಂಡ ಅವರನ್ನು ಆಹ್ವಾನಿಸಲಾಗಿತ್ತು.

ಈ ಕಾರ್ಯಕ್ರದಲ್ಲಿ ಪಾಲ್ಗೊಂಡಿದ್ದ ವಿಜಯ್ ವಿಜೇತರಿಗೆ ಟ್ರೋಫಿ ನೀಡಿ ವಿಶ್ ಮಾಡಿದ್ದರು.

ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿಜಯ್ ಹೊಸ ಲುಕ್‍ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಅದರಲ್ಲಿಯೂ ಹೆಣ್ಮಕ್ಕಳಂತೂ ಕ್ಲೀನ್ ಬೋಲ್ಡ್ ಆಗಿದ್ದಾರೆ. ವಿಜಯ್ ದೇವರಕೊಂಡ ತಮ್ಮ ಮುಂದಿನ ಸಿನಿಮಾ ಲೈಗರ್‌ನಲ್ಲಿ ಲಾಂಗ್ ಹೇರ್ಸ್ ಬಿಟ್ಟು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಕ್ಕೆ ನಿರ್ದೇಶಕ ಪುರಿ ಜಗನ್ನಾಥ್ ಆಯಕ್ಷನ್ ಕಟ್ ಹೇಳಿದ್ದು, ಸಿನಿಮಾದಲ್ಲಿ ವಿಜಯ್ ಬಾಕ್ಸರ್ ಪಾತ್ರದಲ್ಲಿ ಮಿಂಚಿದ್ದಾರೆ. ಇನ್ನೂ ವಿಜಯ್‍ಗೆ ಜೋಡಿಯಾಗಿ ಬಾಲಿವುಡ್ ನಟಿ ಅನನ್ಯ ಪಾಂಡೆ ಬಣ್ಣ ಹಂಚಿದ್ದಾರೆ. ಇದೇ 2022ರ ಆಗಸ್ಟ್ 25ಕ್ಕೆ ಲೈಗರ್ ಸಿನಿಮಾ ತೆರೆಕಾಣಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅನುಪ್‌ ಭಂಡಾರಿ ರವರಿಗೆ ಹುಟ್ಟುಹಬ್ಬದ ಶುಭಾಷಯಗಳು

Wed Mar 2 , 2022
ಅನುಪ್‌ ಭಂಡಾರಿ ರವರಿಗೆ ಹುಟ್ಟುಹಬ್ಬದ ಶುಭಾಷಯಗಳು Please follow and like us:

Advertisement

Wordpress Social Share Plugin powered by Ultimatelysocial