ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ಮತ್ತು ಕೋಲಾರದಲ್ಲಿ 9 ಸಹಾಯಕ ವೈದ್ಯಕೀಯ ಅಧಿಕಾರಿ, ಕಾರ್ಯಕ್ರಮ ಸಹಾಯಕ, ಡ್ರೈವರ್‌ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರಿಂದ ಆಫ್‌ಲೈನ್‌ ಮೂಲಕ ಫೆ.೪ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿಎಎಂಎಸ್‌, ಎಂಬಿಬಿಎಸ್‌, ಪದವಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ:
ಸಹಾಯಕ ವೈದ್ಯಕೀಯ ಅಧಿಕಾರಿ, ಕಾರ್ಯಕ್ರಮ ಸಹಾಯಕ, ಡ್ರೈವರ್‌ ಮತ್ತು ಇತರೆ ಹುದ್ದೆಗಳಿಗೆ ಕನಿಷ್ಟ 18 ರಿಂದ 48 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸೇವಾ ಸಿಬ್ಬಂದಿ ಹುದ್ದೆಗಳಿಗೆ 600/-ರೂ (2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 300/-ರೂ),ಬೋಧಕ ಹುದ್ದೆಗಳಿಗೆ 1000/-ರೂ (2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 500/-ರೂ) ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ,ಪ್ರವರ್ಗ-1,ಮಾಜಿಸೈನಿಕ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ನಂತರ ನಿಗದಿತ ಅರ್ಜಿ ನಮೂನೆಯನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಫೆಬ್ರವರಿ 4,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.  ಕಚೇರಿಯ ವಿಳಾಸ: ರಿಜಿಸ್ಟ್ರಾರ್, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉದ್ಯಾನಗಿರಿ, ನವನಗರ, ಬಾಗಲಕೋಟ-587104 .

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಮೂಲ ಸಿದ್ಧಾಂತ ಅಂತ್ಯೋದಯ

Fri Jan 13 , 2023
ಹುಬ್ಬಳ್ಳಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಯುವಕರು ಚುನಾವಣೆಯನ್ನು ಬಹಳ ಉತ್ಸಾಹದಿಂದ ಎದುರು ನೋಡುತ್ತಿದ್ದಾರೆ ನರೇಂದ್ರ ಮೋದಿಯವರ, ಬಸವರಾಜ್ ಬೊಮ್ಮಾಯಿಯವರ ನೇತ್ರತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಬಂದಿವೆ ಮೋದಿಯವರು ಹುಬ್ಬಳ್ಳಿಗೆ ಬಂದು ವಿದ್ಯುತ್ ಸಂಚಲನ ಸೃಷ್ಟಿ ಮಾಡಿದ್ದಾರೆ ಬರುವ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಸಾಮಾನ್ಯ ಕುಟುಂಬದಿಂದ ಬರುವ ಯುವಕರಿಗೂ ಬಿಜೆಪಿಯಲ್ಲಿ ರಾಜಕೀಯ ನೇತ್ರತ್ವಕ್ಕೆ ಅವಕಾಶವಿದೆ ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಟಿಕೆಟ್ […]

Advertisement

Wordpress Social Share Plugin powered by Ultimatelysocial