ಬಹುನಿರೀಕ್ಷಿತ ಶಿಯೋಮಿ 12 ಸರಣಿ ಬಿಡುಗಡೆ! ವಿಶೇಷತೆ ಏನು?

ಬಹುನಿರೀಕ್ಷಿತ ಶಿಯೋಮಿ 12 ಸರಣಿ ಬಿಡುಗಡೆ! ವಿಶೇಷತೆ ಏನು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಕಂಪೆನಿ ತನ್ನ ಬಹು ನಿರೀಕ್ಷಿತ ಶಿಯೋಮಿ 12 ಸರಣಿಯನ್ನು ಬಿಡುಗಡೆ ಮಾಡಿದೆ. 2022ರ ಮೊದಲ ಎರಡು ಪ್ರಮುಖ ಸ್ಮಾರ್ಟ್‌ಫೋನ್‌ಗಳಾಗಿ ಶಿಯೋಮಿ 12 ಮತ್ತು ಶಿಯೋಮಿ 12 ಪ್ರೊ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇನ್ನು ಈ ಎರಡೂ ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿವೆ.

ಹೌದು, ಶೀಯೋಮಿ ಕಂಪೆನಿ ಚೀನಾ ಮಾರುಕಟ್ಟೆಯಲ್ಲಿ ಆನ್‌ಲೈನ್ ಈವೆಂಟ್‌ನಲ್ಲಿ ಶಿಯೋಮಿ 12 ಸರಣಿ ಬಿಡುಗಡೆ ಮಾಡಿದೆ. ಈ ಮೂಲಕ ಹೊಸ ವರ್ಷಕ್ಕೆ ಭರ್ಜರಿಯಾಗಿಯೇ ಎಂಟ್ರಿ ನೀಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿವೆ. ಇದರಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಪಡೆದುಕೊಂಡಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ 12 ಸ್ಮಾರ್ಟ್‌ಫೋನ್‌ ಕಂಪನಿಯ ಪ್ರಮುಖ ಕಾಂಪ್ಯಾಕ್ಟ್ ಪ್ಲ್ಯಾಗ್‌ಶಿಪ್‌ ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.28 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 419ppi ಪಿಕ್ಸೆಲ್ ಸಾಂದ್ರತೆ ಹಾಗೂ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಟೆಲಿಫೋಟೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 50W ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನು ಈ ಫೋನ್ Dolby Atmos ಮತ್ತು Dolby Vision ಎರಡನ್ನೂ ಬೆಂಬಲಿಸುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೇಶದ ಜನತೆಗೆ ಸಿಹಿ ಸುದ್ದಿ! ಮುಂದಿನ ವರ್ಷ ಈ ನಗರಗಳಲ್ಲಿ ಫಸ್ಟ್‌ 5G ಸೇವೆ ಸಿಗಲಿದೆಯಂತೆ

Wed Dec 29 , 2021
ಐದನೇ ತಲೆಮಾರಿನ ವೈರ್‌ಲೆಸ್ ತಂತ್ರಜ್ಞಾನ (5G) (Fifth-Generation Wireless Technology) ಇಂದು ವೇಗವಾಗಿ ಹಾಗೂ ಹೆಚ್ಚು ಸ್ಪಂದಿಸುವ ಇಂಟರ್ನೆಟ್ ಸೇವೆಗಳನ್ನು( Internet services) ಅನುಮತಿಸುತ್ತಿದ್ದು ಈ ಸೇವೆಗಳನ್ನು ನಾಲ್ಕು ಮೆಟ್ರೋ (Four metro) ಹಾಗೂ ಇತರ ದೊಡ್ಡ ನಗರಗಳಲ್ಲಿ (Large cities) ಮುಂದಿನ ವರ್ಷ ಬಿಡುಗಡೆ ಮಾಡಲಾಗುತ್ತದೆ ಎಂದು ದೂರಸಂಪರ್ಕ ( Department of Telecommunications) ಇಲಾಖೆ (DoT) ತಿಳಿಸಿದೆ. 5ಜಿ ಸ್ಪೆಕ್ಟ್ರಮ್ ಹರಾಜು ಬಿಡುಗಡೆಗೆ ಮುನ್ನ 5ಜಿ ಸ್ಪೆಕ್ಟ್ರಮ್ […]

Advertisement

Wordpress Social Share Plugin powered by Ultimatelysocial