ಸಿಗದ ಜಾಮೀನು: ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ!

ವದೆಹಲಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧನಕ್ಕೆ ಒಳಪಟ್ಟಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಆರೋಗ್ಯ ಸಚಿವ ಸತ್ಯಂದ್ರ ಜೈನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಒಂದೇ ದಿನದಲ್ಲಿ ಇಬ್ಬರು ಸಚಿವರುತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಆಡಳಿತಾರೂಢ ಎಎಪಿಗೆ ಭಾರೀ ಮುಜುಗರ ಸೃಷ್ಟಿಸಿದೆ.

ಈ ಇಬ್ಬರ ರಾಜೀನಾಮೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅಂಗೀಕರಿಸಿದ್ದಾರೆ. ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನೆಸಿ ಮನೀಶ್ ಸಿಸೋಡಿಯಾ ಸುಪ್ರೀಂ ಕೋರ್ಟ್ ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.
ಆದರೆ, ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ , ಅಗತ್ಯವಿದ್ದರೆ, ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಅವರ ಪರ ವಕೀಲ ಅಭಿಷೇಕ್ ಮನು ಸಿಂಗ್ವಿ ಅವರಿಗೆ ಸೂಚನೆ ನೀಡಿತು.
ನ್ಯಾಯಾಲಯ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಂತೆ ಮನೀಶ್ ಸಿಸೋಡಿಯಾ ನೈತಿಕತ
ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಸಿಸೋಡಿಯಾ ವಿರುದ್ಧದ ಆರೋಪಗಳೇನು?

ಆಮ್​ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ದೆಹಲಿ ಸರ್ಕಾರವು ಜಾರಿಗೆ ತರಲು ಹೊರಟಿದ್ದ ಅಬಕಾರಿ ನೀತಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಇದರಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ನೀತಿಯನ್ನು ಸರ್ಕಾರ ಈಗಾಗಲೇ ರದ್ದು ಮಾಡಿದೆ. ಆದರೆ, ಹಗರಣ ಕುರಿತಂತೆ ಸಿಬಿಐ ಮತ್ತು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ಭ್ರಷ್ಟಾಚಾರ ಮತ್ತು ಸಾಕ್ಷ್ಯಗಳ ನಾಶ ಹಾಗೂ ವಿರೂಪಗೊಳಿಸಿದ ಆರೋಪದ ಮೇಲೆ ಡಿಸಿಎಂ ಮನೀಶ್ ಸಿಸೋಡಿಯಾರನ್ನು ಸಿಬಿಐ ಬಂಧಿಸಿದೆ.
ಎರಡೂ ತನಿಖಾ ಸಂಸ್ಥೆಗಳು ಈಗಾಗಲೇ ತಮ್ಮ ಪ್ರಾಥಮಿಕ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿವೆ.
ಈ ಪ್ರಕರಣದ ಹೆಸರು ಕೇಳಿ ಬಂದ ಇತರ ಆರೋಪಿಗಳಾದ ವಿಜಯ್ ನಾಯರ್, ಸಮೀರ್ ಮಹೇಂದ್ರು, ವಿನಯ್ ಬಾಬು, ಶರತ್ ರೆಡ್ಡಿ, ಅಭಿಷೇಕ್ ಬೋಯಿನಪಲ್ಲಿ, ಅಮಿತ್ ಅರೋರಾ, ರಾಜೇಶ್ ಜೋಶಿ ಹಾಗೂ ಆಂಧ್ರ ಪ್ರದೇಶದ ವೈಎಸ್​ಆರ್​ ಕಾಂಗ್ರೆಸ್​ ಸಂಸದ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟಾ ಅವರನ್ನು ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ.

ಸತ್ಯೇಂದ್ರ ಜೈನ್ ರಾಜೀನಾಮೆ ‌

ದೆಹಲಿಯ ಆರೋಗ್ಯ ಸಚಿವರಾಗಿ ಪ್ರಸ್ತುತ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರು, ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್​ಶೀಟ್​​ನಲ್ಲಿ ಸಾಕಷ್ಟು ಪ್ರಬಲವಾದ ಸಾಕ್ಷಿಗಳಿವೆ ಎಂದು ದೆಹಲಿ ನ್ಯಾಯಾಲಯ ಹೇಳಿತ್ತು.
ದೆಹಲಿ ಸುತ್ತಮುತ್ತ ಕೃಷಿ ಭೂಮಿಯನ್ನು ಖರೀದಿಸಲು ಸತ್ಯೇಂದ್ರ ಜೈನ್ ಮತ್ತು ಅವರ ಸಹಚರರು ಹವಾಲಾ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ಜುಲೈ 27ರಂದು ದೆಹಲಿಯ ವಿಶೇಷ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಚಾರ್ಜ್ ಶೀಟ್ ಅಥವಾ ಪ್ರಾಸಿಕ್ಯೂಷನ್ ದೂರನ್ನು ಸಲ್ಲಿಸಲಾಗಿತ್ತು. ಜಾರಿ ನಿರ್ದೇಶನಾಲಯವು ಸತ್ಯೇಂದ್ರ ಜೈನ್, ಅವರ ಪತ್ನಿ ಪೂನಂ ಜೈನ್ ಮತ್ತು ಸಹಚರರಾದ ಅಜಿತ್ ಪ್ರಸಾದ್ ಜೈನ್, ಸುನಿಲ್ ಕುಮಾರ್ ಜೈನ್, ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಮುಂತಾದವರನ್ನು ಆರೋಪಪಟ್ಟಿಯಲ್ಲಿ ಹೆಸರಿಸಿತ್ತು.
ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ಸಚಿವರಾಗಿದ್ದ 57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.
ಕೊಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಮೇ ತಿಂಗಳಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು. ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಸತ್ಯೇಂದ್ರ ಜೈನ್ ಅವರು ಷೇರುದಾರರಾಗಿದ್ದ 4 ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿತ್ತು.
ಸಿಸೋಡಿಯಾ ವಿರುದ್ಧದ ಆರೋಪಗಳೇನು?

ಆಮ್​ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ದೆಹಲಿ ಸರ್ಕಾರವು ಜಾರಿಗೆ ತರಲು ಹೊರಟಿದ್ದ ಅಬಕಾರಿ ನೀತಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದರಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ನೀತಿಯನ್ನು ಸರ್ಕಾರ ಈಗಾಗಲೇ ರದ್ದು ಮಾಡಿದೆ. ಆದರೆ, ಹಗರಣ ಕುರಿತಂತೆ ಸಿಬಿಐ ಮತ್ತು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ಭ್ರಷ್ಟಾಚಾರ ಮತ್ತು ಸಾಕ್ಷ್ಯಗಳ ನಾಶ ಹಾಗೂ ವಿರೂಪಗೊಳಿಸಿದ ಆರೋಪದ ಮೇಲೆ ಡಿಸಿಎಂ ಮನೀಶ್ ಸಿಸೋಡಿಯಾರನ್ನು ಸಿಬಿಐ ಬಂಧಿಸಿದೆ.
ಎರಡೂ ತನಿಖಾ ಸಂಸ್ಥೆಗಳು ಈಗಾಗಲೇ ತಮ್ಮ ಪ್ರಾಥಮಿಕ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿವೆ. ಈ ಪ್ರಕರಣದ ಹೆಸರು ಕೇಳಿ ಬಂದ ಇತರ ಆರೋಪಿಗಳಾದ ವಿಜಯ್ ನಾಯರ್, ಸಮೀರ್ ಮಹೇಂದ್ರು, ವಿನಯ್ ಬಾಬು, ಶರತ್ ರೆಡ್ಡಿ, ಅಭಿಷೇಕ್ ಬೋಯಿನಪಲ್ಲಿ, ಅಮಿತ್ ಅರೋರಾ, ರಾಜೇಶ್ ಜೋಶಿ ಹಾಗೂ ಆಂಧ್ರ ಪ್ರದೇಶದ ವೈಎಸ್​ಆರ್​ ಕಾಂಗ್ರೆಸ್​ ಸಂಸದ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟಾ ಅವರನ್ನು ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಜರಂಗಿ ಡೈರೆಕ್ಟರ್ ಟಾಲಿವುಡ್ ಪ್ರೊಜೆಕ್ಟ್ ;

Wed Mar 1 , 2023
ಕನ್ನಡ ಚಿತ್ರರಂಗದ ಖ್ಯಾತಿ  ಎಲ್ಲೆಡೆ ಪಸರಿಸುತ್ತಲೇ ಇದೆ. ಈ ಹಿಂದೆ ಕನ್ನಡ ಸಿನಿಮಾರಂಗದ ಬಗ್ಗೆ ಇದ್ದ ಅಭಿಪ್ರಾಯ ಬದಲಾಗಿದೆ. ಸಿನಿಮಾ ಪ್ರೇಮಿಗಳು (Sandalwood Cinemas) ಇಲ್ಲಿವರೆಗೂ ಕನ್ನಡದಲ್ಲಿ ಮಾತ್ರ ಇದ್ದರು. ಆದರೆ ಕನ್ನಡ ಚಿತ್ರ ಪ್ರೇಮಿಗಳು ಈಗ ಪರ ಭಾಷೆಯಲ್ಲೂ ಇದ್ದಾರೆ. ಕನ್ನಡದಕಂಟೆಂಟ್​​ನ್ನ ತಮ್ಮ ಭಾಷೆಯಲ್ಲಿ ನೋಡ್ತಿದ್ದಾರೆ. ಇದರಿಂದ ಕನ್ನಡ ಚಿತ್ರಗಳ ಮಾರುಕಟ್ಟೆ ಪರ ಭಾಷೆಯ ಮಾರುಕಟ್ಟೆಗೆ ಕಾಲಿಟ್ಟಿದೆ. ಇದರಿಂದ ಕನ್ನಡದ ನಿರ್ದೇಶಕರ ಜಾಣ್ಮೆ ಈಗ ಅಲ್ಲಿ ನಿರ್ಮಾಪಕರಿಗೂ  ತಿಳಿಸಿದೆ. […]

Advertisement

Wordpress Social Share Plugin powered by Ultimatelysocial