“ಬೈರಾಗಿ’ ಚಿತ್ರದ ಬಿಡುಗಡೆಗೆ ಕೌಂಟ್‌ ಡೌನ್‌ ಶುರುವಾಗಿದೆ.

ನಟ ಶಿವರಾಜಕುಮಾರ್‌ ಅಭಿನಯದ “ಬೈರಾಗಿ’ ಚಿತ್ರದ ಬಿಡುಗಡೆಗೆ ಕೌಂಟ್‌ ಡೌನ್‌ ಶುರುವಾಗಿದೆ. ಇದೇ ಜುಲೈ 1ರಂದು “ಬೈರಾಗಿ’ ತೆರೆಗೆ ಬರುತ್ತಿದ್ದು, ರಾಜ್ಯಾದ್ಯಂತ ಸುಮಾರು 400ಕ್ಕೂ ಹೆಚ್ಚಿನ ಥಿಯೇಟರ್‌ಗಳಲ್ಲಿ “ಬೈರಾಗಿ’ಯ ದರ್ಶನವಾಗಲಿದೆ.

ಈಗಾಗಲೇ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿರುವ ಚಿತ್ರತಂಡ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಯಾತ್ರೆ ಕೈಗೊಳ್ಳುವ ಮೂಲಕ ಅಭಿಮಾನಿಗಳನ್ನು ಸೆಳೆಯುವ ಕೆಲಸ ಮಾಡಿದೆ. ಜೊತೆಗೆ ಅದ್ಧೂರಿಯಾಗಿ ಸಿನಿಮಾದ ಪ್ರೀ-ರಿಲೀಸ್‌ ಇವೆಂಟ್‌ ಕೂಡ ನಡೆಸಲಾಗಿದೆ.

ಆರಂಭದಲ್ಲಿ ಸುಮಾರು 250 ರಿಂದ 300 ಚಿತ್ರಮಂದಿರಗಳಲ್ಲಿ “ಬೈರಾಗಿ’ ಸಿನಿಮಾವನ್ನು ರಿಲೀಸ್‌ ಮಾಡುವ ಯೋಚನೆಯಲ್ಲಿತ್ತು ಚಿತ್ರತಂಡ. ಆದರೆ ಸಿನಿಮಾದ ಪ್ರಚಾರ ಕಾರ್ಯದ ವೇಳೆ ಅಭಿಮಾನಿಗಳಿಂದ ಸಿಗುತ್ತಿರುವ ಬಿಗ್‌ ರೆಸ್ಪಾನ್ಸ್‌ ಮತ್ತು ಅಭಿಮಾನಿಗಳ ಒತ್ತಾಯದ ಮೇರೆಗೆ ಸದ್ಯ ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ “ಬೈರಾಗಿ’ಯನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ.

ಮೈಸೂರಿನಲ್ಲಿ 60 ಅಡಿ ಕಟೌಟ್‌: ಇನ್ನು “ಬೈರಾಗಿ’ ಸಿನಿಮಾ ಬಿಡುಗಡೆಯಾಗುತ್ತಿರುವ ಮೈಸೂರಿನ ಪ್ರಮುಖ ಚತ್ರಮಂದಿರದ ಮುಂದೆ ನಟ ಶಿವರಾಜಕುಮಾರ್‌ ಅವರ 60 ಅಡಿ ಎತ್ತರದ ಬೃಹತ್‌ ಕಟೌಟ್‌ ನಿರ್ಮಾಣವಾಗಲಿದೆ.

ಸಿನಿಮಾ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ನಟ ಶಿವರಾಜಕುಮಾರ್‌, ಪೃಥ್ವಿ ಅಂಬಾರ್‌, ನಟಿ ಯಶಾ, ನಿರ್ಮಾಪಕ ಕೃಷ್ಣ ಸಾರ್ಥಕ್‌, ನಿರ್ದೇಶಕ ವಿಜಯ್‌ ಮಿಲ್ಟನ್‌, ಸಂಗೀತ ನಿರ್ದೇಶಕ ಅನೂಪ್‌ ಸೀಳಿನ್‌ ಮತ್ತು ಚಿತ್ರತಂಡ, “ಬೈರಾಗಿ’ಯ ಬಿಡುಗಡೆಯ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ

Thu Jun 30 , 2022
  ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬಂಗಾರದ ಕಡಗವನ್ನೂ ಮುಖ್ಯಮಂತ್ರಿಗಳು ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಸರ್ಕಾರದಿಂದಲೇ ಮನೆ […]

Advertisement

Wordpress Social Share Plugin powered by Ultimatelysocial