ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು!

ಬೆಂಗಳೂರು: ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಸೂಚಿಸಲಾಗಿದೆ.

ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು.

ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.

ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Fri Jul 8 , 2022
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525348 ಕ್ಕೆ […]

Advertisement

Wordpress Social Share Plugin powered by Ultimatelysocial