ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಜೈಲು.

 

 

 

 

ಬಾಲಸೋರ್, ಜ.18- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲ 28 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಪೋಸ್ಕೋ ನ್ಯಾಯಾಲಯದ ವಿಶೇಷ ನ್ಯಾಯಾೀಧಿಶ ರಂಜನ್ ಕುಮಾರ್ ಸುತಾರ್ ಅವರು ತೀರ್ಪು ನೀಡಿದ್ದು, ಆರೋಪಿ ಸಂತೋಷ್ ಸಿಂಗ್‍ನಿಗೆ 14,000 ರೂಪಾಯಿ ದಂಡದೊಂದಿಗೆ ಶಿಕ್ಷೆ ವಿಧಿಸಿದ್ದಾರೆ.

ತಮ್ಮ 14 ವರ್ಷದ ಅಪ್ರಾಪ್ತ ಮಗಳ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಆಕೆ ಆರೋಗ್ಯ ಸಮಸ್ಯೆಗಳಿಂದು ಬಳಲುತ್ತಿದ್ದಾಳೆ ಎಂದು ಸಂತ್ರಸ್ತೆಯ ತಾಯಿ 2020ರ ಫೆಬ್ರವರಿಯಲ್ಲಿ ದೂರು ನೀಡಿದ್ದರು. ಅದರ ಆಧಾರದ ಮೇಲೆ ಕಮರಖಾಲಿ ಗ್ರಾಮದ ಸಂತೋಷ್ ಸಿಂಗ್‍ನನ್ನು ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ದೋಷಿಗೆ ಪೋಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 14,000 ರೂ. ದಂಡ ವಿಧಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಂತ್ರಸ್ತಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇವರ ಮೂರ್ತಿಗಳ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸುತ್ತಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಹರಡಲಾರಂಭಿಸಿತ್ತು.

Wed Jan 18 , 2023
ಅಯೋಧ್ಯೆ,ಜ.18- ಉತ್ತರ ಪ್ರದೇಶದ ಫೈಜಾಬಾದ್‍ನಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಘಟಿಸಿದ್ದ ಕೋಮುಗಲಭೆಯ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ದೋಷ ಮುಕ್ತರೆಂದು ಘೋಷಿಸಲಾಗಿದೆ. 2012ರ ಅಕ್ಟೋಬರ್ 24ರಂದು ಫೈಜಾಬಾದ್‍ನಲ್ಲಿ ದುರ್ಗಾದೇವಿಯ ಮೆರವಣಿಗೆ ನಡೆದಿತ್ತು. ದೇವರ ಮೂರ್ತಿಗಳ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸುತ್ತಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಹರಡಲಾರಂಭಿಸಿತ್ತು. ಇದರಿಂದಾಗಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಹತ್ತಾರು ಅಂಗಡಿಗಳು ಮತ್ತು ಮನೆಗಳನ್ನು ಸುಟ್ಟುಹಾಕಲಾಯಿತು, ವ್ಯಾಪಕ ಲೂಟಿ ನಡೆದಿತ್ತು. ಪೊಲೀಸ್ ವಾಹನಗಳಿಗೆ […]

Advertisement

Wordpress Social Share Plugin powered by Ultimatelysocial