ಸೌಂದರ್ಯವರ್ಧಕವಾಗಿ ಬಾಳೆಹಣ್ಣು…!

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ.

* ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ ಚರ್ಮವನ್ನು ಹೆಚ್ಚು ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.

* ಬಾಳೆಹಣ್ಣು ಅತ್ಯುತ್ತಮ ಎಕ್ಸಫೋಲಿಯೇಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಚರ್ಮದ ಮೇಲಿನ ಜಿಡ್ಡಿನಂಶವನ್ನು ನಿಯಂತ್ರಣದಲ್ಲಿ ಇಡುತ್ತದೆ.

* ನೈಸರ್ಗಿಕವಾಗಿ ಸುಕ್ಕುಗಟ್ಟುವುದನ್ನು ತಡೆಯಬೇಕೆಂದರೆ ಬಾಳೆಹಣ್ಣಿನ ಸೇವನೆ ಹಾಗೂ ಚರ್ಮದ ಮೇಲೆ ಬಾಳೆಹಣ್ಣಿನ ಲೇಪನ ಹೊಂದುವುದು ಸೂಕ್ತ.

* ಬಾಳೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿದೆ. ಅದು ಆರೋಗ್ಯ ವೃದ್ಧಿಗೆ ಸಹಾಯ ಮಾಡುತ್ತದೆ.

* ಬಾಳೆಹಣ್ಣಿನ ಸಿಪ್ಪೆಯಿಂದ ಮುಖದ ಮೇಲೆ ಮೃದುವಾದ ಮಸಾಜ್ ಮಾಡುವುದರಿಂದ ಮುಖದಲ್ಲಿ ಉಂಟಾಗುವ ಉರಿಯೂತ ನಿವಾರಿಸಬಹುದು.

* ಬಾಳೆಹಣ್ಣಿನ ಲೇಪನವನ್ನು ಆಗಾಗ ನೆತ್ತಿ ಹಾಗೂ ಕೂದಲ ಬುಡಕ್ಕೆ ಅನ್ವಯಿಸುವುದರಿಂದ ಕೇಶರಾಶಿಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು.

* ಬಾಳೆಹಣ್ಣಿನಲ್ಲಿ ಸಿಲಿಕಾ ಅಂಶ ಹೆಚ್ಚಾಗಿರುತ್ತದೆ. ಕೂದಲು ಒಡೆಯುವುದು, ಬಣ್ಣ ಕಳೆದುಕೊಳ್ಳುವುದು ಹಾಗೂ ಉದುರುವ ಸಮಸ್ಯೆಗಳು ನಿವಾರಣೆಯಾಗುತ್ತದೆ.

* ಬಾಳೆಹಣ್ಣು ಪೊಟ್ಯಾಸಿಯಂ, ವಿಟಮಿನ್, ಕ್ಯಾಲ್ಸಿಯಮ್, ಕಾರ್ಬೋಹೈಡ್ರೇಟ್ ಅಂಶ ಹಾಗೂ ನೈಸರ್ಗಿಕವಾಗಿ ಇರುವ ತೈಲ ಗುಣವು ಕೂದಲಿಗೆ ಪೋಷಣೆ ನೀಡುತ್ತವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ!

Wed May 18 , 2022
  ಐಪಿಎಲ್ 2022 ಬಹುತೇಕ ಕೊನೆಯ ಹಂತದಲ್ಲಿದೆ, ಜುಲೈನಲ್ಲಿ ಭಾರತ ಕ್ರಿಕೆಟ್ ತಂಡದ ನಿರ್ಣಾಯಕ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಹಲವಾರು ಹಿರಿಯ ಆಟಗಾರರು ಮುಂಬರುವ ದಕ್ಷಿಣ ವಿರುದ್ಧದ ಐದು ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಆಫ್ರಿಕಾ ಸರಣಿಗೆ KL ರಾಹುಲ್, ರೋಹಿತ್ ಶರ್ಮಾ ವಿಶ್ರಾಂತಿ ನೀಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ, […]

Advertisement

Wordpress Social Share Plugin powered by Ultimatelysocial