ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್ .

ಬೆಂಗಳೂರು : ಚಳಿಯಿಂದ ತತ್ತರಿಸಿರುವ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಶೀತ ಗಾಳಿ ಮುಂದುವರೆಯಲಿದ್ದು, ಚಳಿ ಹೆಚ್ಚಳವಾಗಲಿದೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಇನ್ನೂ ಒಂದು ವಾರ ವಿಪರೀತ ಚಳಿ ಹೆಚ್ಚಳವಾಗಲಿದೆ.

ಜನವರಿ 20 ರವರೆಗೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಲಿದ್ದು, ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ ನಿನ್ನೆ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

‘ಗೃಹಲಕ್ಷ್ಮಿ’ ಯೋಜನೆ ಕಾಂಗ್ರೆಸ್ ಭರವಸೆ.

Tue Jan 17 , 2023
ಮುಂಬರುವ ವಿಧಸನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆಯಿಂದ ನೊಂದಿರುವ ಮಹಿಳೆಯರಿಗೆ ನೆರವಾಗಲು ರಾಜ್ಯದ ಪ್ರತಿ ಮನೆಯ ಓರ್ವ ಗೃಹಿಣಿಗೆ ಶಕ್ತಿ ತುಂಬಲು ಪ್ರತಿ ತಿಂಗಳು 2 ಸಾವಿರ ರೂ ಸಹಾಯಧನ ನೀಡುವ ಗೃಹಲಕ್ಮಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿಂದು  ನಾಯಕಿ ಸಮಾವೇಶದಲ್ಲಿ ಮಾತನಾಡಿದ ಅವರು,ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ. ಮಹಿಳೆಯರು ಯುವಕರಿಗೆ ಶಕ್ತಿ ತುಂಬಿದರೆ […]

Advertisement

Wordpress Social Share Plugin powered by Ultimatelysocial