ಬೆಂಗಳೂರಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ ಬೆಂಗಳೂರಿನಲ್ಲಿ ಪ್ರಸಾರವಾಗಿದೆ.
ಶನಿವಾರ ರಾತ್ರಿ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಆಲ್ ಇಂಡಿಯಾ ಸ್ಟುಡೆಂಟ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಲಾಗಿದೆ.ಈ ಸಂಬಂಧ ಎಐಎಸ್‌ಎ ಸದಸ್ಯೆ ಅರತ್ರಿಕಾ ಡೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸುಮಾರು ೪೦ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಲು ಎಐಎಸ್‌ಎ ಕಚೇರಿಗೆ ಬಂದಿದ್ದರು. ಕ್ರೈಸ್ಟ್ ಕಾಲೇಜು, ಐಐಎಸ್‌ಸಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಸೇಂಟ್ ಜೋಸೆಫ್ ಮತ್ತು ಇತರ ಕೆಲವು ಕಾಲೇಜುಗಳ ವಿದ್ಯಾರ್ಥಿಗಳು, ಆಲ್-ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್‌ನ ಸದಸ್ಯರು ಸಾಕ್ಷ್ಯಚಿತ್ರ ವೀಕ್ಷಿಸಿದರು.ಸಾಕ್ಷ್ಯಚಿತ್ರ ವೀಕ್ಷಣೆ ಬಳಿಕ ಕೋಮುವಾದದ ಏರಿಕೆಯ ಕುರಿತ ಚರ್ಚೆಯಲ್ಲಿ ಅವರು ಭಾಗವಹಿಸಿದರು ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಡತನವನ್ನು ತೊಡೆದುಹಾಕಲು ಶಿಕ್ಷಣ ನೆರವು.

Tue Jan 31 , 2023
ಶಿಕ್ಷಣವು ನಮ್ಮ ಸಮಾಜದಿಂದ ಬಡತನವನ್ನು ತೊಡೆದುಹಾಕಲು ಹಾಗೂ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವಲ್ಲಿ ಸಹಾಯ ಮಾಡುತ್ತದೆ. ಒಬ್ಬ ವಿದ್ಯಾವಂತ ವ್ಯಕ್ತಿಯು ಉತ್ತಮ ಉದ್ಯೋಗವನ್ನು ಪಡೆಯಬಹುದು ಮತ್ತು ತನ್ನ ಕುಟುಂಬದ ಎಲ್ಲಾ ಮೂಲಭೂತ ಅಗತ್ಯಗಳು ಮತ್ತು ಅವಶ್ಯಕತೆಗಳನ್ನು ನೋಡಿಕೊಳ್ಳಬಹುದಾಗಿದೆ ಎಂದು ಪುರಸಭಾಧ್ಯಕ್ಷೆ ರಾಜೇಶ್ವರಿ ಭಾಸ್ಕರ್ ತಿಳಿಸಿದರು.ಅವರು ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ರೂಬಿ ಆಂಗ್ಲ ಪ್ರೌಢಶಾಲೆಯ ೨೭ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾಕೂಟಗಳನ್ನು ಪಾರಿವಾಳ […]

Advertisement

Wordpress Social Share Plugin powered by Ultimatelysocial