ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು;

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆ ಆತಂಕ ಎದುರಾಗಿದೆ.

ನಿನ್ನೆ ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 132 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 27ರಂದು ಪ್ರಧಾನಿ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ಇದ್ದು, ಪ್ರಧಾನಿ ನೀಡಿದ ಸಲಹೆಯಂತೆ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕೇರಳ, ಮಹಾರಾಷ್ಟ್ರಗಳಲ್ಲಿಯೂ ಕೋವಿಡ್ ಕೇಸ್ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿಯೂ ಪ್ರಕರಣ ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಜತೆ ಸಭೆ ನಡೆಯಲಿದ್ದು, ಅವರ ಸಲಹೆ, ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್ 2ನೇ ಅಲೆ ವೇಳೆ ನಿರ್ಲಕ್ಷ್ಯದಿಂದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ತಜ್ಞರು ಈಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಜನರು ಕೂಡ ಜಾಗೃತರಾಗಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಎರಡು ಬೈಕ್ ಗಳ ಮದ್ಯೆ ಮುಖಾ ಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ!

Sun Apr 24 , 2022
ರಾಯಚೂರು: ಎರಡು ಬೈಕ್ ಗಳ ಮದ್ಯೆ ಮುಖಾ ಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರೋಡಲಬಂಡಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಹಟ್ಟಿ ಚಿನ್ನದಗಣಿ ಕಂಪನಿಯ ಭದ್ರತಾ ಸಿಬ್ಬಂದಿ ದೇವೇಂದ್ರಪ್ಪ ಹಾಗೂ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸಗೂರು ಆಸ್ಪತ್ರೆ ದಾಖಲಿಸಲಾಗಿದೆ. ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರೋಡಲಬಂಡಾ […]

Advertisement

Wordpress Social Share Plugin powered by Ultimatelysocial