ಬೆಂಗಳೂರಿಗೆ ಬಂದ ಜನತಾ ಜಲಧಾರೆ!

ಬೆಂಗಳೂರು,ಮೇ 8- ಜೆಡಿಎಸ್‍ನ ಮಹತ್ವದ ಕಾರ್ಯಕ್ರಮವಾದ ಜನತಾ ಜಲಧಾರೆ ರಥಯಾತ್ರೆಯು ಬೆಂಗಳೂರು ತಲುಪಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನದ ಭರವಸೆಯೊಂದಿಗೆ ಪವಿತ್ರ ನದಿಗಳಿಂದ ಜಲಸಂಗ್ರಹ ಮಾಡಿ ಈಗಾಗಲೇ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಂದಿನಿಂದ 5 ದಿನಗಳ ಕಾಲ ಬೆಂಗಳೂರಿನ ವಿವಿಧ ವಿಧಾನಸಬಾ ಕ್ಷೇತ್ರಗಳಲ್ಲಿ ರಥಯಾತ್ರೆ ಕಾರ್ಯಕ್ರಮವನ್ನು ಜೆಡಿಎಸ್ ಹಮ್ಮಿಕೊಂಡಿದೆ.

ಪಕ್ಷದ ಸ್ಥಳೀಯ ನಾಯಕರು, ಮುಖಂಡರ ನೇತೃತ್ವದಲ್ಲಿ ರಥಯಾತ್ರೆಯ ಮೆರವಣಿಗೆ, ಕಳಸಾ ಪೂಜೆ ಹಾಗೂ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗುತ್ತದೆ. ಇಂದು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಯನಗರ 4ನೇ ಬ್ಲಾಕ್‍ನ ಗಂಗಮ್ಮ ದೇವಸ್ಥಾನದಿಂದ ಆರಂಭವಾಯಿತು.

ಮೇ 10ರಂದು ಬೊಮ್ಮನ ಹಳ್ಳಿ, ಬಿಟಿಎಂ ಲೇಔಟ್, ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೇ 11ರಂದು ಬಸವನಗುಡಿ, ಚಿಕ್ಕಪೇಟೆ, ಪದ್ಮನಾಭನಗರ, ಯಲಹಂಕ, ಬ್ಯಾಟರಾಯನಪುರ, ಹೆಬ್ಬಾಳ, ಯಶವಂತಪುರ, ದಾಸರಹಳ್ಳಿ, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9.30ಕ್ಕೆ ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣಿಗೆ ಹೊರಟು ಗವಿಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ಕಳಸಾ ಪೂಜೆ ಮಾಡುವುದರ ಜೊತೆಗೆ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗುವುದು.

ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಯುವ ಜೆಡಿಎಸ್ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದರು.

ಮೇ 12ರಂದು ಗಾಂನಗರ, ಮಲ್ಲೇಶ್ವರ, ವಿಜಯನಗರ, ಗೋವಿಂದರಾಜನಗರ ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ಜಲಧಾರೆಯ ಕಾರ್ಯಕ್ರಮವಿದ್ದು, ಪಕ್ಷದ ನಾಯಕರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಜಲಧಾರೆಯ ಅಂತಿಮ ಕಾರ್ಯಕ್ರಮ ನೆಲಮಂಗಲದ ಬಳಿ ಮೇ 13ರಂದು ನಡೆಯಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು, ಮೇ 08; "ಕೋಡಿಹಳ್ಳಿ ಸ್ವಾಮೀಜಿ ಭವಿಷ್ಯ ಮತ್ತು ಎಚ್‌. ಡಿ. ಕುಮಾರಸ್ವಾಮಿ ಮಾತು ಎರಡು ಒಂದೇ" ಎಂದು

Sun May 8 , 2022
ಮೈಸೂರು, -ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು. ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, “ನನ್ನ ಬಳಿ ಇರುವ ಸಾಕ್ಷಿ ಕೊಟ್ಟರೆ ಸರಕಾರ ಬೀಳುತ್ತದೆ” ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. “ಈ ಇಬ್ಬರ ಮಾತಿಗೆ ನಿಖರತೆಯೂ ಇರಲ್ಲ. ಸ್ಪಷ್ಟತೆಯೂ ಇರಲ್ಲ. ಸ್ಥಿರತೆಯೂ ಇರಲ್ಲ. ಪಿಎಸ್‌ಐ ಹಗರಣದ ಕಿಂಗ್ ಪಿನ್ ಯಾರು? ಎಂಬ ಸತ್ಯ ಗೊತ್ತಿದ್ದರೆ ಅದನ್ನು ಹೇಳಿ ಉಪಕಾರ ಮಾಡಲಿ. ಈ ಸರಕಾರ ಇರಬೇಕಾದ ಅನಿವಾರ್ಯತೆ ನಿಮಗೆ ಏನಿದೆ?. ಸಾಕ್ಷಿ ನೀಡದೆ […]

Advertisement

Wordpress Social Share Plugin powered by Ultimatelysocial