ಬೆಂಗಳೂರಲ್ಲಿ ಭಾರೀ ಮಳೆಯಿಂದ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು!

 

ಬೆಂಗಳೂರು: ರಾಜಧಾನಿ ಬೆಂಗಳೂರು   ಸೇರಿದಂತೆ ರಾಜ್ಯಾದ್ಯಂತ ಮಳೆ  ಅಬ್ಬರ ಮುಂದುವರೆದಿದೆ. ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಗೆ   ಬೆಂಗಳೂರಿನ ಹಲವು ಭಾಗ ಅಕ್ಷರಶಃ ಮುಳುಗಿದೆ. ತಗ್ಗು ಪ್ರದೇಶಗಳಿಗೆ ನೀರು  ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದಾಗಿ ವಿದ್ಯುತ್  ಪ್ರವಹಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ   ಇನ್ನೂ ಮೂರು ದಿನಗಳ ಕಾಲ (3 Days) ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಅಂತ ರಾಜ್ಯ ಹವಾಮಾನ ಇಲಾಖೆ   ತಿಳಿಸಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ (Alert) ಇರಬೇಕಾಗಿದೆ.
ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು
ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ನಿನ್ನೆ ಭಾರೀ ಮಳೆ ಶುರುವಾದಾಗ ನಾಲ್ವರು ವ್ಯಕ್ತಿಗಳು ಬಸ್ ಶೆಲ್ಟರ್‌ನಲ್ಲಿ ಕುಳಿತಿದ್ದರು. ಈ ವೇಳೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ. ಆಗ ಮೂವರು ಎದ್ದು, ಆ ಸ್ಥಳದಿಂದ ಹೊರಕ್ಕೆ ಓಡಿದ್ದಾರೆ. ಆದರೆ 35 ವರ್ಷದ ವ್ಯಕ್ತಿಯೊಬ್ಬ ಏಳುವಾಗ ಪಕ್ಕದ ಬೋರ್ಡ್ ಟಚ್ ಆಗಿದೆ. ಆಗ ವಿದ್ಯುತ್ ಶಾಕ್ ಹೊಡೆದು ಆತ ಮೃತಪಟ್ಟಿದ್ದಾನೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದನಾ ಅಪರಿಚಿತ?
ಮೃತ ವ್ಯಕ್ತಿ ಸುಮಾರು 35 ವರ್ಷದವನಾಗಿದ್ದು, ಆತನ ಗುರುತು ಪತ್ತೆಯಾಗಿಲ್ಲ. ವಿದ್ಯುತ್ ಸರಿ ಪಡಿಸದೇ ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಶಾಕ್ ಹೊಡೆಯುತ್ತಿದ್ದಂತೆ ಸ್ಥಳೀಯರು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದರೂ, ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ.
ಬೆಂಗಳೂರಲ್ಲಿ ನಿನ್ನೆ ರಾತ್ರಿಯಿಡೀ ಮಳೆ
ರಾಜಧಾನಿ ಬೆಂಗಳೂರಲ್ಲಿ ನಿನ್ನೆ ಸಾಯಂಕಾಲವೇ ಶುರುವಾದ ಮಳೆ ಕೆಲವೆಡೆ ಇಂದು ಮುಂಜಾನೆವರೆಗೂ ನಿರತಂರವಾಗಿ ಸುರಿಯುತ್ತಿತ್ತು. ಇಂದು ಬೆಳಗಿನ ಜಾವ 5.30ರ ತನಕ ಒಂದೇ ಸಮನೆ ಗುಡುಗು, ಮಿಂಚು ಸಹಿತ ವರುಣನ ಅಬ್ಬರ ಜೋರಾಗಿತ್ತು. ಪರಿಣಾಮ ಮಳೆಯಿಂದಾಗಿ ರಾತ್ರಿ ವಾಹನ ಸವಾರರ ಪರದಾಡುವಂತಾಯ್ತು. ಹಲವೆಡೆ ತಗ್ಗು ರಸ್ತೆಗಳಲ್ಲಿ ನೀರು ಲಾಕ್ ಸಂಗ್ರಹಗೊಂಡು, ವಾಹನ ಸಂಚಾರಕ್ಕೆ ಅಡ್ಡಿಯಾಯ್ತು.
ಅಂಡರ್‌ಪಾಸ್‌ನಲ್ಲಿ ಸಿಲುಕಿದ ವಾಹನ
ಶೇಷಾದ್ರಿ ರಸ್ತೆಯ ಮಹಾರಾಣಿ ಕಾಲೇಜ್‌ ಬಳಿಯ ಅಂಡರ್‌ ಪಾಸ್‌ನಲ್ಲಿ ಕಂಟೇನರ್ ಒಂದು ಸಿಕ್ಕಿಬಿದ್ದು ಪರದಾಡುವಂತಾಯ್ತು. ಅಂಡರ್ ಪಾಸ್ ನಲ್ಲಿ ಕಂಟೇನರ್ ಹೋಗಬಹುದು ಎಂದು ಚಾಲಕ ಮುಂದೆ ಹೋಗಿದ್ದ, ಆದರೆ ಕಂಟೇನರ್ ಮುಂಭಾಗ ಅಂಡರ್ ಪಾಸ್‌ನ ಮೇಲ್ಛಾವಣಿಗೆ ಸಿಲುಕಿ ವಾಹನ ಅಲ್ಲೇ ನಿಂತು ಬಿಟ್ಟಿದೆ. ಹೀಗಾಗಿ ಹಿಂದಕ್ಕೂ ಬರಲಾರದೇ, ಮುಂದಕ್ಕೂ ಹೋಗಲಾಗದೇ ಸಿಕ್ಕಿಹಾಕಿಕೊಂಡು ಬಿಟ್ಟಿತ್ತು. ಪರಿಣಾಮ ಪ್ಯಾಲೇಸ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆ
ಇನ್ನು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಅಬ್ಬರಿಸಲಿದೆ ಅಂತ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮಳೆಯಾಗಲಿದೆ.
ಎಲ್ಲೆಲ್ಲಿ ಭಾರೀ ಮಳೆಯಾಗಲಿದೆ?
ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆ ಇದೆ. ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಂದ್ಯದ ನಂತರ ಪಾಯಿಂಟ್ಸ್ ಟೇಬಲ್; ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ...

Sun May 15 , 2022
  ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ 61ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಆಲ್‌ರೌಂಡ್ ಪ್ರದರ್ಶನದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 54 ರನ್‌ಗಳಿಂದ ಸೋಲಿಸಿತು. ಕೆಕೆಆರ್ ಪರ ಆಂಡ್ರೆ ರಸೆಲ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪರಿಣಾಮಕಾರಿ ಆಟ ಪ್ರದರ್ಶಿಸಿ, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್, ಆಂಡ್ರೆ ರಸೆಲ್ (ಅಜೇಯ 49 ರನ್‌) […]

Advertisement

Wordpress Social Share Plugin powered by Ultimatelysocial