ಬೆಂಗಳೂರಿನ ಶಾಪಿಂಗ್ ಮಾಲ್‌ಒಂದರಲ್ಲಿ ಅಗ್ನಿ ಅವಘಡ ವೀಕೆಂಡ್ ಕರ್ಫ್ಯೂನಿಂದ ಜೀವ ರಕ್ಷಣೆ

ರಾಜಧಾನಿ ಬೆಂಗಳೂರಿನ ಶಾಪಿಂಗ್ ಮಾಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಾಪಾಯವಿಲ್ಲ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

6 ಆಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಾಳಿಕ ಬೆಂಕಿ ನಿಯಂತ್ರಿಸಲಾಯಿತು, ದೊಡ್ಡ ಅನಾಹುತ ತಪ್ಪಿತು.

ಶಾಪಿಂಗ್‌ ಮಾಲ್‌ನ ಗ್ರೌಂಡ್ ಪ್ಲೋರ್‌ನಲ್ಲಿರುವ ಸೂಪರ್ ಮಾರ್ಕೆಟ್‌ನ ಸ್ಟೋರೇಜ್‌ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಶುಕ್ರವಾರ ರಾತ್ರಿಯಿಂದ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶಾಪಿಂಗ್ ಮಾಲ್‌ನಲ್ಲಿ ಯಾವುದೇ ಜನರು, ಸಿಬ್ಬಂದಿ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶಾಪಿಂಗ್ ಮಾಲ್ ಸಿಬ್ಬಂದಿಯಿಂದ ಮಾಹಿತಿ ಪಡೆದರು,

ಕೆಲ ದಿನಗಳ ಹಿಂದೆ ನಗರದ ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು., ದಟ್ಟವಾದ ಹೊಗೆಯಿಂದ ರಸ್ತೆಯೂ ಕಾಣದಂಥ ಪರಿಸ್ಥಿತಿ ನಿರ್ಮಾಣವಾಗಿತ್ತು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಸೀಬರ್ಡ್ ನೌಕಾನೆಲೆಯಲ್ಲಿ 50ಕ್ಕೂ ಹೆಚ್ಚು ಕೋವಿಡ್ ಪ್ರಕರಣ ಪತ್ತೆ

Sat Jan 15 , 2022
ನೌಕಾನೆಲೆಯಲ್ಲಿ  10 ಕೆಲಸಗಾರರ ಕ್ಯಾಂಪ್ ನಲ್ಲಿ ಅನೇಕ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. 60ಕ್ಕೂ ಹೆಚ್ಚು ಪ್ರಕರಣಗಳಿವೆ. ಅನೇಕ ನೌಕ ಸಿಬ್ಬಂದಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದಿರುವ ಕಾರ್ಮಿಕರನ್ನು ಐಸೋಲೇಷನ್ ಮಾಡಲಾಗಿದೆ. ಆದರೆ, ಅದನ್ನು ಅತ್ಯುತ್ತಮ ರೀತಿಯಲ್ಲಿ ಮಾಡಬೇಕಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ್ ತಿಳಿಸಿದರು.  ಪಾಲಿಟಿವ್ ಬಂದಿರುವ  ನೌಕಾ ಮತ್ತು ನಿರ್ಮಾಣ ಸಿಬ್ಬಂದಿಯ ನಿಖರ ಸಂಖ್ಯೆಯನ್ನು ಇಲಾಖೆ ನೀಡಲು ಸಾಧ್ಯವಾಗಲಿಲ್ಲ.ಸೀಬರ್ಡ್ ಯೋಜನೆಯ 2 ನೇ […]

Advertisement

Wordpress Social Share Plugin powered by Ultimatelysocial