ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡಬಾರದು-ಸಿಎಂ ಬೊಮ್ಮಾಯಿ ಖಡಕ್​ ಎಚ್ಚರಿಕೆ

ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.
ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.ಆದ್ರೆ, ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡಬಾರದು. ಏನೇ ಹೇಳುವುದಿದ್ದರೂ ಶಾಂತಿಯುತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಭಂಗ ತರುವುದಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಯಾರೇ ಹೋರಾಟ ಮಾಡಿದ್ರು, ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಿಗರದ್ದು ವಿಕೃತ ಮನಸ್ಥಿತಿ ಎಂದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

Sun Dec 19 , 2021
ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.ಅಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತನ್ನ ಬೆಂಬಲವನ್ನು ಮಹಾರಾಷ್ಟ್ರ ಸರ್ಕಾರವು ಪುನರುಚ್ಛರಿಸಿದೆ. ಘಟನೆಯ ನಂತರ ಗಡಿಭಾಗದ ಜಿಲ್ಲೆಗಳಾದ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿವೆ.ಪ್ರತಿಮೆಗೆ ಮಸಿ ಬಳಿದಿರುವುದು ಕನ್ನಡಿಗರ ವಿಕೃತ […]

Advertisement

Wordpress Social Share Plugin powered by Ultimatelysocial