ನೇಣು ಬಿಗಿದ ಸ್ಥಿತಿಯಲ್ಲಿ ಶವಪತ್ತೆ

 

 

 

 

 

 

 

ಬೆಂಗಳೂರು: ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್‌ ಎಂದು ಗುರುತಿಸಲಾಗಿದೆ.

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.

ಈ ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಘಟನೆಯ ಸಂಬಂಧ ಪೊಲೀಸರು ತನಿಖೆ ಚುರುಕುಗೊಂಡಿದೆ. ಈವರೆಗೆ ಸಾವಿಗೆ ಯಾವುದೇ ಪ್ರಮುಖ ಕಾರಣಗಳು ಪತ್ತೆಯಾಗಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೂದಲಿಗೆ ಮೊಸರು ಹಚ್ಚೋದ್ರಿಂದ ತಲೆಹೊಟ್ಟು ಸೇರಿದಂತೆ ಈ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತೆ

Wed Jan 11 , 2023
ಮೊಸರು ಆರೋಗ್ಯಕ್ಕೂ ಒಳ್ಳೆಯದು ಹಾಗೆಯೇ ಕೂದಲಿಗೂ ಒಳ್ಳೆಯದು. ಮೊಸರನ್ನು ಕೂದಲಿಗೆ ಬಳಸುವುದರಿಂದ ಕೂದಲು ಉದುರುವ ಸಮಸ್ಯೆ ದೂರವಾಗಿ ಕೂದಲು ಮೃದುವಾಗುತ್ತದೆ. ಮೊಸರಿನಲ್ಲಿ ಇರುವ ಸತು, ಫೋಲೇಟ್ ಮತ್ತು ವಿಟಮಿನ್-ಬಿ6 ಕೂದಲನ್ನು ಹೆಚ್ಚಿಸುವುದರೊಂದಿಗೆ ಕೂದಲನ್ನು ಬಲಪಡಿಸುತ್ತದೆ. ಅನೇಕರು ರಾಸಾಯನಿಕ ಉತ್ಪನ್ನಗಳನ್ನು ಬಳಸದೆ ಕೂದಲನ್ನು ಮೃದುವಾಗಿಸಲು ಬಯಸುತ್ತಾರೆ. ಅಂತಹವರು ಕೂದಲಿಗೆ ಮೊಸರನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳಿವೆ.ಹೆಚ್ಚಿನ ರಾಸಾಯನಿಕ ಉತ್ಪನ್ನಗಳನ್ನು ಬಳಸುವುದರಿಂದ ಕೂದಲಿಗೆ ಹಾನಿಯೇ ಹೆಚ್ಚು. ಕೂದಲನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡಲು, ಮೊಸರನ್ನು […]

Advertisement

Wordpress Social Share Plugin powered by Ultimatelysocial