ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ…!

 ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದೆ. ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.ಸೋಮವಾರ ಮಧ್ಯಾಹ್ನ 12 ಗಂಟೆ ಬಳಿಕ ನಗರದಲ್ಲಿ ಮಳೆಯಾಗಿತ್ತು. ಬಳಿಕ ಮೋಡ ಕವಿದ ವಾತಾವರಣವಿತ್ತು. ಸಂಜೆ 6 ಗಂಟೆಯ ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಭಾರೀ ಮಳೆಯಾಗಿದೆ.ಹೆಬ್ಬಾಳ, ಮಲ್ಲೇಶ್ವರ, ರಾಜಾಜಿನಗರ, ಮೆಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಜಯನಗರ, ಹನುಮಂತನನಗರ, ವಿದ್ಯಾಪೀಠ ವೃತ್ತ, ಆರ್. ಆರ್. ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ.ರಸ್ತೆಗಳು ಜಲಾವೃತವಾಗಿದ್ದು ಸಂಜೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವಾಹನ ಸವಾರರು ಪರದಾಡಿದರು. ಸಂಜೆ ಸುರಿದ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಕಡೆ ಮನೆಗಳಿಗೆ ನೀರು ನುಗ್ಗಿದೆ ಎಂದು ಶಂಕಿಸಲಾಗಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಕ್ಯಾಬ್‌ಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.ಮಳೆಯಿಂದ ಸಮಸ್ಯೆಯಾಗಿರುವ ಕುರಿತು ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಬಿಬಿಎಂಪಿ ಕಂಟ್ರೋಲ್ ರೂಂ ಮಾಹಿತಿ ನೀಡಿದೆ.ದಸರಾ ಸಂದರ್ಭದಲ್ಲಿ ಊರಿಗೆ ಹೊರಟ ಜನರು ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿ ಮಳೆಯಿಂದ ಉಂಟಾದ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು.ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಅಕ್ಟೋಬರ್ 15ರ ತನಕ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿತ್ತು.

Please follow and like us:

Leave a Reply

Your email address will not be published. Required fields are marked *

Next Post

ರಸ್ತೆಯಲ್ಲಿ ಪೈರು ನಾಟಿ: ಪ್ರತಿಭಟನೆ ಮಾಡಿದ ಗ್ರಾಮಸ್ತರು

Tue Oct 12 , 2021
ದೊಡ್ಡಬಳ್ಳಾಪುರ: ರಸ್ತೆಯನ್ನು ದುರಸ್ತಿ ಮಾಡದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡುವ ಮೂಲಕ ಸೋಮವಾರ ಹಾದ್ರಿಪುರ-ಮುಪ್ಪಡಿಘಟ್ಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಾಡನೂರು ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್.ಮನು,ಕಾಡನೂರು ಗ್ರಾಮಕ್ಕೆ ಹಾದ್ರಿಪುರ ಗ್ರಾಮದಿಂದ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ಮಳೆ ಬಂದರೆ ಸಾಕು ಹಳ್ಳಕೊಳ್ಳದಂತಿರುವ ಈ ಕೆಸರಿನ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಕೆಸರು ತುಂಬಿದ […]

Advertisement

Wordpress Social Share Plugin powered by Ultimatelysocial