ಸಂಗೀತ ಸಂಯೋಜಕ ಹಾಗೂ ಗಾಯಕ ಬಪ್ಪಿ ಲಹರಿ ಇಂದು ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮುಂಬೈಫೆ.16: ಸಂಗೀತ ಸಂಯೋಜಕ ಹಾಗೂ ಗಾಯಕ ಬಪ್ಪಿ ಲಹರಿ ಇಂದು ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಪ್ಪಿದ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಸಂಗೀತಗಾರನಿಗೆ 69 ವರ್ಷ ವಯಸ್ಸಾಗಿತ್ತು.ಮಂಗಳವಾರ ರಾತ್ರಿ ಬಪ್ಪಿ ಲಹರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ.ಜುಹುವಿನ ಕ್ರಿಟಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ವೈದ್ಯರು ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಬಪ್ಪಿ ಲಹರಿ ಕೆಲಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವರ್ಷವಷ್ಟೇ ಕೊರೋನಾದ ಸೌಮ್ಯ ಲಕ್ಷಣಗಳು ಅವರಲ್ಲಿ ಕಂಡು ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು.ಬಪ್ಪಿ ಲಹರಿ ಬಾಲಿವುಡ್‌ಗೆ ಅನೇಕ ಹಿಟ್ ಹಾಡುಗಳನ್ನು ನೀಡಿದ್ದಾರೆ. ಅವರ ನಿಜವಾದ ಹೆಸರು ಅಲೋಕೇಶ್ ಲಾಹಿರಿ. 27 ನವೆಂಬರ್ 1952 ರಂದು ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಜನಿಸಿದ ಬಪ್ಪಿದ ಅವರ ತಂದೆಯ ಹೆಸರು ಅಪರೇಶ್ ಲಹರಿ ಮತ್ತು ತಾಯಿಯ ಹೆಸರು ಬನ್ಸಾರಿ ಲಹರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿರಿಯ ಮುತ್ಸದ್ಧಿ ಎಚ್.ಡಿ.ಚೌಡಯ್ಯ ಅವರ ನಿಧನ !

Wed Feb 16 , 2022
ಮಂಡ್ಯ: ಹಿರಿಯ ಮುತ್ಸದ್ಧಿ ಎಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ. 94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು.ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಷಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ.ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು […]

Advertisement

Wordpress Social Share Plugin powered by Ultimatelysocial