ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಸಿಎಂ ಬೊಮ್ಮಾಯಿ…

ಅಪೌಷ್ಟಿಕತೆ ನಿವಾರಣೆಗೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಬಜೆಟ್‌ನಲ್ಲಿ ಅಗತ್ಯ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ನೀತಿ ಆಯೋಗದ ಸಲಹೆಗಾರೆ ಸಂಯುಕ್ತಾ ಸಮದ್ದಾರ್ ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಮಾತುಕತೆ ವೇಳೆ, ಮುಖ್ಯಮಂತ್ರಿಗಳು ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ರಾಜ್ಯ ಸಾಧಿಸಿದ ಪ್ರಗತಿ ಮತ್ತು ಅವುಗಳನ್ನು ಪೂರೈಸಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಮತ್ತು ಸಂಘಟನೆಗಳನ್ನು ಬಳಸಿಕೊಂಡು ಈ ಪ್ರದೇಶದ ಶಿಕ್ಷಣ, ಆರೋಗ್ಯ ಮತ್ತು ಜೀವನಮಟ್ಟವನ್ನು ಸುಧಾರಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿರ್ಮಾಣ ಹಂತದ ಬೆಂಗಳೂರಿನ ಮಾಲ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ, ದಟ್ಟ ಹೊಗೆ

Sat Jan 8 , 2022
ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ ಬಳಿ ನಿರ್ಮಾಣ ಹಂತದ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಅವರಿಸಿಕೊಂಡಿದೆ. ಕಾರ್ಮಿಕರು ಥಿಯೇಟರ್‌ ನಿರ್ಮಾಣಕ್ಕೆ ಧರ್ಮಾಕೋಲ್‌ ಬಳಸಿ ಕೆಲಸ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದ್ದು, ಅವಘಡಕ್ಕೆ ಇದೇ ಕಾರಣ ಆಗಿರ್ಬೋದು ಎಂದು ಅಂದಾಜಿಸಲಾಗಿದೆ. ಇನ್ನು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರು ಸುರಕ್ಷವಾಗಿ  ಹೊರಗೆ ಬಂದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನ ನಂದಿಸುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

Advertisement

Wordpress Social Share Plugin powered by Ultimatelysocial