ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ

 ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಈ ಭರವಸೆ ನೀಡಿದರು.ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಕಟ್ಟಡ, ಆ ಭಾಗದಿಂದ ಬರುವ ವಿದ್ಯಾರ್ಥಿಗಳು, ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲು ವಸತಿ ನಿಲಯ ನಿರ್ಮಾಣ ಮಾಡಲು ಶೀಘ್ರವೇ ಜಮೀನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಇದರೊಂದಿಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವಂತೆ ನಿಯೋಗ ಮಾಡಿದ ಮನವಿಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದರು.ಮುಖ್ಯಮಂತ್ರಿಗಳ ಭೇಟಿಯ ನಿಯೋಗದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ, ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭಿಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ ಹಾಜರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಹಮದಾಬಾದ್ ಸ್ಫೋಟ ಪ್ರಕರಣ: ಅಪರಾಧಿಗಳನ್ನು ಗಲ್ಲಿಗೇರಿಸದಂತೆ ರಕ್ಷಿಸಲು ಖ್ಯಾತ ವಕೀಲರು ಕಾನೂನು ಹೋರಾಟ ನಡೆಸಲಿದ್ದಾರೆ ಎಂದು ಅರ್ಷದ್ ಮದನಿ ಹೇಳಿದ್ದಾರೆ.

Sat Feb 19 , 2022
  ಸಹರಾನ್‌ಪುರ: 2008ರ ಅಹಮದಾಬಾದ್‌ ಸರಣಿ ಸ್ಫೋಟ ಪ್ರಕರಣದ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲಾಗುವುದು ಎಂದು ಜಮಿಯತ್‌ ಉಲೇಮಾ-ಎ-ಹಿಂದ್‌ ಅಧ್ಯಕ್ಷ ಮೌಲಾನಾ ಅರ್ಷದ್‌ ಮದನಿ ಅವರು ಶನಿವಾರ ಹೇಳಿದ್ದಾರೆ. 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 49 ಅಪರಾಧಿಗಳ ಪೈಕಿ 38 ಮಂದಿಗೆ ಗುಜರಾತ್‌ನ ವಿಶೇಷ ನ್ಯಾಯಾಲಯ ಶುಕ್ರವಾರ ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ. ಶಿಕ್ಷೆಯ ವಿರುದ್ಧ ಬೇಕಾದರೆ ನಾವು ಹೈಕೋರ್ಟ್‌ಗೆ ಹೋಗುತ್ತೇವೆ ಮತ್ತು ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು […]

Advertisement

Wordpress Social Share Plugin powered by Ultimatelysocial