ಬೀದರ್ | ನೌಕರರ ಕ್ರೀಡಾಕೂಟ: ಸಕಲ ಸಿದ್ಧತೆಗೆ ಸೂಚನೆ

ಬೀದರ್: ನಗರದಲ್ಲಿ ಮಾರ್ಚ್ ಮಾ. 15 ಹಾಗೂ 16 ರಂದು ಹಮ್ಮಿಕೊಂಡಿರುವ ರಾಜ್ಯ ಸರ್ಕಾರಿ ನೌಕರರ 2021-22ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧಿಕಾರಿಗಳಿಗೆ ಸೂಚಿಸಿದರು.

 

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕ್ರೀಡಾಕೂಟದ ಪೂರ್ವ ಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳು ಹಾಗೂ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ನೆಹರೂ ಕ್ರೀಡಾಂಗಣದಲ್ಲಿ ಎರಡು ದಿನ ಆಂಬುಲನ್ಸ್, ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

15 ರಂದು ಬೆಳಿಗ್ಗೆ 10ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳ ಪಥ ಸಂಚಲನ ನಡೆಯಲಿದೆ. 16 ರಂದು ಸಂಜೆ 4ಕ್ಕೆ ರಂಗ ಮಂದಿರದಲ್ಲಿ ಸಮಾರೋಪ ಸಮಾರಂಭ ಜರುಗಲಿದೆ. ಶೇ 60 ರಷ್ಟು ಪುರುಷ ಹಾಗೂ ಶೇ 40 ರಷ್ಟು ಮಹಿಳಾ ನಿರ್ಣಾಯಕರನ್ನು ನಿಯೋಜಿಸಬೇಕು. ಕ್ರೀಟಾಪಟುಗಳಿಗೆ ಬೆಳಿಗ್ಗೆ ಉಪಾಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅವರು, ‘ಕ್ರೀಡೆಗಳು ಮಾನಸಿಕ ಒತ್ತಡ ಕಡಿಮೆ ಮಾಡಲು ನೆರವಾಗಲಿವೆ. ಹೀಗಾಗಿ ನೌಕರರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಸಂಘದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಕೀಡಾ ಕಾರ್ಯದರ್ಶಿ ಗಣಪತಿ ಜಮಾದಾರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂಜು ಸೂರ್ಯವಂಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ, ನಗರಸಭೆ, ಆರೋಗ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಗುಂಪು, ವೈಯಕ್ತಿಕ ಸ್ಪರ್ಧೆಗಳು

ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಗುಂಪು ಹಾಗೂ ವೈಯಕ್ತಿಕ ಸ್ಪರ್ಧೆಗಳು ನಡೆಯಲಿವೆ.
ಸ್ಪರ್ಧೆಗಳು: ಫುಟ್‍ಬಾಲ್, ವಾಲಿಬಾಲ್, ಹಾಕಿ, ಟೆಬಲ್ ಟೆನಿಸ್, ಟೆನಿಸ್, ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬ್ಯಾಸ್ಕೆಟ್‍ಬಾಲ್, ಚೆಸ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಜಾವೆಲಿನ್ ಎಸೆತ, ಡಿಸ್ಕಸ್ ಎಸೆತ, ಓಟ, ರಿಲೆ, ಹಿಂದೂಸ್ತಾನಿ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಸಂಗೀತ, ಜಾನಪದ ಗೀತೆ, ಕಥಕ್ ನೃತ್ಯ, ಮಣಿಪುರಿ ನೃತ್ಯ, ಕೂಚುಪುಡಿ ನೃತ್ಯ, ಕಥಕಳ್ಳಿ ನೃತ್ಯ, ಓಡಿಸಿ ನೃತ್ಯ, ಭರತ ನಾಟ್ಯ, ಜಾನಪದ ನೃತ್ಯ ಇತ್ಯಾದಿ.

ನೌಕರರಿಗೆ ಒಒಡಿ ಸೌಲಭ್ಯ

ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರಿಗೆ ಎರಡು ದಿನಗಳ ಒಒಡಿ ಸೌಲಭ್ಯ ದೊರಕಲಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಆಯಾ ತಾಲ್ಲೂಕು ಘಟಕಗಳ ಅಧ್ಯಕ್ಷರ ಬಳಿ ಮಾ. 14 ರ ಸಂಜೆ 5 ರ ವರೆಗೆ ಹೆಸರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ಅಂಗನವಾಡಿ ಕಾರ್ಯಕರ್ತೆಯ ಬಡ್ತಿ ತಾರತಮ್ಯ ಸರಿಪಡಿಸಿ"

Fri Mar 11 , 2022
ಬೆಂಗಳೂರು,ಮಾ.11-ಅಂಗನವಾಡಿ ಕಾರ್ಯಕರ್ತೆಯರಿಂದ ಮೇಲ್ವಿಚಾರಕರ ಹುದ್ದೆಗಳಿಗೆ ಬಡ್ತಿ ಹೊಂದಲು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಸರಳೀಕರಣ ಮಾಡಬೇಕೆಂದು ಶಾಸಕರು ವಿಧಾನಸಭೆಯಲ್ಲಿಂದು ಒತ್ತಾಯಿಸಿದ ಪ್ರಸಂಗ ನಡೆಯಿತು. ಶಾಸಕ ಭೀಮಾನಾಯಕ್.ಎಸ್ ಅವರ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರಿಸಿ, ಮೇಲ್ವಿಚಾರಕರ ಹುದ್ದೆಗೆ ಪಿಯುಸಿ ಮತ್ತು ಪದವಿ ಪಡೆದವರಿಗೆ ಬಡ್ತಿ ನೀಡಲಾಗುತ್ತದೆ ಎಂದು ಹೇಳಿದರು. ಇದಕ್ಕೆ ಆಕ್ಷೇಪಿಸಿದ ಶಾಸಕ ಭೀಮಾನಾಯಕ್ ಮತ್ತು ನಾರಾಯಣಸ್ವಾಮಿ ಅವರು, ಎಸ್ಸೆಸ್ಸೆಲ್ಸಿ ಮುಗಿಸಿದವರು ಸಾಕಷ್ಟಿದ್ದಾರೆ. ಈ ಮೊದಲು […]

Advertisement

Wordpress Social Share Plugin powered by Ultimatelysocial