ಕಾಮಗಾರಿ ವಿಳಂಬ ಹಿನ್ನೆಲೆ  ಬಿಬಿಎಂಪಿ ಮುಖ್ಯ ಆಯುಕ್ತರ  ವಿರುದ್ಧ ಕಿಡಿಕಾರಿದ ಹೈಕೋರ್ಟ್

ಬೆಂಗಳೂರಿನ ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜೀಪುರ ನಡುವೆ ಸಂಪರ್ಕಿಸುವ ಈಜೀಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ತೀವ್ರ ತರಾಟೆಗೆ ಗುರಿಪಡಿಸಿತು.

ಕೋರಮಂಗಲದ ನಿವಾಸಿಯಾಗಿರುವ  ಆದಿನಾರಾಯಣಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ  ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಬಿಬಿಎಂಪಿ ವಕೀಲೆ “ಕಾಮಗಾರಿ ಪೂರ್ಣಗೊಳಿಸಲು ಸಾಕಷ್ಟು ಅಡೆತಡೆಗಳಿದ್ದವು. ಇದೀಗ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯನ್ನು ಕೋರಲಾಗಿದ್ದು, ಅರಣ್ಯ ಇಲಾಖೆ ಕೆಲಸ ಪೂರ್ಣಗೊಳಿಸಿದ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಲಾಗುವುದು. ಆ ಬಗ್ಗೆ ವಿಸ್ತೃತ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದರು.

ಇದರಿಂದ ಆಕ್ರೋಶಗೊಂಡ ಮುಖ್ಯ ನ್ಯಾಯಮೂರ್ತಿಗಳು “2021ರ ಜುಲೈ 29ರ ವಿಚಾರಣೆಯಂದು ನಿರ್ದಿಷ್ಟ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಕುರಿತು ಅಫಿಡವಿಟ್ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಲಾಗಿತ್ತು. ಆ ಬಳಿಕ ಸಾಕಷ್ಟು ಸಮಯದ ನಂತರವೂ ಅಫಿಡವಿಟ್ ಸಲ್ಲಿಸಿಲ್ಲ” ಎಂದರು.

“ನೀವು ಗುತ್ತಿಗೆದಾರರಿಗೆ ದಂಡ ವಿಧಿಸಿದರೆ ಸಾಲದು, ಯೋಜನೆ ವಿಳಂಬದಿಂದ ಸಾರ್ವಜನಿಕರಿಗೆ ಎಷ್ಟು ತೊಂದರೆ ಆಗಿದೆ, ಎಷ್ಟು ಹಣ ಪೋಲಾಗಿದೆ ತಿಳಿದಿದೆಯೇ” ಎಂದು ಪ್ರಶ್ನಿಸಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Samantha Ruth Prabhu | ಬೋಲ್ಡ್‌ ಪ್ರಶ್ನೆಗೆ ಬೋಲ್ಡ್ ಆಗಿ ಉತ್ತರ ಕೊಟ್ಟ ಸ್ಯಾಮ್..!‌ | Speed News Kannada

Wed Jan 12 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial