ಅಪಾರ್ಟ್‌ಮೆಂಟ್‌ಗಳಲ್ಲಿ ಜಿಮ್‌ಗಳು, ಈಜುಕೊಳ ಬಂದ್, ಬಿಬಿಎಂಪಿಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

 

ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಅಪಾರ್ಟ್‌ಮೆಂಟ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿಯನ್ನು  ಬಿಡುಗಡೆ ಮಾಡಿದೆ , ಮಾರ್ಗಸೂಚಿ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಜಿಮ್‌ಗಳು, ಈಜುಕೊಳಗಳು ಮತ್ತು ಇತರ ಕ್ರೀಡಾ ಸೌಲಭ್ಯಗಳನ್ನು  ಬಂದ್ ಮಾಡಿಸಲಾಗುತ್ತಿದೆ.

ಕಳೆದ 10 ದಿನಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಸೋಂಕು ಹೆಚ್ಚಳವಾಗುತ್ತಿರುವ  ಹಿನ್ನೆಲೆ ಸಮುದಾಯ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಕಸರತ್ತು ನಡೆಸಿದೆ. ಇದರಂತೆ ರೆಸಿಡೆಂಟ್ ವೆಲ್​ಫೇರ್​ ಅಸೋಸಿಯೇಷನ್‌ಗಳು, ಅಪಾರ್ಟ್‌ಮೆಂಟ್, ಹೌಸಿಂಗ್ ಸೊಸೈಟಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿ ಹಲವು ಸಲಹೆಗಳನ್ನು ಪಾಲಿಸಲು ಮನವಿಯನ್ನು  ಮಾಡಿಕೊಂಡಿದೆ.

ಮಾರ್ಗಸೂಚಿಯ ಪ್ರಮುಕ ಅಂಶಗಳು…

ಸಾರ್ವಜನಿಕ ಪ್ರದೇಶಗಳಲ್ಲಿ ಮಕ್ಕಳು 24 ಗಂಟೆಗಳ ಕಾಲ ಮಾಸ್ಕ್ ಧರಿಸಿರಬೇಕು. ಅಪಾರ್ಟ್ ಮೆಂಟ್ ಸಂಕೀರ್ಣದಲ್ಲಿ ಮೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾದರೆ, ಅದನ್ನು ಕನಿಷ್ಠ ಏಳು ದಿನಗಳವರೆಗೆ ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ. ಒಂದು ಮನೆಯಲ್ಲಿ ಒಂದು ಪ್ರಕರಣ ವರದಿಯಾದರೆ, ಅದನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ, ಮೂರು ಪ್ರಕರಣಗಳು ವರದಿಯಾದರೆ, ಮಹಡಿಯನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ ಮತ್ತು 10 ಮನೆಗಳಲ್ಲಿ ಕಂಡುಬಂದರೆ, ಇಡೀ ಕಟ್ಟಡವನ್ನೇ ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ. ಪ್ರಕರಣಗಳು 50 ಕ್ಕಿಂತ ಹೆಚ್ಚಾದರೆ, ಸಂಪೂರ್ಣ ಅಪಾರ್ಟ್ಮೆಂಟ್ ಸಂಕೀರ್ಣವನ್ನೇ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ.

ಕಂಟೈನ್ಮೆಂಟ್ ವಲಯ, ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಪರ್ಕದಲ್ಲಿರುವವರು ಹೋಮ್ ಕ್ವಾರಂಟೈನ್‌ಗೆ ಒಳಪಟ್ಟಿರುತ್ತಾರೆ ಮತ್ತು ಆರ್’ಡಬ್ಲ್ಯೂಎ ಮತ್ತು ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಇಂತಹವರ ಮೇಲೆ ಕಣ್ಗಾವಲಿಟ್ಟಿರುತ್ತದೆ. ಎಲ್ಲಾ ಸಂಪರ್ಕಿತರನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ಆರೋಗ್ಯ ಅಧಿಕಾರಿಗಳು ಪ್ರದೇಶಗಳಲ್ಲಿ ಹೋಮ್ ಕ್ವಾರಂಟೈನ್ ಪೋಸ್ಟರ್‌ಗಳನ್ನು ಕೂಡ ಅಂಟಿಸಿರುತ್ತಾರೆ. ರೋಗಲಕ್ಷಣಗಳನ್ನು ಹೊಂದಿರುವ ಅಥವಾ ಕೋವಿಡ್-ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿರುವ ಶಂಕಿತ ನಿವಾಸಿಗಳನ್ನು ಆರೋಗ್ಯ ಅಧಿಕಾರಿಗಳಿಗೆ ವರದಿ ಮಾಡಲಾಗುತ್ತದೆ ಮತ್ತು ಪರೀಕ್ಷೆಗೊಳಪಡಿಸಲಾಗುತ್ತದೆ.

ಇಂತಹವರ ಮೇಲೆ ನಿಗಾ ಇರಿಸಿ  ಕ್ವಾರಂಟೈನ್ ಮಾಡಿ ಪ್ರತ್ಯೇಕಿಸಿರುವ ಕುರಿತು ಎಂದು ಆರ್’ಡಬ್ಲ್ಯೂಎಗಳು ಖಚಿತಪಡಿಸಿಕೊಳ್ಳಬೇಕು. ಅಂತರರಾಷ್ಟ್ರೀಯ ಪ್ರಯಾಣಿಕರು ಮತ್ತು ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಪ್ರಯಾಣದ ಇತಿಹಾಸ ಹೊಂದಿರುವವರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಪಟ್ಟಿದ್ದಾರೆ ಮತ್ತು ನೆಗೆಟಿವ್ ವರದಿಯನ್ನು ಹೊಂದಿದ್ದಾರೆ ಎಂದು ಸಂಘಗಳು ಖಚಿತಪಡಿಸಿಕೊಳ್ಳಬೇಕು.

ಅಪಾರ್ಟ್‌ಮೆಂಟ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡರೆ 50 ಮಂದಿಗಷ್ಟೇ ಅವಕಾಶ ನೀಡುವುದು. ಮನೆಗಳಲ್ಲಿನ ತ್ಯಾಜ್ಯಗಳನ್ನು ಶಿಸ್ತು ಬದ್ಧವಾಗಿ ವಿಲೇವಾರಿ ಮಾಡಬೇಕು. ಲಿಫ್ಟ್‌ಗಳಲ್ಲಿನ ಬಟನ್‌ಗಳನ್ನು ಬಳಕೆಗೆ ತಕ್ಕಂತೆ ಸ್ಯಾನಿಟೈಸ್ ಮಾಡಬೇಕು. ಸತತವಾಗಿ ಹೊರಗಡೆ ಹೋಗಿ ಬರುವ ನಿವಾಸಿಗಳಿಗೆ ಆಗಾಗ್ಗೆ ಕೊರೊನಾ ಪರೀಕ್ಷೆ ನಡೆಸಬೇಕು.

ಇದಷ್ಟೇ ಅಲ್ಲದೆ, ಬಿಬಿಎಂಪಿ ಆರೋಗ್ಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವ ವ್ಯಕ್ತಿಯೊಬ್ಬರನ್ನು ನೇಮಿಸುವಂತೆ ಬಿಬಿಎಂಪಿ ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳು ಮತ್ತು ಆರ್‌ಡಬ್ಲ್ಯೂಎಗಳಿಗೆ ನಿರ್ದೇಶನ ನೀಡಿದೆ.

ಪ್ರತಿಯೊಬ್ಬರೂ ಎರಡು ಡೋಸ್ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತ್ತು ಮಾರಾಟಗಾರರು ಮತ್ತು ವಿತರಣಾ ಏಜೆಂಟ್‌ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.

ಈ ನಡುವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಆವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿರುವ ನರ್ಸಿಂಗ್ ಕಾಲೇಜುಗಳು ಸೇರಿದಂತೆ ಇನ್ನಿತರೆ ಕಾಲೇಜುಗಳ ವಿದ್ಯಾರ್ಥಿ ನಿಲಯಗಳು ಹಾಗೂ ಪಿಜಿಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆಯನ್ನು ನೀಡಲಾಗಿದೆ.

ಶೇ.50-60 ರಷ್ಟು ಕಂಟೈನ್‌ಮೆಂಟ್ ವಲಯಗಳು ಅಪಾರ್ಟ್‌ಮೆಂಟ್ ಸಂಕೀರ್ಣಗಳು, ಪಿಜಿಗಳು ಮತ್ತು ಹಾಸ್ಟೆಲ್‌ಗಳಲ್ಲಿ ಇರುವುದರಿಂದ ಪ್ರತ್ಯೇಕ ಮತ್ತು ಕಠಿಣ ಸಲಹೆಯನ್ನು ನೀಡಲಾಗಿದೆ. ಪಿಜಿಗಳು, ನರ್ಸಿಂಗ್ ಕಾಲೇಜುಗಳು, ಹಾಸ್ಟೆಲ್‌ಗಳು ಮತ್ತು ಇತರ ಕಾಲೇಜುಗಳಿಗೆ ಬಿಬಿಎಂಪಿ ವಿಶೇಷ ಸಲಹೆ ನೀಡಿದೆ. ಯಾವುದೇ ಒಬ್ಬ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾದರೂ ಹಾಸ್ಟೆಲ್ ನಲ್ಲಿರುವ ಪ್ರತಿಯೊಬ್ಬರನ್ನೂ ಪರೀಕ್ಷೆಗೊಳಪಡಿಸಬೇಕು. ಅಲ್ಲದೆ, ಆಡಳಿತ ಮಂಡಳಿಯು ಹಾಸ್ಟೆಲ್ ನಲ್ಲಿರುವ ಪ್ರತೀಯೊಬ್ಬರೂ ಎರಡು ಡೋಸ್ ಲಸಿಕೆ ಪಡೆದುಕೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಪ್ರೋದಿಂದ 30 ಸಾವಿರ ಹೊಸಬರ ನೇಮಕಾತಿ, ಸಾಫ್ಟ್ ವೇರ್ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

Fri Jan 14 , 2022
ಪ್ರಮುಖ ಸಾಫ್ಟ್ ವೇರ್ ಕಂಪನಿ ವಿಪ್ರೊದಿಂದ 30,000 ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ, ಮಾಹಿತಿ ತಂತ್ರಜ್ಞಾನದ ಬೇಡಿಕೆ ಹೆಚ್ಚಗಿರುವ ಕಾರಣ, ಹೊಸಬರಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಿವೆ. 2021 – 22 ನೇ ಸಾಲಿನಲ್ಲಿ 17,500 ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 30,000 ಪ್ರೆಶರ್ ಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಪ್ರೋ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸೌರಭ್ ಗೋವಿಲ್ ಹೇಳಿಕೆ ನೀಡಿದ್ದಾರೆ. ಕಳೆದ 12 ತಿಂಗಳಲ್ಲಿ […]

Advertisement

Wordpress Social Share Plugin powered by Ultimatelysocial