ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಗೆ ಬಿ.ಸಿ ಪಾಟೀಲ್‌ ನೀಡಿದ ಭರವಸೆಗಳಿವು.

ಚಿತ್ರದುರ್ಗ, ಜನವರಿ, 26: ಭಿನ್ನತೆಯಲ್ಲಿ‌ ಏಕತೆಯನ್ನು ಸಾಧಿಸಿದ ರಾಷ್ಟ್ರ ಭಾರತವಾಗಿದೆ. ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.

ಸಂವಿಧಾನ ರಚನೆ ಪೂರ್ಣಗೊಳಿಸಲು 2 ವರ್ಷ 11 ತಿಂಗಳು ಬೇಕಾಯಿತು. ಈ ಸಂವಿಧಾನ 1950 ಜನವರಿ 26 ರಂದು ಜಾರಿಗೆ ಬಂದಿದೆ. ಇದರ ನೆನಪಿಗಾಗಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಅಚರಣೆ ಮಾಡಲಾಗುತ್ತಿದೆ. ಪ್ರಜೆಗಳು ಆಳುವವರನ್ನು ಆಯ್ಕೆ ಮಾಡುತ್ತಾರೆ. ಈ ಮೂಲಕ ಪ್ರಜೆಗಳೇ ಸ್ವತಃ ಆಡಳಿತ ನಡೆಸುವ ಮಾದರಿ‌ ದೇಶದಲ್ಲಿದೆ.

ಚಿತ್ರದುರ್ಗ ಐತಿಹಾಸಿಕ ನಗರ, ವೀರಮದಕರಿ ಆಳಿದ ನಾಡು. ಇಲ್ಲಿನ ಒನಕೆ ಓಬವ್ವ ನಾಡಿಗೆ ಮಾದರಿಯಾಗಿದ್ದಾಳೆ. ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುತ್ತಿದೆ. ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದಿದ ಜಗತ್ತಿನ 3ನೇ ಅತಿ ದೊಡ್ಡ ರಾಷ್ಟ್ರವಾಗಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಲಸಿಕೆ ಕಂಡುಹಿಡಲಾಗಿದೆ. ಹಾಗೆಯೇ ಹೊರದೇಶಗಳಿಗೂ ಲಸಿಕೆ ಸರಬಾರಾಜು ಮಾಡಲಾಗುತ್ತಿದೆ ಎಂದರು.

ಜಿಲ್ಲೆಗೆ ಹಲವು ಯೋಜನೆಗಳ ಜಾರಿಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ಹೊಂದುತ್ತಿದ್ದು, ಭದ್ರ ಮೇಲ್ದಂಡೆ ಯೋಜನೆ, ವೈದ್ಯಕೀಯ ವಿಜ್ಞಾನ ಕಾಲೇಜು, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಯೋಜನೆ ಜಾರಿ ಗೊಳಿಸಲಾಗುತ್ತಿದೆ. ಸರ್ಕಾರದಿಂದ ರೈತರಿಗಾಗಿ ಹಲವು ಯೋಜನೆ ಹಾಕಿಕೊಳ್ಳಲಾಗಿದೆ. ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಕೃಷಿ ವಿ.ವಿ.ಗಳಲ್ಲಿ ರೈತರ ಮಕ್ಕಳಿಗೆ ಶೇಕಡಾ 50ರಷ್ಟು ಸ್ಥಾನ ಮೀಸಲು ಇಡಲಾಗಿದೆ ಎಂದರು.

ಶೀಘ್ರದಲ್ಲೇ ಮುಖ್ಯಮಂತ್ರಿಗಳು ರೈತಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಗರಿಷ್ಠ 5 ಹೆಕ್ಟೇರ್‌ವರೆಗೆ ರೈತರು ಬಳಸುವ ಡೀಸೆಲ್‌ಗೆ ಸಹಾಯಧನ ಒದಗಿಸಲಾಗುವುದು. ಚಿತ್ರದುರ್ಗ ಜಿಲ್ಲೆಯಲ್ಲಿ 200 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ರೈತರಿಗೆ ಪಹಣಿ ಸೇರಿದಂತೆ ಹಲವು ಸೇವೆಗಳನ್ನು ನೀಡಲಾಗುವುದು. ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸಲು ನಮ್ಮ ಕ್ಲೀನಿಕ್ ತೆರೆಯಲಾಗಿದೆ. ಜಿಲ್ಲೆಯ ಕೆರೆಗಳನ್ನು ತುಂಬಿಸಿ ರೈತರ ಕಣ್ಣೀರು ಒರೆಸು ಕೆಲಸ ಮಾಡಲಾಗಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ತವ್ಯ ಪಥದಲ್ಲಿ ದೇಶದ ಸಂಸ್ಕೃತಿ ಅನಾವರಣ:

Thu Jan 26 , 2023
  ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತ ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ದೇಶಾದ್ಯಂತ ಉತ್ಸಾಹದಿಂದ ಆಚರಿಸುತ್ತಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವಿವಿಧ ಸಂಸ್ಕೃತಿ ಬಿಂಬಸುವ ಸ್ತಬ್ಥಚಿತ್ರಗಳ ಅನಾವರಣವಾಗಿವೆ. ವಿಶೇಷವಾಗಿ ಕರ್ನಾಟಕದಿಂದ ನಾರಿ ಶಕ್ತಿ ಪರಿಕಲ್ಪನೆಯಡಿಯಲ್ಲಿ ತನ್ನ ಸ್ತಬ್ಧ ಚಿತ್ರ ಪ್ರದರ್ಶಿಸಿದೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಈ ಬಾರಿ ಒಟ್ಟು 23 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇಂದು ದೇಶದ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶಗಳ 17 ಸ್ತಬ್ಧಚಿತ್ರ, ಮತ್ತು ಕೇಂದ್ರದ […]

Advertisement

Wordpress Social Share Plugin powered by Ultimatelysocial