‘ಕಬ್ಜ’ ಬಿಡುಗಡೆಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ ಉಪ್ಪಿ,ಚಂದ್ರು!

ನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ನಾಳೆ (ಮಾರ್ಚ್ 17) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ಅಂದುಕೊಂಡಂತೆ ಭರ್ಜರಿ ಪ್ರಚಾರವನ್ನೂ ಮಾಡಲಾಗಿದೆ. ಇನ್ನೇನು ಸಿನಿಮಾ ಬಿಡುಗಡೆಗೆ ಇನ್ನೊಂದು ದಿನ ಬಾಕಿ ಇದೆ ಅನ್ನುವಾಗಲೇ ‘ಕಬ್ಜ’ ತಂಡ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದೆ.

‘ಕಬ್ಜ’ ಸಿನಿಮಾದ ಲೀಡ್ ಹೀರೊ ಉಪೇಂದ್ರ, ನಿರ್ದೇಶಕ ಆರ್ ಚಂದ್ರು, ‘ಯುಐ’ ಸಿನಿಮಾದ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸೇರಿದಂತೆ ಹಲವು ಆತ್ಮೀಯರು ಚಾರ್ಟರ್ಡ್ ಫ್ಲೈಟ್ ಮೂಲಕ ತಿರುಪತಿಗೆ ತೆರಳಿದಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’. ಈಗಾಗಲೇ ಮುಂಬೈ,ಹೈದರಾಬಾದ್, ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಮೂಲಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡಲುವಂತೆ ತಿಮ್ಮಪ್ಪನಿಗೆ ಮನವಿ ಮಾಡಿಕೊಳ್ಳಲು ಉಪೇಂದ್ರ, ಆರ್ ಚಂದ್ರ ಹಾಗೂ ಅವರ ತಂಡ ತಿರುಪತಿಗೆ ಪಯಣ ಬೆಳೆಸಿ ತಿಮ್ಮಪ್ಪನ ದರ್ಶನ ಪಡೆದು ಬಂದಿದ್ದಾರೆ.

‘ಕಬ್ಜ’ ಸಿನಿಮಾ ಭಾರತದಾದ್ಯಂತ ಸುಮಾರು 4 ಸಾವಿರ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಅಂದ್ಹಾಗೆ 2023ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿರುವ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದು. ಈ ಕಾರಣಕ್ಕೆ ಇಡೀ ಭಾರತೀಯ ಚಿತ್ರರಂಗವೇ ಕುತೂಹಲದಿಂದ ಎದುರು ನೋಡುತ್ತಿದೆ.

ಕರ್ನಾಟಕದಲ್ಲಿ ‘ಕಬ್ಜ’ ಸಿನಿಮಾ ಕಲೆಕ್ಷನ್ ಮೇಲೆ ಕಣ್ಣಿಟ್ಟಿದೆ. ಕೆಲವು ಚಿತ್ರಮಂದಿರಗಳಲ್ಲಿ ಐದು ಶೋಗಳನ್ನು ಆಯೋಜಿಲಾಗಿದೆ. ಒಂದೇ ಸಿನಿಮಾದಲ್ಲಿ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಶಿವರಾಜ್‌ಕುಮಾರ್ ನಟಿಸಿರುವುದರಿಂದ ಕರ್ನಾಟಕದಲ್ಲಿ ಕ್ರೇಜ್ ಜೋರಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾಗಳ ಮೇಜರ್ ಕಲೆಕ್ಷನ್ ಹಿಂದಿ ಬೆಲ್ಟ್‌ಗಳಲ್ಲಿಯೇ ಆಗುತ್ತೆ. ಅಲ್ಲದೆ ‘ಕಬ್ಜ’ ಸಿನಿಮಾವನ್ನು ಬಾಲಿವುಡ್‌ ವಿತರಕ ಆನಂದ್ ಪಂಡಿತ್ ವಿತರಣೆ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಹಿಂದಿ ಬೆಲ್ಟ್‌ಗಳಲ್ಲಿ ‘ಕಬ್ಜ’ ಕಲೆಕ್ಷನ್ ಎಷ್ಟಾಗುತ್ತೆ? ಅನ್ನೋ ಲೆಕ್ಕಾಚಾರ ಹಾಕುತ್ತಿದ್ದಾರೆ.

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದಂದೇ ಈ ವರ್ಷದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಆಗುತ್ತಿದೆ. ಪುನೀತ್ ರಾಜ್‌ಕುಮಾರ್ ಬರ್ತ್‌ಡೇ ಒಂದೆಡೆಯಾದರೆ, ಇನ್ನೊಂದು ಕಡೆ ‘ಕಬ್ಜ’ ರಿಲೀಸ್ ಸಿನಿಪ್ರಿಯರಿಗೆ ಡಬಲ್ ಸಂಭ್ರಮ ಕೊಟ್ಟಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರತಿದಿನ ರಾತ್ರಿ 2 ಲವಂಗ ಸೇವಿಸಿದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭ ಗೋತ್ತಾ?

Thu Mar 16 , 2023
ನಮ್ಮ ಅಡುಗೆಮನೆಗಳಲ್ಲಿ ಸಾಮಾನ್ಯ ಕಂಡುಬರುವ ಮಸಾಲೆಗಳು ಅಂದ್ರೆ ಜೀರಿಗೆ, ಸಾಸಿವೆ, ಏಲಕ್ಕಿ, ದಾಲ್ ಚಿನ್ನಿ ಮತ್ತೆ ಲವಂಗ. ಇದ್ದು ಅದು ಆಹಾರದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಅಷ್ಟೇ ಅಲ್ಲದೆ ಔಷಧಿ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತದೆ. ಪ್ರತಿ ದಿನ ನಿಯಮಿತವಾಗಿ ಲವಂಗವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಲವಂಗದಲ್ಲಿ ಔಷಧಿ ಗುಣಗಳಿರುವುದರಿಂದ ಆಯುರ್ವೇದದಲ್ಲಿ ಬಳಕೆ ಮಾಡಲಾಗುತ್ತದೆ. ಇಂದು ನಾವು ಲವಂಗ ಸೇವನೆಯಿಂದ ಆರೋಗ್ಯಕ್ಕೆ ಆಗುವ ಲಾಭಗಳ […]

Advertisement

Wordpress Social Share Plugin powered by Ultimatelysocial